Udayavni Special

ಶಿಥಿಲ ಶಾಲಾ ಕಟ್ಟಡಕ್ಕೆ ಗ್ರಾಮಸ್ಥರಿಂದಲೇ ಸಿಕ್ತು ಮುಕ್ತಿ !

ಕಟ್ಟಡ ಕೆಡವಲು ಮನವಿ ನೀಡುತ್ತ ದಶಕವೇ ಕಳೆದರೂ ಸ್ಪಂದಿಸದ ಸರ್ಕಾರ

Team Udayavani, Feb 20, 2020, 11:28 AM IST

20-February-04

ಚನ್ನಗಿರಿ: ಶಿಥಿಲಗೊಂಡ ಸರ್ಕಾರಿ ಶಾಲಾ ಕಟ್ಟಡ ಬೀಳುವ ಸ್ಥಿತಿಯಲ್ಲಿದುದನ್ನು ಕಂಡ ಗ್ರಾಮಸ್ಥರು ಒಟ್ಟುಗೂಡಿ ಶಾಲಾ ಕಟ್ಟಡವನ್ನು ನೆಲಸಮಗೊಳಿಸಿ ಮುಂದೆ ನಡೆಯಬಹುದಾಗಿದ್ದ ದೊಡ್ಡ ದುರಂತವನ್ನು ತಡೆದಿದ್ದಾರೆ.

ತಾಲೂಕಿನ ಹೊನ್ನೆಮರದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು ಎರಡು ಶಾಲಾ ಕೊಠಡಿಗಳನ್ನು ಸ್ವಂತ ಖರ್ಚಿನಿಂದ ನೆಲಸಮಗೊಳಿಸುವ ಮೂಲಕ ಮುಂಜಾಗ್ರತೆ ಮೆರೆದಿದ್ದಾರೆ.

ಈ ಸರ್ಕಾರಿ ಶಾಲೆಯಲ್ಲಿ 1 ರಿಂದ 4ನೇ ತರಗತಿವರೆಗೆ ಒಟ್ಟು 14ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಒಬ್ಬರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಶಾಲೆಯಲ್ಲಿ ತಲಾ ಎರಡು ಕೊಠಡಿಗಳ ಎರಡು ಕಟ್ಟಡಗಳಿದ್ದು, ಅದರಲ್ಲಿ ಒಂದು ಕಟ್ಟಡ ಶಿಥಿಲವಾಗಿತ್ತು. ಇನ್ನುಳಿದ ಎರಡು ಕೊಠಡಿಗಳಲ್ಲಿ ಒಂದನ್ನು ಬಿಸಿಯೂಟ ತಯಾರಿಕೆಗೆ ಬಳಸಿಕೊಂಡರೆ, ಮತ್ತೂಂದನ್ನು ತರಗತಿಗಳಿಗೆ ಬಳಸಿಕೊಳ್ಳಲಾಗುತ್ತಿದೆ. ದುಸ್ಥಿಯಲ್ಲಿರುವ ಕೊಠಡಿಗಳಿಂದ ಯಾವುದೇ ಸಂದರ್ಭದಲ್ಲಿ ಮಕ್ಕಳಿಗೆ ಅಪಾಯ ಒದಗಬಹುದು ಎಂದು, ಆಕೊಠಡಿಗಳನ್ನು ನೆಲಸಮಗೊಳಿಸುವಂತೆ ಕಳೆದ 13ವರ್ಷಗಳ ಹಿಂದೆಯಿಂದಲೂ ಶಿಕ್ಷಣ ಇಲಾಖೆ ಅಧಿ ಕಾರಿಗಳಿಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸದೇ ಇರುವುದರಿಂದ ತಮ್ಮ ಮಕ್ಕಳ ಸುರಕ್ಷತೆಗಾಗಿ ಗ್ರಾಮಸ್ಥರೇ ಜೆಸಿಬಿ ಮೂಲಕ ಕೊಠಡಿಗಳನ್ನು ನೆಲಸಮ ಗೊಳಿಸಿದ್ದಾರೆ.

ಶಿಥಿಲ ಕಟ್ಟಡ-ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಹಿಂದೇಟು: ಶಿಥಿಲಗೊಂಡ ಕಟ್ಟಡವು ಶಾಲೆಯ ಪಕ್ಕದಲ್ಲಿಯೇ ಇದ್ದು ಮಕ್ಕಳು ಆಟವಾಡುವಾಗ ಅಥವಾ ಯಾವುದೇ ಸಂದರ್ಭದಲ್ಲಿ ಬೀಳಬಹುದು ಎಂಬ ಭಯದಲ್ಲೇ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದರು. ಇನ್ನೂಳಿದವರು ಈ ವ್ಯವಸ್ಥೆಯಿಂದ ಬೇಸತ್ತು ಸಾಲಸೂಲ ಮಾಡಿ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರ್ಪಡೆ ಮಾಡಿದ್ದಾರೆ. ಒಟ್ಟಾರೆ ಅನಾಹುತ ತಪ್ಪಿಸಲು ಗ್ರಾಮಸ್ಥರೇ ಮುಂದಾಗಿರುವುದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶಿಥಿಲಗೊಂಡಿರುವ ಕಟ್ಟಡದಿಂದ ಮಕ್ಕಳಿಗೆ ಯಾವುದೇ ವೇಳೆ ಅನಾಹುತ ಆಗಬಹುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿದರೂ ಕ್ಯಾರೆ ಎಂದಿಲ್ಲ. 13ವರ್ಷಗಳಿಂದಲೂ ಕಟ್ಟಡ ದುರಸ್ಥಿಯಲ್ಲಿದೆ. ಸದ್ಯ ಕಟ್ಟಡದ ಗೊಡೆಗಳು ಯಾವ ಸಮಯದಲ್ಲಾದರೂ ಬೀಳಬಹುದು ಎಂದು ಆ ಕೊಠಡಿಗಳನ್ನು ನಮ್ಮ ಖರ್ಚಿನಿಂದ ನೆಲಸಮಗೊಳಿಸಿದ್ದೇವೆ. ಎಸ್‌.ಎಸ್‌. ರವಿ,
 ಗ್ರಾಪಂ ಮಾಜಿ ಸದಸ್ಯ.

