‌ಫಲಿತಾಂಶದಿಂದ ಕಾಂಗ್ರೆಸ್‌ಗೆ ಮರ್ಮಾಘಾತ ­

ತೀವ್ರ ಪೈಪೋಟಿ ನಡುವೆಯೂ ಬಿಜೆಪಿಗೆ ಗೆಲುವು

Team Udayavani, May 23, 2022, 2:14 PM IST

result

ದಾವಣಗೆರೆ: ಕಾಂಗ್ರೆಸ್‌ನ ಘಟಾನುಘಟಿಗಳ ಅಬ್ಬರದ ಪ್ರಚಾರ, ಅಲ್ಪಸಂಖ್ಯಾತ ಸಮುದಾಯದ ಮತಗಳ ವಿಭಜನೆ, ಹೊಸಬರಿಗೆ ಅವಕಾಶ ನೀಡಬಹುದು ಎಂಬ ರಾಜಕೀಯದ ಲೆಕ್ಕಾಚಾರ, ತೀವ್ರ ಪೈಪೋಟಿಯ ನಡುವೆಯೂ ಮಹಾನಗರ ಪಾಲಿಕೆಯ 28 ಮತ್ತು 37ನೇ ವಾರ್ಡ್‌ ಉಪಚುನಾವಣೆಯಲ್ಲಿ ಅನಾಯಾಸವಾಗಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ತನ್ನ ಶಕ್ತಿ ವೃದ್ಧಿಸಿಕೊಂಡಿದೆ.

2019ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಜೆ.ಎನ್. ಶ್ರೀನಿವಾಸ್‌ ದಂಪತಿ ತಮ್ಮನ್ನು ಸರಿಯಾಗಿ ಕಾಣುತ್ತಿಲ್ಲ ಎಂಬ ಬೇಗುದಿಯಿಂದ ಕೈ ಬಿಟ್ಟು ಕಮಲ ಪಾಳೆಯ ಸೇರಿದ ಕೆಲವೇ ದಿನಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಪೈಪೋಟಿಯ ನಡುವೆಯೂ ನಿರೀಕ್ಷೆಯಂತೆ ಗೆಲ್ಲುವ ಮೂಲಕ ಕಾಂಗ್ರೆಸ್‌ ಗೆ ಮರ್ಮಾಘಾತ ಉಂಟು ಮಾಡಿದರೆ, ಬಿಜೆಪಿಯ ಕಮಲ ಉತ್ತರದಲ್ಲಿ ಇನ್ನೂ ಆಳವಾಗಿ ಬೇರೂರುವಂತೆ ಮಾಡಿದ್ದಾರೆ.

ಉಪ ಚುನಾವಣೆ ಘೋಷಣೆ ಆದ ನಂತರದ ಭಾರೀ ರಾಜಕೀಯ ಲೆಕ್ಕಾಚಾರ ನಡೆದವು. ಕಾಂಗ್ರೆಸ್‌ ಅಚ್ಚರಿ ಎನ್ನುವಂತೆ 37ನೇ ವಾರ್ಡ್‌ನಲ್ಲಿ ಶಿಕ್ಷಕಿಯಾಗಿರುವ ರೇಖಾರಾಣಿ ಅಖಾಡಕ್ಕಿಳಿಸುವ ಮೂಲಕ ಬಿಜೆಪಿಗೆ ಸೆಡ್ಡು ಹೊಡೆಯಿತು. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌, ಶಾಸಕ ಡಾ| ಶಾಮನೂರು ಶಿವಶಂಕರಪ್ಪ, ಡಾ| ಪ್ರಭಾ ಮಲ್ಲಿಕಾರ್ಜುನ್‌ ಬಿರುಸಿನ ಪ್ರಚಾರವನ್ನೂ ನಡೆಸಿದರು. ಬಿಜೆಪಿಯ ಈ ವಾರ್ಡ್‌ ಕಳೆದುಕೊಳ್ಳಬಹುದು ಎಂಬ ಮಾತುಗಳು ಪ್ರಬಲವಾಗಿ ಕೇಳಿ ಬಂದವು. ಆದರೂ ಅಂತಿಮವಾಗಿ ಬಿಜೆಪಿ ಗೆಲ್ಲುವ ಮೂಲಕ ಕಾಂಗ್ರೆಸ್‌ ತೆಕ್ಕೆಯಲ್ಲಿದ್ದ ವಾರ್ಡ್‌ ಗಳಿಸಿಕೊಂಡಿತು. ಎಸ್‌. ಶ್ವೇತಾ 793 ಮತಗಳ ಭರ್ಜರಿ ಜಯ ಸಾಧಿಸಿರುವುದು ಮುಂದಿನ ಚುನಾವಣಾ ಲೆಕ್ಕಾಚಾರಕ್ಕೆ ಬಿಜೆಪಿಗೆ ಭಾರೀ ಬೂಸ್ಟ್‌ ನೀಡಿದೆ.

