ಸದ್ಗುಣ ಬಿತ್ತುವ ಸಾಹಿತ್ಯ ರಚಿಸಿ

Team Udayavani, Aug 26, 2018, 4:40 PM IST

dvg-2.jpg

ದಾವಣಗೆರೆ: ಸಮಾಜದಲ್ಲಿನ ಜಾತಿ, ಧರ್ಮ, ಮತ-ಪಂಥ ಭೇದಗಳ ಗೋಡೆ ಒಡೆಯುವ ಕಾವ್ಯಗಳನ್ನು ಇಂದಿನ ಯುವ ಪೀಳಿಗೆಯ ಮಕ್ಕಳು ರಚಿಸಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಡಾ| ಎಚ್‌.ಎಸ್‌. ಮಂಜುನಾಥ ಕುರ್ಕಿ ಹೇಳಿದ್ದಾರೆ.

ನಗರದ ಕುವೆಂಪು ಕನ್ನಡ ಭವನದಲ್ಲಿ ಶನಿವಾರ ಮಕ್ಕಳ ಲೋಕದ 9ನೇ ವಾರ್ಷಿಕೋತ್ಸವ ಹಾಗೂ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಸಾಹಿತ್ಯ ಎಂಬುದು ಸದ್ಗುಣದ ಬೀಜ ಬಿತ್ತುವ, ಸಾಮಾಜಿಕ ಸಂವೇದನೆ, ಭಾವೈಕ್ಯತೆ ಬಿಂಬಿಸುವಂತಿರಬೇಕು. ಅಂತಹ ಸಾಹಿತ್ಯ ಕೃತಿ, ಕಾವ್ಯಗಳು ನಾಡಿನ ಭವಿಷ್ಯ ನಿರ್ಮಾತೃಗಳಾದ ಇಂದಿನ ಮಕ್ಕಳಿಂದ ಹೊರಹೊಮ್ಮಬೇಕು ಎಂದರು.

ಇಂದಿನ ಜಗತ್ತು ಬರೀ ಕಟ್ಟಡ ನಿರ್ಮಾಣ, ಸಾಮ್ರಾಜ್ಯ ವಿಸ್ತರಣೆ ಬಗ್ಗೆಯೇ ಚಿಂತಿಸುತ್ತಿದೆ. ಪ್ರಜ್ಞಾವಂತರನ್ನು ಭೌತಿಕ ಸಂಪತ್ತಿನ ಒಡೆಯರನ್ನಾಗಿಸಿ ಪ್ರಜ್ಞಾರಹಿತ ಬುದ್ಧಿವಂತರನ್ನಾಗಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದರು.

ಸಂವೇದನಾ-ಸೃಜನ ಶೀಲತೆ, ವ್ಯಕ್ತಿತ್ವ ವಿಕಸನಗೊಳಿಸುವ ಶಕ್ತಿ ಸಾಹಿತ್ಯಕ್ಕಿದೆ. ಮನುಷ್ಯನ ಮನಸ್ಸನ್ನು ಉಲ್ಲಾಸ ಭರಿತವಾಗಿಡುವ ಶಕ್ತಿ ಕನ್ನಡದ ಕಾವ್ಯಗಳಿಗಿದೆ. ಹಾಗಾಗಿ ಖಡ್ಗದಂತಹ ಲೇಖನಿಯಿಂದ ಸಾಮಾಜಿಕ ಅನಿಷ್ಟ, ಪಿಡುಗುಗಳು, ಅಜ್ಞಾನದ ಅಂಧಕಾರ ದೂರ ಮಾಡುವಂತಹ
ಸೃಜನಶೀಲ ಸಂವೇದನೆಯುಳ್ಳ ಕಾವ್ಯಗಳು ಸಮಾಜದಲ್ಲಿ ಸೃಷ್ಟಿ ಆಗಬೇಕು ಎಂದರು.

ತರಳಬಾಳು ಪ್ರೌಢಶಾಲೆ ವಿದ್ಯಾರ್ಥಿನಿ ಎಂ.ಜೆ. ಜೀವಿತಾಗೆ, ಪ್ರತಿಭಾ ಸಿಂಧುಗೆ ರಜತ ಪದಕ, ಈಶ್ವರಮ್ಮ ಪ್ರೌಢಶಾಲೆಯ ವಿದ್ಯಾರ್ಥಿ ವರುಣ್‌ಗೆ ಸಂಗೀತ ಶರಧಿ ಪ್ರಶಸ್ತಿ ಹಾಗೂ ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆಯ ಸಂಸ್ಥಾಪಕ ಎಂ.ಎಸ್‌. ಶಿವಣ್ಣ ಮತ್ತು ಜಸ್ಟಿನ್‌ ಡಿಸೋಜಾ ಅವರಿಗೆ ಗುರುವಂದನೆ-ಶಿಕ್ಷಣ ಶಿರೋಮಣಿ ಪ್ರಶಸ್ತಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಮಕ್ಕಳಿಂದ ಕವಿಗೋಷ್ಠಿ ನಡೆಯಿತು.

ಕಸಾಪ ತಾಲೂಕು ಅಧ್ಯಕ್ಷ ಬಿ. ವಾಮದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕವಿ ಎಸ್‌. ಓಂಕಾರಯ್ಯ ತವನಿಧಿ, ಎ.ಎಚ್‌. ಶಿವಮೂರ್ತಿಸ್ವಾಮಿ, ಮಕ್ಕಳ ಲೋಕದ ಸಂಸ್ಥಾಪಕ ಕೆ.ಎನ್‌. ಸ್ವಾಮಿ, ಶಿವಯೋಗಿ ಹಿರೇಮಠ, ವೀರಭದ್ರಪ್ಪ ತೆಲಗಿ, ಶ್ರೀಮತಿ ಅಡಿಗ, ಟಿ.ರಾಮಯ್ಯ, ಅನುಷಾ, ಕಾರ್ತಿಕ್‌
ಕುಮಾರ್‌, ವೀಣಾ, ರುದ್ರಾಕ್ಷಿ ಪುಟ್ಟಾನಾಯ್ಕ ಮತ್ತಿತರಿದ್ದರು. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.