ಮೆಕ್ಕೆ ಜೋಳ ಬೆಳೆಗಾರರಿಗೆ ಕೊರೊನಾ ಬರೆ!


Team Udayavani, Mar 10, 2020, 11:37 AM IST

ಮೆಕ್ಕೆ ಜೋಳ ಬೆಳೆಗಾರರಿಗೆ ಕೊರೊನಾ ಬರೆ!

ಸಾಂದರ್ಭಿಕ ಚಿತ್ರ

ಭರಮಸಾಗರ: ಮೆಕ್ಕೆಜೋಳ ಬೆಳೆಗಾರರಿಗೂ ಕೊರೊನಾ ವೈರಸ್‌ ಬಿಸಿ ತಟ್ಟಿದೆ. ಕೊರೊನಾ ವೈರಸ್‌ ಭೀತಿ ಕುಕ್ಕುಟೋದ್ಯಮದ ಮೇಲೆ ಪರಿಣಾಮ ಬೀರಿದ್ದು, ಕೋಳಿಯ ಪ್ರಮುಖ ಆಹಾರ ಧಾನ್ಯವಾದ ಮೆಕ್ಕೆಜೋಳದ ಬೇಡಿಕೆ ಕುಸಿಸಿದ್ದು, ದರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಲೇ ಇದೆ. ಇದರಿಂದ ಕಳೆದ ಮುಂಗಾರಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ಮಾರಾಟ ಮಾಡದೆ ಕಣಗಳಲ್ಲಿ ತೆನೆ ಸಮೇತ ಸಂಗ್ರಹಿಸಿಟ್ಟಿದ್ದ ಬೆಳೆಗಾರರು ಕಂಗಾಲಾಗಿದ್ದಾರೆ.

2019ರ ಜನವರಿ ತಿಂಗಳಿನಿಂದ ಮೆಕ್ಕೆಜೋಳ ಪ್ರತಿ ಕ್ವಿಂಟಲ್‌ಗೆ 2000 ರೂ. ಗಡಿ ದಾಟಿತ್ತು. ಕೊರೊನಾ ವೈರಸ್‌ ಭೀತಿಗಿಂತ ಮೊದಲು 2000, 1900 ರೂ. ಆಸುಪಾಸಿನಲ್ಲಿದ್ದ ದರ ಇದೀಗ ಏಕಾಏಕಿ 1500 ರಿಂದ 1600 ರೂ.ಗಳಿಗೆ ಕುಸಿದಿದೆ. 2000 ರೂ. ನಿರೀಕ್ಷೆ ಮಾಡದ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಬಂಗಾರದ ದರ ಸಿಕ್ಕಿತ್ತು. ಇದರಿಂದ ಬೆಳೆಗಾರರು ಸಂತಸಗೊಂಡಿದ್ದರು.

ಮುಂಗಾರಿನಲ್ಲಿ ಬೆಳೆದ ಮೆಕ್ಕೆಜೋಳವನ್ನು ತೆನೆ ಸಮೇತ ಕಣಗಳಲ್ಲಿ ಸಂಗ್ರಹಿಸಿಡುವ ರೈತರು, ಜನವರಿ ನಂತರ ಮಾರಾಟ ಮಾಡುವುದು ವಾಡಿಕೆ. ಸಂಗ್ರಹಿಸಿಟ್ಟ ಮೆಕ್ಕೆಜೋಳವನ್ನು ಜನವರಿ ಬಳಿಕ ಮಾರಾಟ ಮಾಡಿ ಹೆಚ್ಚಿನ ಆದಾಯ ಗಳಿಸುತ್ತಿದ್ದ ರೈತರಿಗೆ ಇದೀಗ ಕೊರೊನಾ ವೈರಸ್‌ ಮಗ್ಗುಲ ಮುಳ್ಳಾಗಿ ಕಾಡುತ್ತಿದೆ.

ತತ್ತರಿಸಿದ ಪೌಲ್ಟ್ರಿ ಉದ್ಯಮ: ಕೋಳಿ ತಿಂದರೆ ಕೊರೊನಾ ವೈರಸ್‌ ಬರುತ್ತೆ, ಅದರಿಂದ ಬೇಗನೆ ಹರಡುತ್ತದೆ ಎಂಬ ವದಂತಿಗಳಿಂದಾಗಿ ಪೌಲ್ಟ್ರಿ ಉದ್ಯಮ ತಲ್ಲಣಿಸಿ ಹೋಗಿದೆ. ಇದರ ಬೆನ್ನ ಹಿಂದೆಯೇ ಕೋಳಿಗಳ ಪ್ರಮುಖ ಆಹಾರ ಧಾನ್ಯ ಮೆಕ್ಕೆಜೋಳವನ್ನು ಖರೀದಿಸಲು ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಪ್ರಮುಖ ರಾಜ್ಯಗಳ ಪೌಲ್ಟ್ರಿ ಫಾರಂಗಳ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಮೆಕ್ಕೆಜೋಳದ ದರ ಕೂಡ ದಿನೇ ದಿನೇ ಕುಸಿಯುತ್ತಾ ಸಾಗಿದೆ. ಕ್ವಿಂಟಲ್‌ ಮೆಕ್ಕೆಜೋಳದ ದರ 1200, 1400 ರೂ.ಗಳವರೆಗೂ ಕುಸಿಯುವ ಸಾಧ್ಯತೆ ದಟ್ಟವಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಮೆಕ್ಕೆಜೋಳ ವ್ಯಾಪಾರಸ್ಥರೊಬ್ಬರು ಹೇಳುತ್ತಾರೆ. ಉತ್ತಮ ದರದ ನಿರೀಕ್ಷೆಯಲ್ಲಿ ಚಿತ್ರದುರ್ಗ ಹಾಗೂ ದಾವಣಗೆರೆ ತಾಲೂಕಿನ ಬಹುತೇಕ ಹಳ್ಳಿಗಳ ರೈತರ ಕಣಗಳಲ್ಲಿ ಮೆಕ್ಕೆಜೋಳವನ್ನು ರಾಶಿ ಹಾಕಿ ಸಂಗ್ರಹಿಸಿಡಲಾಗಿದೆ.

