ಹಾಲಿ-ಮಾಜಿ ಶಾಸಕರ ಮಧ್ಯೆ ವಾಗ್ವಾದ

Team Udayavani, Jul 20, 2020, 12:49 PM IST

ಹಾಲಿ-ಮಾಜಿ ಶಾಸಕರ ಮಧ್ಯೆ ವಾಗ್ವಾದ

ಹರಿಹರ: ಕೋವಿಡ್ ಲಾಕ್‌ಡೌನ್‌ ಅವಧಿ ನಿರ್ಣಯಿಸಲು ತಾಲೂಕು ಆಡಳಿತದಿಂದ ಕರೆದಿದ್ದ ಸಭೆ, ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮಾತಿನ ಚಕಮಕಿಗೆ ಸಾಕ್ಷಿಯಾಯಿತು.

ಎಸ್‌ಜೆವಿಪಿ ಕಾಲೇಜಿನ ಸಭಾಂಗಣದಲ್ಲಿ ಕರೆದಿದ್ದ ಸಭೆಯಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್‌ ಮಾತನಾಡಿ, ಈ ಮುಂಚಿನಂತೆ ಮಧ್ಯಾಹ್ನ 2ಕ್ಕೆ ವ್ಯಾಪಾರ ವಹಿವಾಟು ಬಂದ್‌ ಮಾಡಿಸಿದರೆ ಸಾರ್ವಜನಿಕರು ಅವಸರದಿಂದ ಅಂಗಡಿ ಮುಂಗಟ್ಟುಗಳಿಗೆ ಮುಗಿ ಬಿದ್ದು ಖರೀದಿಸುತ್ತಾರೆ. ಇದರಿಂದ ಸಾಮಾಜಿಕ ಅಂತರ ಕಾಪಾಡಲಾಗುವುದಿಲ್ಲ. ದಾವಣಗೆರೆಯಂತೆ ಇಲ್ಲಿಯೂ ಲಾಕ್‌ ಡೌನ್‌ ಅವಧಿ ನಿಗದಿ ಮಾಡುವುದು ಸೂಕ್ತ. ಇಲ್ಲಿ ಬೇಗನೆ ಬಂದ್‌ ಮಾಡಿದರೆ ಜನರು ದಾವಣಗೆರೆಗೆ ಹೋಗಿ ವ್ಯಾಪಾರ, ವಹಿವಾಟು ನಡೆಸುತ್ತಾರೆ. ಜೊತೆಗೆ ಅದು ಸುರಕ್ಷಿತವೂ ಅಲ್ಲ ಎಂದು ಪ್ರತಿಪಾದಿಸಿದರು.

ನಂತರ ಮಾತನಾಡಿದ ಶಾಸಕ ಎಸ್‌. ರಾಮಪ್ಪ, ದಾವಣಗೆರೆ ನಗರದಲ್ಲಿ ಕೋವಿಡ್ ದಿಂದ ಪ್ರತಿನಿತ್ಯ ಸಾವು-ನೋವು ಸಂಭವಿಸುತ್ತಿದೆ. ನೀವು ಹೇಳಿದಂತೆ ಅನುಸರಿಸಿದರೆ ತಾಲೂಕು ಮುಂದಿನ ದಿನಗಳಲ್ಲಿ ಸ್ಮಶಾನವಾಗಿ ಹೆಣಗಳನ್ನು ಮುಚ್ಚಲು ಜೆಸಿಬಿ ಬಳಸಬೇಕಾಗುತ್ತದೆ. ಕ್ಷೇತ್ರದ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಲಾಭಕ್ಕಾಗಿ ಸಮಯ ನಿಗದಿ ಮಾಡದೆ ಜನರ ಉಳಿವಿಗಾಗಿ ತೀರ್ಮಾನ ಮಾಡಬೇಕಾಗಿದೆ. ಈ ಸಮಯದಲ್ಲಿ ರಾಜಕೀಯ ಮಾಡಬಾರು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ, ಕಾಂಗ್ರೆಸ್‌ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು.ಮಧ್ಯಪ್ರವೇಶಿದ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ, ಕಿತ್ತಾಡುವುದರಿಂದ ಪ್ರಯೋಜನವಿಲ್ಲ. ಎದುರಾಗಿರುವ ಕಂಟಕದಿಂದ ಪಾರಾಗುವುದು ಹೇಗೆಂದು ಚಿಂತನೆ ಮಾಡಬೇಕು.ಇದು ತಾಲೂಕು ಆಡಳಿತ ಕರೆದಿರುವ ಸಭೆ.ಇಲ್ಲಿ ರಾಜಕೀಯ ನಡೆಸುವುದು ಬೇಡ ಎಂದರು.

ಪ್ರತಿ ದಿನ ಬೆಳಿಗ್ಗೆ 5ರಿಂದ ಸಂಜೆ 6ರವರೆಗೆ ವ್ಯಾಪಾರ, ವಹಿವಾಟು ನಡೆಸಲು ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ನಗರಸಭೆ ಪೌರಾಯುಕ್ತೆ ಎಸ್‌. ಲಕ್ಷ್ಮೀ, ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಮೋಹನ್‌, ಸಿಪಿಐ ಶಿವಪ್ರಸಾದ್‌, ಪಿಎಸ್‌ಐ ಶೈಲಶ್ರೀ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.