ತುಂಬಿದ ಭದ್ರೆಗೆ ಶಾಸಕರಿಂದ ಬಾಗಿನ

Team Udayavani, Jul 30, 2018, 3:39 PM IST

ಭದ್ರಾವತಿ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತಮ ಮಳೆಯಾಗುತ್ತಿದ್ದು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ ಎಂದು ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು. ಅವರು ಭಾನುವಾರ ಭದ್ರಾ ಜಲಾಶಯದ ಅತಿಥಿ ಗೃಹದ ಮುಂಭಾಗದಲ್ಲಿ ನಡೆದ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ
ಭಾಗವಹಿಸಿ ಮಾತನಾಡಿದರು.

 ಸತತ ಮೂರು ವರ್ಷಗಳ ಮಳೆ ಕೊರತೆಯಿಂದಾಗಿ ಜಲಾಶಯಗಳು ಭರ್ತಿಯಾಗಿರಲಿಲ್ಲ. ಆದರೆ ಈ ಬಾರಿ
ಉತ್ತಮ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿದ್ದು ರೈತರ ಮುಖದಲ್ಲಿ ಸಂತಸ ಕಾಣುವಂತಾಗಿದೆ. ಬೆಂಗಳೂರಿನಲ್ಲಿ ಜಲ ಸಂಪನ್ಮೂಲ ಸಚಿವರೊಂದಿಗೆ ನಡೆದ ಸಭೆಯಲ್ಲಿ ಇಲ್ಲಿನ ಶಾಸಕ ಬಿ.ಕೆ. ಸಂಗಮೇಶ್‌ ಸಹ ಪಾಲ್ಗೊಂಡಿದ್ದು ಭದ್ರಾ ಜಲಾಶಯದಿಂದ ನಿರಂತರವಾಗಿ ಕಾಲುವೆಗಳಿಗೆ ನೀರು ಹರಿಸಲು ಸರ್ಕಾರ ಸಮ್ಮತಿ ನೀಡಿದೆ. ಪ್ರತೀ ವರ್ಷ ಇದೇ ರೀತಿ ಉತ್ತಮ ಮಳೆಯಾಗಿ ನಾವೆಲ್ಲರೂ ಜಂಟಿಯಾಗಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವಂತಾಗಲಿ ಎಂದರು.

ಹರಿಹರದ ಶಾಸಕ ರಾಮಪ್ಪ ಮಾತನಾಡಿ, ಈ ಜಲಾಶಯದಲ್ಲಿ ಅಪಾರ ಪ್ರಮಾಣದ ನೀರನ್ನು ನೋಡಲು ಬರುವ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಯನ್ನು ಮಾಡಿಲ್ಲ. ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತದೆ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದರು.

ಜಲಾಶಯದ ಪರಿಸರವನ್ನು ಇನ್ನಷ್ಟು ಆಧುನೀಕರಣಗೊಳಿಸಿ ವಿಶ್ವೇಶ್ವರಯ್ಯನವರ ನೆನಪಿಗಾಗಿ ಅವರ ಪುತ್ಥಳಿಯನ್ನು ಇಲ್ಲಿ ಪ್ರತಿಷ್ಠಾಪಿಸಬೇಕು ಎಂದರು. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಕ್ಷೇತ್ರದ ಜೀವನದಿ ಭದ್ರೆಗೆ ಕ್ಷೇತ್ರದ ನಾಗರಿಕರು, ಬೆಂಬಲಿಗರು ಹಾಗೂ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

 ಬಾಗಿನ ಸಮರ್ಪಿಸಿ ಮಾತನಾಡಿದ ಅವರು, ನನ್ನನ್ನು ಕ್ಷೇತ್ರದ ಜನತೆ ಶಾಸಕನಾಗಿ ಆರಿಸಿದಾಗಲೆಲ್ಲ ಮಳೆ ಉತ್ತಮವಾಗಿ ಆಗಿ ಭದ್ರಾ ಜಲಾಶಯ ತುಂಬಿದೆ. ನಾನು ಸೋತಾಗ ಜಲಾಶಯ ತುಂಬಿಲ್ಲ. ನಾನು 3ಬಾರಿ ಶಾಸಕನಾದಾಗಾಲೂ ಸಹ ತುಂಬಿದೆ ಎಂದರು.

ತಾವು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿಲ್ಲ. ಆದರೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಕ್ಷೇತ್ರದ ಜನತೆಯ ಆಶೀರ್ವಾದದಿಂದ ನಾನು ಮಂತ್ರಿಯಾಗುವ ನಂಬಿಕೆ ಇದೆ. ಕಾಂಗ್ರೆಸ್‌ ಹೈಕಮಾಂಡ್‌ಗೆ ತಮಗೆ ಸಚಿವ ಸ್ಥಾನ ನೀಡುವ ಸಂಬಂಧ ಈಗಾಗಲೇ ಮನವರಿಕೆ ಮಾಡಲಾಗಿದೆ. ಶ್ರಾವಣ ಮಾಸದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ಇದ್ದು, ತಮಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಶಾಸಕ ಬಿ.ಕೆ. ಸಂಗಮೇಶ್‌ ದೋಣಿಯಲ್ಲಿ ಭದ್ರಾ ಜಲಾಶಯದ ಮಧ್ಯಭಾಗಕ್ಕೆ ತೆರಳಿ ಬಾಗಿನ ಅರ್ಪಿಸಿದರು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ ನಾಯ್ಕ ಮಾತನಾಡಿ, ಭದ್ರಾ ಜಲಾಶಯ ದಾವಣಗೆರೆ, ಶಿವಮೊಗ್ಗ ಕ್ಷೇತ್ರದ ಜನರ ಜೀವನದ ಅವಿಭಾಜ್ಯ ಅಂಗದಂತಾಗಿದ್ದು ಈ ಜಲಾಶಯ ತುಂಬಿರುವುದು ಕ್ಷೇತ್ರದ ಜನತೆ ಹಾಗೂ ರೈತರಿಗೆ ಬಹಳ ಸಂತಸ ತಂದಿದೆ ಎಂದರು.