ತೀವ್ರ ಕುತೂಹಲ ಕೆರಳಿಸಿದ್ದ 28ನೇ ವಾರ್ಡ್‌ನಲ್ಲಿ ಬಿಜೆಪಿಯ ಜೆ.ಎನ್. ಶ್ರೀನಿವಾಸ್‌ ಅವರನ್ನು ಸೋಲಿಸಲೇಬೇಕು ಎಂದು ಪಕ್ಕದ ವಾರ್ಡ್‌ನ ಹುಲ್ಮನಿ ಗಣೇಶ್‌ ಅವರನ್ನ ಕಣಕ್ಕಿಳಿಸಲಾಯಿತು. ಜೆಡಿಎಸ್‌ ಅಭ್ಯರ್ಥಿಯನ್ನು ಕಾಂಗ್ರೆಸ್‌ ಗೆ ಸೇರಿಸಿಕೊಳ್ಳಲಾಯಿತು. ಸ್ವತಃ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ಒಂದು ಕಾಲದ ತಮ್ಮ ಶಿಷ್ಯನ ಸೋಲಿಸಲು ಪ್ರಚಾರವನ್ನೂ ನಡೆಸಿದರು. ಅಲ್ಪಸಂಖ್ಯಾತ ಸಮುದಾಯದ ಮತಗಳು ಬಿಜೆಪಿಗೆ ದಕ್ಕಲಾರವು, ವಿಭಜನೆ ಆಗಿ ಕಾಂಗ್ರೆಸ್‌ ಗೆಲ್ಲಲಿದೆ ಎಂಬ ಲೆಕ್ಕಾಚಾರವೂ ಇತ್ತು. ಆದರೆ ಬಿಜೆಪಿಯ ನಡೆಸಿದ ಪ್ರಚಾರ, ಹೆಣೆದ ಗೆಲುವಿನ ತಂತ್ರ ಮತ್ತು ಜೆ.ಎನ್. ಶ್ರೀನಿವಾಸ್‌ ಹೊಂದಿರುವ ಬಲಾಡ್ಯ ಮತ ಬ್ಯಾಂಕ್‌ ಕಮಲ ಅರಳಲು ಸಹಕಾರಿಯಾಯಿತು.

