ಪಾಲಿಕೆ ಆವರಣದಲ್ಲಿ ಬಿಜೆಪಿ ಪ್ರತಿಭಟನೆ


Team Udayavani, Feb 18, 2017, 1:29 PM IST

dvg5.jpg

ದಾವಣಗೆರೆ: ರಾಜೀವ್‌ಗಾಂಧಿ ಆವಾಸ್‌ ಯೋಜನೆ ಫಲಾನುಭವಿಗಳಿಗೆ ಹಣ ಬಿಡುಗಡೆ, ಕುಡಿಯುವ ನೀರು, ಚರಂಡಿ, ಒಳ ಚರಂಡಿ ಸೌಲಭ್ಯಕ್ಕೆ ಒತ್ತಾಯಿಸಿ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
 
ರಾಜೀವ್‌ಗಾಂಧಿ ಆವಾಸ್‌  ಯೋಜನೆಯಡಿ ನಗರಪಾಲಿಕೆ 15ನೇ ವಾರ್ಡ್‌ನ ಎಚ್‌ಕೆಆರ್‌ ನಗರದ 80 ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಸಾಲ ಮಂಜೂರಾಗಿತ್ತು. ಮಹಾನಗರ ಪಾಲಿಕೆ  ಸಂಬಂಧಿತ ಫಲಾನುಭವಿಗಳಿಗೆ ಆದೇಶಪತ್ರ ನೀಡಿದ್ದರ ಹಿನ್ನೆಲೆಯಲ್ಲಿ ಜನರು ತರಾತುರಿಯಲ್ಲಿ ಇದ್ದಂತಹ ಮನೆ ಕೆಡವಿ, ಹೊಸ ಮನೆ ನಿರ್ಮಾಣಕ್ಕೆ ಮುಂದಾಗಿದ್ದರು.

ಸಾಲ  ಸೋಲ ಮನೆ ಕಟ್ಟಿಕೊಳ್ಳುತ್ತಿರುವ ಫಲಾನುಭವಿಗಳಿಗೆ ಈವರೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಸರ್ಕಾರ ಹಣ ನೀಡುತ್ತದೆ ಎಂಬ ಆಸೆಯಿಂದ ಮನೆ ಕಟ್ಟಿಕೊಳ್ಳುತ್ತಿರುವರು ಒಂದು ಕಡೆ ಹಣ ಇಲ್ಲದೆ ಕೆಲಸ ನಿಲ್ಲಿಸುವ ಸ್ಥಿತಿಗೆ ಬಂದಿದ್ದಾರೆ.

ಇನ್ನೊಂದು ಕಡೆ ಇದ್ದ ಮನೆ ಕೆಡವಿಕೊಂಡಿದ್ದಾರೆ. ಹಾಗಾಗಿ 80 ಕುಟುಂಬಕ್ಕೂ ಹೆಚ್ಚು ಜನರು ಅಕ್ಷರಶಃ ಬೀದಿಯಲ್ಲಿದ್ದಾರೆ. ಸಂಬಂಧಿತರು ಕೂಡಲೇ ಹಣ ಬಿಡುಗಡೆ ಮಾಡಿ, ಹಕ್ಕುಪತ್ರ ನೀಡುವ ಮೂಲಕ ಫಲಾನುಭವಿಗಳಿಗೆ ಸಹಾಯ ಮಾಡಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಹುತೇಕ ವಾರ್ಡ್‌ನಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಇದೆ. ಸಂಬಂಧಿತರು ಗಮನ ಹರಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು. ಒಳ ಚರಂಡಿ ವ್ಯವಸ್ಥೆ ಸರಿಪಡಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಪ್ರಧಾನ ಕಾರ್ಯದರ್ಶಿ ಎನ್‌. ರಾಜಶೇಖರ್‌, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ  ಪಿ.ಸಿ. ಶ್ರೀನಿವಾಸ್‌, ರಾಜನಹಳ್ಳಿ ಶಿವಕುಮಾರ್‌, ಡಿ.ಎಲ್‌. ರಾಮಚಂದ್ರ ನಾಯ್ಕ, ನವೀನ್‌ಕುಮಾರ್‌, ಗೌತಮ್‌ ಜೈನ್‌, ಧನುಷ್‌, ಪ್ರತಾಪ್‌, ನರಸಿಂಹ ಇತರರು ಇದ್ದರು.

ಟಾಪ್ ನ್ಯೂಸ್

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadadd

Congress; ಲೀಡ್ ಕೊಡಿಸದಿರುವ ಸಚಿವರ ರಾಜೀನಾಮೆಗೆ ಬಸವರಾಜ್ ವಿ. ಶಿವಗಂಗಾ ಒತ್ತಾಯ

ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್‌

ರಾಮಾಯಣದ ರಾಮ ದಶರಥನ ಮಗ ಅಲ್ಲ: ಭಗವಾನ್‌

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

ಹೊನ್ನಾಳಿ: ವಿದ್ಯಾದೇಗುಲಗಳಿಗೆ ಬೇಕಿದೆ ಮೂಲ ಸೌಲಭ್ಯ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

MUST WATCH

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

ಹೊಸ ಸೇರ್ಪಡೆ

1-msss

Congress ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

8

ವಿಷ ಸೇವನೆ : ಪದವಿ ವಿದ್ಯಾರ್ಥಿನಿಯ ಸಾವು 

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು

Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು

6

Bantwal: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.