ಕೈಕೊಟ್ಟ ಕಾದು ನೋಡುವ ತಂತ್ರ: ಒಂದು ಅಂದಾಜಿನ ಪ್ರಕಾರ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಬಹುತೇಕ ಹಳ್ಳಿಗಳಲ್ಲಿ ಶೇ. 30 ರಷ್ಟು ಮೆಕ್ಕೆಜೋಳ ಇದುವರೆಗೆ ಮಾರಾಟವಾಗಿದೆ. ಶೇ. 70 ರಷ್ಟು ರೈತರು ಉತ್ತಮ ದರಕ್ಕಾಗಿ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದರು. ಆದರೆ ಹಠಾತ್‌ ಮೆಕ್ಕೆಜೋಳ ದರ ಕುಸಿತ ಬೆಳೆಗಾರರನ್ನು ಚಿಂತೆಗೀಡುಮಾಡಿದೆ.

ಸಂಗ್ರಹಿಸಿಟ್ಟ ಮೆಕ್ಕೆಜೋಳ ತನ್ನ ತೇವಾಂಶವನ್ನು ಕಳೆದುಕೊಳ್ಳುತ್ತಿದೆ. ಕಳೆದ ನಾಲ್ಕಾರು ತಿಂಗಳುಗಳಿಂದ ಸಂಗ್ರಹಿಸಿಟ್ಟ ಕಾರಣ ತೂಕದಲ್ಲೂ ವ್ಯತ್ಯಾಸವಾಗಿರುತ್ತದೆ. ಹೀಗೆ ತೂಕ, ತೇವಾಂಶ ನಷ್ಟಗಳ ನಡುವೆ ಇದೀಗ ದರ ಕುಸಿತವೂ ಸೇರಿಕೊಂಡಿದೆ. ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಶಾಸಕರು ಮೆಕ್ಕೆಜೋಳ ದರ ಕುಸಿತದ ಕುರಿತು ವಿಧಾನಮಂಡಲ ಅ ಧಿವೇಶನದಲ್ಲಿ ಧ್ವನಿ ಎತ್ತುತ್ತಿಲ್ಲ. ಇನ್ನಾದರೂ ಈ ಬಗ್ಗೆ ಎಚ್ಚೆತ್ತುಕೊಂಡು ಸರ್ಕಾರದ ಗಮನ ಸೆಳೆಯಲು ಮುಂದಾಗಬೇಕಿದೆ.

ಸರ್ಕಾರ ಬೆಂಬಲ ಬೆಲೆ ಘೋಷಿಸಲಿ : ಒಂದು ಎಕರೆಯಲ್ಲಿ ಮೆಕ್ಕೆಜೋಳ ಬೆಳೆಯಲು 20 ರಿಂದ 30 ಸಾವಿರ ರೂ. ಖರ್ಚು ತಗಲುತ್ತದೆ. ಬಿತ್ತನೆ ಬೀಜದ ಪ್ಯಾಕೆಟ್‌ ಒಂದಕ್ಕೆ ಸುಮಾರು 2 ಸಾವಿರ ರೂ. ಇದೆ. ಇಂತಹ ಸಂದಿಗ್ಧ ಕಾಲದಲ್ಲಿ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕಿದೆ. ಕ್ವಿಂಟಲ್‌ಗೆ 2500 ರೂ. ನಿಗದಿಪಡಿಸಿ ಸಕಾಲದಲ್ಲಿ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂಬುದು ಮೆಕ್ಕೆಜೋಳ ಬೆಳೆಗಾರರ ಆಗ್ರಹ. ಆದರೆ ಹಲವು ವರ್ಷಗಳ ಬರಗಾಲ, ಮಳೆ ಅಭಾವ ನಾನಾ ಸಂಕಷ್ಟಗಳ ಸಂಕೋಲೆಯಲ್ಲಿ ನರಳುತ್ತಿರುವ ಅನ್ನದಾತನ ನೆರವಿಗೆ ಧಾವಿಸಬೇಕಾದ ಸರ್ಕಾರ ಮಾತ್ರ ಈ ವಿಷಯದಲ್ಲಿ ಮೌನಕ್ಕೆ ಶರಣಾಗಿರುವುದು ವಿಪರ್ಯಾಸ.

 

-ಬಿ. ನಿರಂಜನಮೂರ್ತಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.