ಬಾಲಕಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ

Team Udayavani, Apr 17, 2018, 11:54 AM IST

dvg-1.jpg

ದಾವಣಗೆರೆ: ಜಮ್ಮುವಿನ ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕೃತ್ಯ ಖಂಡಿಸಿ ಕೋಮು ಸೌಹಾರ್ದ ವೇದಿಕೆ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು. ಪಾಲಿಕೆ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಈ ಕೃತ್ಯದಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು
ಆಗ್ರಹಿಸಿದರು.

ಈ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಅನೀಸ್‌ ಪಾಷಾ, ಮುಗ್ಧ ಬಾಲಕಿಯನ್ನು ದೇವಸ್ಥಾನದಲ್ಲಿ ಕೂಡಿಹಾಕಿ, ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಇಡೀ ಮಾನವ ಕುಲಕ್ಕೆ ಕಂಟಕಪ್ರಾಯರು. ಈ ಘಟನೆ ದೇಶದ ಮಕ್ಕಳು, ಪೋಷಕರ ಮೇಲೆ ಗಾಢ ಪರಿಣಾಮ ಬೀರಿದೆ. ಇಂತಹ ನೀಚ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಕುರಿ ಕಾಯುವ ಅಲೆಮಾರಿಗಳು ಊರಿಗೆ ಬಾರದಂತೆ ತಡೆಯುವ ಸಲುವಾಗಿ ಇಂತಹ ಕೃತ್ಯ ಎಸಗಿಸಿದ್ದಾರೆ. ಬಾಲಕಿಯನ್ನು ಅಪಹರಿಸಿ, ದೇವಸ್ಥಾನದ ಕೋಣೆಯಲ್ಲಿ ಕೂಡಿಹಾಕಿ, ದುಷ್ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಸತ್ತ ಬಾಲಕಿ ಶವ ಹೂಳಲು ಊರಿನವರು ಅವಕಾಶ ನೀಡಲಿಲ್ಲ ಎನ್ನಲಾಗಿದೆ. ಇದು ಅತ್ಯಂತ ಅಮಾನವೀಯ ಕೃತ್ಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
 
ಕೆಲ ಹಿಂದು ಪರ ಸಂಘಟನೆಗಳು ಆರೋಪಿಗಳ ಪರ ನಿಂತಿವೆ. ನಮ್ಮ ದೇಶದ ಸ್ವಾಸ್ಥ್ಯ, ಸಂಸ್ಕೃತಿ ಹಾಳುಗೆಡುವುವ ದುಷ್ಕರ್ಮಿಗಳ ಪರ ನಿಂತಿರುವವರ ವಿರುದ್ಧ ಸಹ ಕ್ರಮ ವಹಿಸಬೇಕಿದೆ. ಕೇಂದ್ರ ಸರ್ಕಾರ ಬೇಟಿ ಬಚಾವೋ, ಬೇಟಿ ಪಢಾವೋ ಎಂಬ ಯೋಜನೆ ಜಾರಿ ಮಾಡಿದೆ. ಆದರೆ, ಇಂತಹ ದುಷ್ಕೃತ್ಯಗಳ ತಡೆಗೆ ಯಾವುದೇ ಕ್ರಮ ವಹಿಸಲ್ಲ ಎಂದು ಅವರು ಆರೋಪಿಸಿದರು.

ವೇದಿಕೆಯ ಅಧ್ಯಕ್ಷ ಇಸ್ಮಾಯಿಲ್‌ ದೊಡ್ಡಮನಿ, ಫಾಸ್ಟರ್‌ ರಾಜಶೇಖರ್‌, ಕತ್ತಲಗೆರೆ ಡಿ. ತಿಪ್ಪಣ್ಣ, ವಿಜಯಕುಮಾರ್‌, ಕತ್ತಲಗೆರೆ ಡಿ. ತಿಪ್ಪಣ್ಣ, ವಿಜಯಕುಮಾರ್‌, ಅಹಮದ್‌ ಷರೀಫ್‌, ರಾಘು ದೊಡ್ಡಮನಿ, ಬಿ.ಟಿ. ವಿಶ್ವನಾಥ್‌ ಪ್ರತಿಭಟನೆ ನೇತೃತ್ವ ವಹಿಸಿದ್ದರು. ದುಷ್ಕೃತ್ಯ ಖಂಡಿಸಿ, ಆರೋಪಿಗಳಿಗೆ ಕಠಿಣಿ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ರವಾನಿಸಲಾಯಿತು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.