ಶಾಲೆ ಕಟ್ಟಡದ ದುಸ್ಥಿತಿಯಿಂದ ಶಾಲೆಗೆ ಮಕ್ಕಳನ್ನು ಸೇರಿಸಲು ಪೋಷಕರು ಭಯಭೀತರಾಗಿದ್ದಾರೆ. ಸಕಾರದಿಂದ ಶೈಕ್ಷಣಿಕ ಗುಣಮಟ್ಟ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಂದರೂ ಪ್ರಯೋಜನವಿಲ್ಲ. ಮೊದಲು ಮೂಲಭೂತ ಸೌಲಭ್ಯಗಳ ನಿರ್ಮಾಣ ಮಾಡಬೇಕು. ಆಗ ಮಾತ್ರ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ.
ರುದ್ರೇಶ್‌,
ತಾಲೂಕು ಎನ್‌ಎಸ್‌ಯುಐ ಸಂಚಾಲಕ

ತಾಲೂಕಿನಲ್ಲಿ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳ ಪಟ್ಟಿಯನ್ನು ದಾವಣಗೆರೆ ಡಿಡಿಪಿಐ ಬಳಿ ಕಳುಹಿಸಿಕೊಡಲಾಗಿದೆ. ಅದರಲ್ಲಿ ಹೊನ್ನೆಮರದಹಳ್ಳಿ ಶಾಲೆ ಕೂಡ ಇದೆ. ಈ ಕುರಿತು ಗ್ರಾಮಸ್ಥರು ಕೂಡ ಗಮನಕ್ಕೆ ತಂದಿದ್ದರು. ಡಿಡಿಪಿಐ ಆದೇಶಕ್ಕಾಗಿ ಕಾಯುತ್ತಿದ್ದೆವು. ಅಷ್ಟರಲ್ಲಿ ಗ್ರಾಮಸ್ಥರೇ ನನ್ನ ಗಮನಕ್ಕೆ ತಂದು ಶಾಲಾ ಕೊಠಡಿಯನ್ನು ನೆಲಸಮಗೊಳಿಸಿದ್ದಾರೆ.
ಮಂಜುನಾಥ್‌,
ಕ್ಷೇತ್ರ ಶಿಕ್ಷಣಾಧಿಕಾರಿ, ಚನ್ನಗಿರಿ.

ಶಶೀಂದ್ರ ಸಿ.ಎಸ್‌. ಚನ್ನಗಿರಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

Leopard-climbs-tree

ವಿಡಿಯೋ: ಬೇಟೆಯೊಂದಿಗೆ ಅನಾಯಾಸವಾಗಿ ದೈತ್ಯಗಾತ್ರದ ಮರ ಏರಿದ ಚಿರತೆ, ನೆಟ್ಟಿಗರು ಫುಲ್ ಫಿದಾ

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್: ಮಂಗನ ಕಾಯಿಲೆ ತಡೆಗೆ ಮಲೆನಾಡಿನಲ್ಲಿ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

09-April-4

ವಾಹನ ಸೀಜ್‌ ಆದ್ರೆ ಕಷ್ಟ ಕಷ್ಟ

09-April-3

ಮಲ್ಲಾಪುರ ಕೆರೆಯಲ್ಲಿ ಮೀನುಗಳ ಸಾವು

08-April-4

ಹಳ್ಳಿಗಳಿಗೆ ಭೇಟಿ ನೀಡಿ ಕೊರೊನಾ ಜಾಗೃತಿ

08-April-3

ಲಾಕ್‌ಡೌನ್‌ ಉಲ್ಲಂಘಿಸಿದ್ರೆ ಕಠಿಣ ಕ್ರಮ

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

09-April-18

ಅಧಿಕಾರಿಗಳ ಕಾರ್ಯವೈಖರಿಗೆ ಬೇಸರ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

09-April-17

ನಗರದಲ್ಲೇ ಸಿದ್ಧಗೊಳ್ಳುತ್ತಿವೆ ವೈದ್ಯರಿಗೆ ಪಿಪಿಇ ಕಿಟ್‌