ಸಂವಿಧಾನದ ಪರಿಪಾಲನೆ ಎಲ್ಲರ ಕರ್ತವ್ಯ

Team Udayavani, Nov 27, 2021, 11:42 AM IST

ಸಂವಿಧಾನದ ಪರಿಪಾಲನೆ ಎಲ್ಲರ ಕರ್ತವ್ಯ

ಹರಿಹರ: ಸಂವಿಧಾನದ ಪರಿಪಾಲನೆ ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾ ಧೀಶರಾದ ಯಶವಂತ್‌ ಕುಮಾರ್‌ ಆರ್‌. ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಮರಿಯಾ ನಿವಾಸ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಸಂದರ್ಭದಲ್ಲಿ ಸಂವಿಧಾನದ ಆಶೋತ್ತರಗಳಿಗೆ ಧಕ್ಕೆ ಬಾರದಂತೆ ನಾವೆಲ್ಲಾ ಜಾಗೃತಿ ವಹಿಸಬೇಕಿದೆ ಎಂದರು.

ನಮ್ಮಲ್ಲೆರ ಹಕ್ಕುಗಳ ಮೂಲ ಸಂವಿಧಾನ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯ ಮಾತ್ರವಲ್ಲದೆ ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ನಾವು ಸಂವಿಧಾನದ ಮೂಲಕ ಪಡೆದಿದ್ದೇವೆ. ಆದ್ದರಿಂದ ಸಂವಿಧಾನವನ್ನು ಓದಿಕೊಂಡು ಅದರಂತೆ ನಡೆದುಕೊಳ್ಳುವ ಮೂಲಕ ದೇಶದ ಘನತೆ, ಗೌರವ ಹೆಚ್ಚಿಸುವುದು ಎಲ್ಲರ ಜವಾಬ್ದಾರಿ ಎಂದರು.

ಎಪಿಪಿ ಪ್ರವೀಣ್‌ ಕುಮಾರ್‌ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲೆ ದೇಶಾಭಿಮಾನ ಬೆಳೆಸುವಂತ ಚಟುವಟಿಕೆ, ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದರು. ವಕೀಲರಾದ ಶುಭಾ ಇವರು ಮಾತನಾಡಿ, ಸಂವಿಧಾನದ ಕರಡು ಸಮಿತಿಯ ಅಪಾರ ಪರಿಶ್ರಮದಿಂದ ರಚನೆಯಾಗಿದೆ. ಇದಕ್ಕೆ ಪೂರಕವಾಗಿ ಪ್ರತಿಯೊಬ್ಬರೂ ಸೌಹಾರ್ದತೆಯಿಂದ ಜೀವಿಸಲು ಕಲಿಯಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಸಿದ್ದಪ್ಪ ಮಾತನಾಡಿ, ವಿದ್ಯಾರ್ಥಿ ಬದುಕು ಜೀವನ ಕಲೆ ಕಲಿಯುವಂತಹ ವಯಸ್ಸು, ಈ ಹಂತದಲ್ಲಿ ನಾವು ಏನನ್ನು ಕಲಿಯುತ್ತೇವೆಯೋ ಅವುಗಳೇ ಮುಂದಿನ ಜೀವನಕ್ಕೆ ಮಾರ್ಗದರ್ಶನವಾಗುತ್ತದೆ ಎಂದರು.

ಮರಿಯಾ ನಿವಾಸ ಶಾಲೆಯ ವ್ಯವಸ್ಥಾಪಕ ಫಾದರ್‌ ಡಾ|ಅಂತೋನಿ ಪೀಟರ್‌ ಮಾತನಾಡಿ, ಮಕ್ಕಳ ಪಾಠ, ಪ್ರವಚನಗಳ ಜೊತೆಯಲ್ಲಿ ಭಾರತದ ಸಂವಿಧಾನದ ಪರಿಚಯ ಮಾಡಿಕೊಡುವ ಇಂತಹ ಕಾರ್ಯಕ್ರಮ ಮಕ್ಕಳಿಗೆ ಪ್ರಯೋಜನಕಾರಿ ಎಂದರು.

ವಕೀಲರ ಸಂಘದ ಅಧ್ಯಕ್ಷ ರುದ್ರಗೌಡ ಪಿ.ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ರಾಜಶೇಖರ್‌ ಸಂವಿಧಾನದ ಪೀಠಿಕೆ ಬೋ ಧಿಸಿದರು. ಮುಖ್ಯ ಶಿಕ್ಷಕಿ ಸಿಸ್ಟರ್‌ ಎಲಿಜಬೆತ್‌ ಜಯಮೇರಿ, ಸಿಸ್ಟರ್‌ ಪ್ರೀತಿ, ಶಿಕ್ಷಕರಾದ ನಂದಕುಮಾರಿ, ವರ್ಜಿನಿಯಾ ಮೇರಿ, ಥಾಮಸ್‌, ಡಾ|ಫ್ರಾನ್ಸಿಸ್‌ ಇತರರಿದ್ದರು.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwe-wqe

Davangere: ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ವಿಧಿವಶ

1-sadasdas

Siddaramaiah ಮೋಸದ ಗಿರಾಕಿ,ಕೈ ಸರ್ಕಾರ ನೀರಿನ ಮೇಲಿನ ಗುಳ್ಳೆ: ಆರ್.ಅಶೋಕ್

Davanagere; ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

Davanagere; ಪಾನಿಪೂರಿ‌ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ವರ ಸ್ಥಿತಿ ಗಂಭೀರ

1-wewewq

Davanagere; ತಾವರೆ ಹೂವು ಮುಡಿದು ಸಂಸತ್‌ ಪ್ರವೇಶಿಸುತ್ತೇನೆ: ಗಾಯತ್ರಿ ಸಿದ್ದೇಶ್ವರ

There is nothing wrong if the BJP uses the Ram Mandir issue: Pejawara seer

Davanagere; ರಾಮಮಂದಿರ ವಿಚಾರ ಬಿಜೆಪಿಯವರು ಬಳಸಿಕೊಂಡರೆ ತಪ್ಪಿಲ್ಲ: ಪೇಜಾವರ ಶ್ರೀ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.