ವೇದಿಕೆಯಲ್ಲಿ ಏಕೈಕ ಬಿಜೆಪಿ ಶಾಸಕ: ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ ಏರ್ಪಡಿಸಿದ್ದ ಬಾಗಿನ ಸಮರ್ಪಣೆಯ
ವೇದಿಕೆ ಕಾರ್ಯಕ್ರಮದಲ್ಲಿ ದಾವಣಗೆರೆ, ಹರಿಹರ ಕ್ಷೇತ್ರದ ಕಾಂಗ್ರೆಸ್‌ ಶಾಸಕರು ಭಾಗವಹಿಸಿದ್ದರು. ಹಾಗಾಗಿ ಭಾಷಣ
ಮಾಡಿದ ಪ್ರತಿಯೊಬ್ಬರೂ ತಮ್ಮ ಭಾಷಣದಲ್ಲಿ ವೇದಿಕೆ ಮೇಲಿರುವ ಕಾಂಗ್ರೆಸ್‌ ಪಕ್ಷದ ಶಾಸಕರೇ, ನಾಯಕರೇ
ಎಂದು ಭಾಷಣ ಮಾಡುತ್ತಿದ್ದರು. 

ಆದರೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಅಶೋಕ ನಾಯ್ಕ ಅವರು ಯಾವಾಗ
ಕಾಂಗ್ರೆಸ್‌ ಸೇರಿದರೆಂದು ಜನರ ಮಾತನಾಡಿಕೊಳ್ಳುತ್ತಿದ್ದರು. ಸ್ವಾಮೀಜಿಗಳಾದ ಸಿದ್ಧರಾಮೇಶ್ವರ, ಲಕ್ಷ್ಮಣಾರ್ಯ ಹಾಗೂ ಕೃಷ್ಣ ಮೂರ್ತಿ ಸೋಮಯಾಜಿ, ಮೌಲಾನಾ ಸಿದ್ದಿಕ್‌, ಡೆವಿಡಾನ್‌, ಮಾಜಿ ಶಾಸಕ ರಾಜೇಶ್‌, ಹೊನ್ನಾಳಿ ಮಾಜಿ ಶಾಸಕ ಶಾಂತನಗೌಡ, ದಾವಣಗೆರೆ ಮೇಯರ್‌ ಪಲ್ಲಾಗಟ್ಟಿ, ಭದ್ರಾವತಿ ಕಾಂಗ್ರೆಸ್‌ ನಗರಾಧ್ಯಕ್ಷ ಚಂದ್ರೇಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಷಡಾಕ್ಷರಿ,ತಹೀಲ್ದಾರ್‌ ನಾಗರಾಜ್‌, ಮುಖಂಡರಾದ ಬಿ.ಟಿ. ನಾಗರಾಜ್‌, ಮಾಜಿ ಉಪಮೇಯರ್‌ ಮಹಮದ್‌ ಸನಾವುಲ್ಲಾ ಮತ್ತಿತರರು ಇದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ಹೊನ್ನಾಳಿ: ಪಟ್ಟಣದಲ್ಲಿ ಹಲಸಿನ ಹಣ್ಣಿನ ವ್ಯಾಪಾರ ಜೋರಾಗಿ ನಡೆಯುತ್ತಿದ್ದು ಬುಧವಾರ ಪಟ್ಟಣದ ವಾರದ ಸಂತೆಯಾದ ಪ್ರಯುಕ್ತ ಹಲಸಿನ ಹಣ್ಣಿನ ವ್ಯಾಪಾರ ಭರ್ಜರಿಯಾಗಿ...

  • ರಾ.ರವಿಬಾಬು ದಾವಣಗೆರೆ: ಮಂಗಳವಾರ ಗುರುಪೂರ್ಣಿಮೆಯಂದು ಸಂಭವಿಸಿದ ಪಾರ್ಶ್ವ ಚಂದ್ರ ಗ್ರಹಣದ ನೇರ ಪರಿಣಾಮ ಸಿಜೇರಿಯಿನ್‌ ಶಸ್ತ್ರಚಿಕಿತ್ಸೆ ಮೇಲೆ ಉಂಟಾಗಿದೆ!. ಅರೆ...

  • ಹೊನ್ನಾಳಿ: ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಯುಕ್ತಾಶ್ರಯದಲ್ಲಿ ಪ.ಪಂ ಸಭಾಂಗಣದಲ್ಲಿ ಮಂಗಳವಾರ ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯುತ್ಸವ...

  • ದಾವಣಗೆರೆ: ಜಯದೇವ ವೃತ್ತ, ಜಗಳೂರು ಬಸ್‌ ನಿಲ್ದಾಣ, ಹಳೆ ಬಸ್‌ ನಿಲ್ದಾಣ...ದಲ್ಲಿ ಪೊಲೀಸರು ಮಂಗಳವಾರ 42 ಆಪೆ ಆಟೋ ವಶಕ್ಕೆ ತೆಗೆದುಕೊಂಡಿದ್ದಾರೆ. ನಗರ ಪೊಲೀಸ್‌...

  • ದಾವಣಗೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರ್ಪಕವಾಗಿ ಬರ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ(ಸಿಪಿಐ) ಮುಖಂಡರು, ಕಾರ್ಯಕರ್ತರು...

ಹೊಸ ಸೇರ್ಪಡೆ