ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Team Udayavani, Oct 6, 2022, 12:49 AM IST
ದಾವಣಗೆರೆ: ಅಪ್ರಾಪ್ತ ವಯಸ್ಕಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು, 30 ಸಾವಿರ ದಂಡ, ಸಂತ್ರಸ್ತೆಗೆ ಪರಿಹಾರ ರೂಪದಲ್ಲಿ 5 ಲಕ್ಷ ರೂ. ನೀಡುವಂತೆ ತೀರ್ಪು ನೀಡಿದೆ.
ಚನ್ನಗಿರಿ ತಾಲೂಕಿನ ಸಿದ್ದನಮಠದ ಚಂದ್ರಪ್ಪ ಶಿಕ್ಷೆಗೊಳಗಾದ ಆರೋಪಿ. ಅಡಕೆ ಸುಲಿಯುವ ಕೆಲಸಕ್ಕೆ ಹೋಗುತ್ತಿದ್ದ ತನ್ನ ಮಗಳನ್ನು ಪರಿಚಯ ಮಾಡಿಕೊಂಡ ಚಂದ್ರಪ್ಪ ಪ್ರೀತಿಸುವುದಾಗಿ ಪೀಡಿಸಿ ಮದುವೆ ಆಗುವುದಾಗಿ ನಂಬಿಸಿದ್ದ. ಬಳಿಕ ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ ಎಂದು ಸಂತ್ರಸ್ತೆಯ ತಾಯಿ 2020ರಲ್ಲಿ ಸಂತೇಬೆನ್ನೂರು ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಜಿಲ್ಲಾ ಮತ್ತು ಸತ್ರ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ಶ್ರೀಪಾದ್ ಅವರು, ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿದ್ದಾರೆ. ಸಂತ್ರಸ್ತೆಗೆ ಪರಿಹಾರ ರೂಪದಲ್ಲಿ 5 ಲಕ್ಷ ರೂ. ನೀಡಬೇಕು ಎಂದು ದಾವಣಗೆರೆ ಜಿಲ್ಲಾ ಉಚಿತ ಸೇವಾ ಕಾನೂನು ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಅಭಿಯೋಜನೆ ಪರ ವಿಶೇಷ ಸರಕಾರಿ ಅಭಿಯೋಜಕಿ ರೇಖಾ ಎಸ್. ಕೋಟೆಗೌಡರ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