ಈಗ ಸಮಬಲ

ಒಟ್ಟಾರೆ 45 ಸದಸ್ಯತ್ವ ಬಲದ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನಾಲ್ವರು ಪಕ್ಷೇತರರು, ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರ ಬೆಂಬಲದೊಂದಿಗೆ ರಾಜಕೀಯ ಚಾಣಾಕ್ಷತೆಯ ಮೂಲಕ ಅಧಿಕಾರ ನಡೆಸುತ್ತಿದೆ. ಎರಡು ವಾರ್ಡ್‌ಗಳಲ್ಲಿನ ಗೆಲುವು ಬಿಜೆಪಿಗೆ ಕಾಂಗ್ರೆಸ್‌ನೊಂದಿಗೆ ಸಮಬಲ ಸಾಧಿಸಲು ನೆರವಾಗಿದೆ. ಈಗ ಪಾಲಿಕೆಯಲ್ಲಿ ಬಿಜೆಪಿ- ಕಾಂಗ್ರೆಸ್‌ ತಲಾ 20 ಸದಸ್ಯರನ್ನು ಹೊಂದಿವೆ. ಕಳೆದ ಚುನಾವಣೆಯಲ್ಲಿ ಬಿಜೆಪಿಗಿಂತಲೂ ಹೆಚ್ಚು ವಾರ್ಡ್‌ ಗೆದ್ದಿದ್ದರೂ ಕಾಂಗ್ರೆಸ್‌ ಮೇಯರ್‌ ಗಾದಿಗೇರುವ ನಿಟ್ಟಿನಲ್ಲಿ ದಿಟ್ಟ ಪ್ರಯತ್ನ ನಡೆಸಲಿಲ್ಲ. ಪ್ರಮುಖವಾಗಿ ತನ್ನದೇ ಸದಸ್ಯರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗಿದೆ. ಈಗ ಎರಡು ವಾರ್ಡ್‌ ಉಪ ಚುನಾವಣೆಯಲ್ಲಿ ಸೋಲುವ ಮೂಲಕ ಕಾಂಗ್ರೆಸ್‌ ಬಲ 23ರಿಂದ 20ಕ್ಕೆ ಕುಸಿದಿದೆ. ಮುಂದಿನ ದಿನಗಳಲ್ಲಿ ಇನ್ನೂ ಇಬ್ಬರು ಕಾಂಗ್ರೆಸ್‌ಗೆ ಕೈ ಕೊಡಬಹುದು ಎಂಬ ಮಾತು ಕೇಳಿ ಬರುತ್ತಿವೆ. ಅದು ನಿಜವಾದಲ್ಲಿ ಕಾಂಗ್ರೆಸ್‌ ಸ್ಥಿತಿ ಇನ್ನೂ ಶೋಚನೀಯವಾಗಲಿದೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿಯೇ ತೀರುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿಗೆ ಎರಡು ವಾರ್ಡ್‌ಗಳ ಉಪ ಚುನಾವಣೆಯಲ್ಲಿನ ಗೆಲುವು ಟಾನಿಕ್‌. ಇಬ್ಬರು ಸದಸ್ಯರು ತಂದುಕೊಡುವ ಒಂದೊಂದು ಮತ ಗೆಲುವಿನ ಮೆಟ್ಟಿಲುಗಳಾಗಲಿವೆ. ಕಾಂಗ್ರೆಸ್‌ ಈಗಾಲಾದರೂ ಮೈಚಳಿ ಬಿಟ್ಟು ಸನ್ನದ್ಧವಾದರೆ ವಿಧಾನಸಭಾ ಚುನಾವಣೆಯಲ್ಲಿ ಏನಾದರೂ ಆಗಬಹುದು. ಇಲ್ಲದೆ ಹೋದಲ್ಲಿ ಕಮಲ ಪಾಳೆಯದ ಗೆಲುವಿನ ನಾಗಾಲೋಟಕ್ಕೆ ತಡೆ ಇರಲಾರದು ಎಂಬ ಮಾತುಗಳು ಈಗಿನಿಂದಲೇ ಕೇಳಿ ಬರುತ್ತಿವೆ.

-ರಾ. ರವಿಬಾಬು

ಟಾಪ್ ನ್ಯೂಸ್

26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ

26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ

‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್‌

‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್‌

ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ

ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ

ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ

ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್​​ ಅಭಿಷೇಕ ಮಾಡಿ ಯುವಕರು!

ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್​​ ಅಭಿಷೇಕ ಮಾಡಿದ ಯುವಕರು!

ಪಾಕ್‌ನ ಎಲ್ಲೆಲ್ಲೂ ಪೇಪರ್‌ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ

ಪಾಕ್‌ನ ಎಲ್ಲೆಲ್ಲೂ ಪೇಪರ್‌ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere news

ವರ್ಗಾವಣೆಗೊಂಡ ಪ್ರಾಧ್ಯಾಪಕರಿಗೆ ಬೀಳ್ಕೊಡುಗೆ

bsdfbdf

ಅಗ್ನಿಪಥ ಯೋಜನೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಚನ್ನಗಿರಿ : ಹದಗೆಟ್ಟ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಘಟಕ : ಚಿಕಿತ್ಸೆಗಾಗಿ ರೋಗಿಗಳ ಪರದಾಟ

ಚನ್ನಗಿರಿ : ಹದಗೆಟ್ಟ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಘಟಕ : ಚಿಕಿತ್ಸೆಗಾಗಿ ರೋಗಿಗಳ ಪರದಾಟ

davanagere news

ಭಾವೈಕ್ಯತೆಯೇ ನಿಜ ಯೋಗ: ಬಸವಪ್ರಭು ಶ್ರೀ

vSDVSDV

ಜನಮನ ಸೆಳೆದ ಜಲ ಯೋಗ ಝಲಕ್‌

MUST WATCH

udayavani youtube

ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ

udayavani youtube

ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ

udayavani youtube

ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್

udayavani youtube

13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್

udayavani youtube

ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?

ಹೊಸ ಸೇರ್ಪಡೆ

26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ

26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ

‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್‌

‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್‌

ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ

ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ

ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ

ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.