ಚಂದ್ರು ಸಾವು ಪ್ರಕರಣ: ತನಿಖಾ ವರದಿ ಬಂದ ಬಳಿಕವೇ ಮುಂದಿನ ತೀರ್ಮಾನ; ಸಿಎಂ ಬೊಮ್ಮಾಯಿ
ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ
Team Udayavani, Nov 9, 2022, 12:15 PM IST
ದಾವಣಗೆರೆ : ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಎಲ್ಲ ರೀತಿಯ ತನಿಖಾ ವರದಿಗಳು ಬಂದ ಬಳಿಕವೇ ಪ್ರಕರಣವನ್ನು ಯಾವ ರೀತಿ ಹಾಗೂ ಯಾವ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂಬ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಪ್ರಕರಣಕ್ಕೆ ಸಂಬಂಧಿಸಿ ಮರಣೋತ್ತರ ಪರೀಕ್ಷೆ ವರದಿ, ವಿಧಿವಿಜ್ಞಾನ ಪ್ರಯೋಗಾಲಯ ವರದಿ ಹಾಗೂ ಪ್ರಕರಣದ ಮರುಸೃಷ್ಟಿ ತನಿಖಾ ವರದಿ ಆಧರಿಸಿಯೇ ಮುಂದಿನ ನಿರ್ಧಾರಕ್ಕೆ ಬರಲಾಗುವುದು. ಎಲ್ಲ ಆಯಾಮಗಳಲ್ಲಿ ನಡೆದ ತನಿಖಾ ವರದಿ ಬರುವವರೆಗೂ ಅಧಿಕಾರಿಗಳು ಯಾವುದೇ ನಿರ್ಧಾರ ಬರಬಾರದು ಎಂದರು.
ರೇಣುಕಾಚಾರ್ಯ ನನ್ನ ಸಹೋದರ ಇದ್ದಂತೆ. ನಾನು ಸಿಎಂ ಆಗಿ ಇಲ್ಲಿಗೆ ಬಂದಿಲ್ಲ. ನನ್ನ ಸಹೋದರನ ಮಗ ತೀರಿಕೊಂಡ ದುಃಖದಲ್ಲಿ ಬಂದಿದ್ದೇನೆ. ಪ್ರಕರಣದ ಸತ್ಯಾಸತ್ಯತೆಯನ್ನು ಕಂಡು ಹಿಡಿಯುವವರೆಗೆ ವಿಶ್ರಮಿಸುವುದಿಲ್ಲ.ಕೂಲಂಕಷವಾಗಿ ತನಿಖೆ ಮಾಡಲಾಗುವುದು ಎಂದರು.
ಇದನ್ನೂ ಓದಿ : ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುವ ವೇಳೆ ಹೃದಯಾಘಾತಗೊಂಡು ರಿಕ್ಷಾ ಚಾಲಕ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
“ನೀವು ಯಾರನ್ನಾದರೂ ಡೇಟ್ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್
ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್, ಲಾಂಗ್ ಪತ್ತೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