ಕಾಫಿನಾಡಿನಲ್ಲಿ ನಿರಂತರ ಮಳೆ

ತುಂಗಾ, ಭದ್ರಾ, ಹೇಮಾವತಿ ನೀರಿನಮಟ್ಟ ಹೆಚ್ಚಳ

Team Udayavani, Jul 22, 2021, 6:09 PM IST

22-12

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಾರೀ ಗಾಳಿಯೊಂದಿಗೆ ವ್ಯಾಪಕ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಹಳ್ಳಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.

ಕಳೆದೆರಡು ದಿನಗಳಿಂದ ಸ್ವಲ್ಪಮಟ್ಟಿಗೆ ಕ್ಷೀಣಿಸಿದ್ದ ಮಳೆ ಬುಧವಾರದಿಂದ ಮತ್ತೆ ತೀವ್ರತೆ ಪಡೆದುಕೊಂಡಿದ್ದು ಜಿಲ್ಲಾದ್ಯಂತ ಮೋಡಕವಿದ ವಾತಾವರಣವಿದ್ದು, ಗಾಳಿಯೊಂದಿಗೆ ತೀವ್ರ ಮಳೆಯಾಗುತ್ತಿದೆ. ಜಿಲ್ಲೆಯ ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ಮೂಡಿಗೆರೆ ಭಾಗದಲ್ಲಿ ವ್ಯಾಪಕ ಮಳೆ ಯಾಗುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಈ ಭಾಗದ ಹಳ್ಳಕೊಳ್ಳ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಕಳಸ, ಹೊರನಾಡು, ಕುದುರೆ ಮುಖ, ಬಾಳೆಹೊಳೆ, ಮೂಡಿಗೆರೆ, ಬಾಳೂರು ಕೊಟ್ಟಿಗೆಹಾರ, ಜಾವಳಿ, ಚಾರ್ಮಾಡಿಘಾಟಿ ಬಣಕಲ್‌ ಸುತ್ತಮುತ್ತ ನಿರಂತರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯವಾಗಿದೆ.

ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಸುತ್ತಮುತ್ತ ಬಾರೀ ಮಳೆಯಾಗುತ್ತಿದೆ. ನರಸಿಂಹರಾಜಪುರ, ಬಾಳೆಹೊನ್ನೂರು, ಕೈಮರ, ಕೊಪ್ಪ ಜಯಪುರ, ನಾರ್ವೇ ಸುತ್ತಮುತ್ತ ಬಾರೀ ಮಳೆಯಾಗುತ್ತದೆ. ಮಳೆಗೆ ಬಾಳೆಹೊನ್ನೂರು ದೊಡ್ಡ ಮುಂಡುಗ ಸಮೀಪ ಸೇತುವೆ ಬಳಿ ಮಳೆನೀರಿಗೆ ಮಣ್ಣು ಕೊಚ್ಚಿ ಹೋಗಿದ್ದು ದೊಡ್ಡ ವಾಹನಗಳ ಸಂಚಾರ ಸ್ಥಗಿತ ಗೊಂಡಿದೆ. ಚಾರ್ಮಾಡಿ ಘಾಟಿ ಸುತ್ತಮುತ್ತ ಬಾರೀ ಮಳೆಯಾಗುತ್ತಿದ್ದು, ಮಳೆಯ ತೀವ್ರತೆಗೆ ಈ ಪ್ರದೇಶ ಸುತ್ತಮುತ್ತ ಮಂಜುಮುಸುಕಿದ ವಾತವರಣ ನಿರ್ಮಾಣವಾಗಿದೆ.

ಭದ್ರಾನದಿ ತುಂಬಿ ಹರಿಯುತ್ತಿದ್ದು ಕಳಸ ಹೊರನಾಡು ಸಂಪರ್ಕ ಕಲ್ಪಿಸುವ ಬಾಳೆಹೊಳೆ ಸೇತುವೆ ಮುಳುಗಲು ಕೆಲವೇ ಅಡಿಗಳು ಬಾಕಿ ಇದೆ. ಚಿಕ್ಕಮಗಳೂರು ನಗರ ಸೇರಿದಂತೆ ಸುತ್ತಮುತ್ತ ಮೋಡಕವಿದ ವಾತಾವರಣವಿದ್ದು, ಆಗಾಗ್ಗೆ ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಕಡೂರು, ಬೀರೂರು, ತರೀಕೆರೆ ಭಾಗದಲ್ಲೂ ಮೋಡಕವಿದ ವಾತಾವರಣವಿದ್ದು, ಆಗಾಗ್ಗ ಮಳೆಯಾಗುತ್ತಿದೆ. ಮಳೆಯೊಂದಿಗೆ ಶೀತಗಾಳಿ ಬೀಸುತ್ತಿದ್ದು ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲಾದ್ಯಂತ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ನದಿಪಾತ್ರದಲ್ಲಿ ಜನ ಸಂಚರಿಸದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ನಿರಂತರ ಮಳೆಯ ನಡುವೆ ಕೃಷಿ ಚಟುವಟಿಕೆಯೂ ವೇಗ ಪಡೆದುಕೊಂಡಿದೆ.

ಟಾಪ್ ನ್ಯೂಸ್

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere news

ಸರ್ಕಾರಿ ನೌಕರರ ಕ್ರೀಡಾಕೂಟದ ಕಲರವ

davanagere news

ವಿದ್ಯಾರ್ಥಿಗಳಿಗೆ ಮಧ್ಯಾಹದ ಬಿಸಿಯೂಟ ಪುನಾರಂಭ

davanagere news

ಸಿಎಂ ಬೊಮ್ಮಾಯಿ ಬಹಿರಂಗ ಕ್ಷಮೆಯಾಚಿಸಲಿ

honnali news

ಹೊನ್ನಾಳಿ ತಾಲೂಕಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ

covid news

ಇಬ್ಬರು ಸೋಂಕಿತರು ಗುಣಮುಖ

MUST WATCH

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

udayavani youtube

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸ್ವಚ್ಛಂದ ವಿಹಾರ

udayavani youtube

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

ಹೊಸ ಸೇರ್ಪಡೆ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

Apply for Taluk Rajyotsava Award

ತಾಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

1-ttt

ತಿಪಟೂರು: ಸಿಡಿಲು ಬಡಿದು ಕುರಿಗಾಹಿ ದುರ್ಮರಣ, ಇನ್ನೋರ್ವ ಗಂಭೀರ

Display a Quiet Image at the State Festival

ರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.