ಪಟ್ಟಣಕ್ಕೊಂದೇ ಗಣಪ ಪ್ರತಿಷ್ಠಾಪಿಸಿದರೆ ಒಗ್ಗಟ್ಟು: ಮೇಘರಾಜ್‌

Team Udayavani, Aug 23, 2018, 3:35 PM IST

dvg-3.jpg

ಮಲೇಬೆನ್ನೂರು: ಪಟ್ಟಣದಲ್ಲಿ ಐಕ್ಯತೆ ಭಾವನೆ ಮೂಡಿಸುವ ಸಲುವಾಗಿ ಒಂದೇ ಗಣಪನನ್ನು ಪ್ರತಿಷ್ಠಾಪಿಸಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಬೇಕೆಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ನಡೆದ ಸಭೆಯಲ್ಲಿ ಪಿಎಸ್‌ಐ ಮೇಘರಾಜ್‌ ಅಭಿಪ್ರಾಯ ವ್ಯಕ್ತಪಡಿಸಿದರು.

 ಹಲವಾರು ಗಣಪತಿಗಳನ್ನು ಪ್ರತಿಷ್ಠಾಪಿಸುವುದರ ಬದಲಾಗಿ ಒಂದೇ ಗಣಪತಿಯನ್ನು ಪ್ರತಿಷ್ಠಾಪಿಸಿದಾಗ ಪ್ರತಿಯೊಬ್ಬರೂ ಒಂದೆಡೆ ಸೇರುವುದರಿಂದ ಒಗ್ಗಟ್ಟು ಇರುತ್ತದೆ ಎಂದರು. ಪಟ್ಟಣದ ಪ್ರತಿಭೆಗಳಿಗೆ ಕಲೆ ಅನಾವರಣಕ್ಕೆ ಉತ್ತಮ ವೇದಿಕೆ ದೊರಕುತ್ತದೆ. ಎಷ್ಟೇ ದಿನ ಗಣಪನನ್ನು ಪ್ರತಿಷ್ಠಾಪಿಸಿದರೂ ನಾವು ಭದ್ರತೆ ನೀಡಲು ಸಿದ್ಧ ಎಂದು ಪಿಎಸ್‌ಐ ಮೇಘರಾಜ್‌ ಸಭೆಯಲ್ಲಿ ತಿಳಿಸಿದರು.
 
ಈಗಾಗಲೇ ಗಣಪತಿ ತಯಾರಕರಿಗೆ ಮುಂಗಡ ಹಣ ನೀಡಲಾಗಿದ್ದು, ಒಂದೇ ಗಣಪ ಪ್ರತಿಷ್ಠಾಪಿಸಲು ಹೇಗೆ ಸಾಧ್ಯ ಎಂದು ಗಣೇಶೋತ್ಸವ ಮಂಡಳಿ ಪದಾಧಿಕಾರಿಗಳು ತಮ್ಮ ಸಮಸ್ಯೆ ಹೇಳಿದಾಗ, ಹಾಗಿದ್ದಲ್ಲಿ ಈ ಬಾರಿ ಗಣಪನನ್ನು ಪ್ರತಿಷ್ಠಾಪಿಸಿರಿ. ಊರೊಟ್ಟಿನಿಂದ ಒಂದು ಗಣಪ ಇಡೋಣ. ಗಣಪನ ವಿಸರ್ಜನೆ ಮೆರವಣಿಗೆ ಮಾತ್ರ ಎಲ್ಲರೂ ಒಂದೇ ದಿನ ನೆರವೇರಿಸಬೇಕು. ಬೇರೆ ದಿನ ವಿಸರ್ಜಿಸುವವರು ಯಾವುದೇ ರೀತಿಯ ಆಡಂಬರದ ಮೆರವಣಿಗೆ ಮಾಡದೆ ಸರಳವಾಗಿ ವಿಸರ್ಜಿಸಬೇಕು ಎಂದು ಪಿಎಸ್‌ಐ ಸಲಹೆ ನೀಡಿದರು.

ಈಗಾಗಲೇ ಚನ್ನಗಿರಿಯಲ್ಲಿ ಒಂದೇ ಗಣಪ ಪ್ರತಿಷ್ಠಾಪಿಸುವ ಪದ್ಧತಿ ಪ್ರಾರಂಭಿಸಿ ಯಶಸ್ವಿಯೂ ಆಗಿದ್ದಾರೆ. ಇಲ್ಲೂ ಒಂದೇ ಗಣಪ ಪ್ರತಿಷ್ಠಾಪಿಸುವ ಮೂಲಕ ಪೊಲೀಸ್‌ ಕರೆಗೆ ಕೈ ಜೋಡಿಸಿ ಎಂದು ವಿನಂತಿಸಿದರು. ಸಭೆಯಲ್ಲಿ ಪಟ್ಟಣದ ಎಲ್ಲ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ತಮ್ಮ ಅಭಿಪ್ರಾಯ ತಿಳಿಸಿ ಪೊಲೀಸರ ಕರೆಗೆ ಸಮ್ಮತಿಸಿದರು. ಒಂದೇ ಗಣಪತಿ ಪ್ರತಿಷ್ಠಾಪಿಸಲು ಕಮಿಟಿ ರಚಿಸಬೇಕು. ಕಮಿಟಿ ರಚಿಸುವ ಬಗ್ಗೆ ಚರ್ಚಿಸಲು ಶುಕ್ರವಾರ ಸಭೆ ಸೇರಲು ತೀರ್ಮಾನಿಸಲಾಯಿತು. 

ಸಭೆಯಲ್ಲಿ ಧರ್ಮಣ್ಣ, ಮಂಜಣ್ಣ, ಎಳೇಹೊಳೆ ಕುಮಾರ, ಬೆನಕೊಂಡಿ ರಾಜೇಶ್‌, ಭಾನುವಳ್ಳಿ ಸುರೇಶ್‌, ಹಿಟ್ಟಿನ ಗಿರಣಿ ಶಾಂತ್‌ರಾಜ್‌, ರಂಗನಾಥಾಚಾರ್‌, ಮಹೇಶ್‌, ಸುಬ್ಬಿರಾಜಪ್ಪ, ಎ.ಕೆ. ರಂಗನಾಥ್‌, ನವೀನ, ಲೊಕೇಶ್‌, ದೊರೆಸ್ವಾಮಿ, ಮಹಲಿಂಗಪ್ಪ, ಬೆಸ್ಕಾಂ, ಪುರಸಭೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

7-chitradurga

ಒತ್ತಡಕ್ಕೆ ಮಣಿಯದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಾಗಲಿ; ಬಿ.ವೈ.ವಿಜಯೇಂದ್ರ

On Camera: ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

On Camera: ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Shamanuru Shivashankarappa

Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು

MUST WATCH

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

ಹೊಸ ಸೇರ್ಪಡೆ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

9-bellary

Ballari: ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.