ಆಕ್ಸಿಜನ್‌ ಪೂರೈಸಿ ಅನಾಹುತ ತಪ್ಪಿಸಿದ ರೇಣು

Team Udayavani, May 14, 2021, 8:56 PM IST

14-13

ಹೊನ್ನಾಳಿ: ಆಕ್ಸಿಜನ್‌ ಕೊರತೆಯಿಂದ ಉಂಟಾಗಬಹುದಾಗಿದ್ದ ಅನಾಹುತವೊಂದು ಸಿ.ಎಂ. ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ಹಾಗೂ ಅಧಿಕಾರಿಗಳ ಸಮಯಪ್ರಜ್ಞೆ ಹಾಗೂ ಪ್ರಯತ್ನದಿಂದ ತಪ್ಪಿದೆ. ರೇಣುಕಾಚಾರ್ಯ ಅವರ ಕ್ಷೇತ್ರ ಹೊನ್ನಾಳಿಯ ಸರ್ಕಾರಿ ಆಸ್ಪತ್ರೆಯಲ್ಲಿ 20 ಮಂದಿ ಕೊರೊನಾ ಸೋಂಕಿತರು ಆಕ್ಸಿಜನ್‌ ಬೆಡ್‌ನ‌ಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬುಧವಾರ ರಾತ್ರಿ ಆಕ್ಸಿಜನ್‌ ಖಾಲಿಯಾಗುವ ಹಂತಕ್ಕೆ ಬಂದಿದೆ. ವಿಷಯ ತಿಳಿದು ಮಧ್ಯರಾತ್ರಿ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದೌಡಾಯಿಸಿದ ರೇಣುಕಾಚಾರ್ಯ ಆಕ್ಸಿಜನ್‌ ಪೂರೈಕೆ ಮಾಡಿ 20 ಜನರ ಪ್ರಾಣ ಉಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಕೇವಲ 3 ಗಂಟೆಗಾಗುವಷ್ಟು ಮಾತ್ರವೇ ಆಕ್ಸಿಜನ್‌ ಲಭ್ಯವಿತ್ತು. ಸಿಲಿಂಡರ್‌ ಖಾಲಿಯಾದರೆ ಸೋಂಕಿತರ ಜೀವಕ್ಕೆ ಮಾರಕವಾಗುತ್ತಿತ್ತು. ರಾತ್ರಿ 10.52 ಕ್ಕೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ| ಚಂದ್ರಪ್ಪ ಅವರು ಶಾಸಕರಿಗೆ ದೂರವಾಣಿ ಕರೆ ಮಾಡಿ ಈ ವಿಷಯ ತಿಳಿಸಿದರು.

ತಕ್ಷಣ ಆಸ್ಪತ್ರೆಗೆ ಆಗಮಿಸಿದ ಶಾಸಕರು ಪಿಪಿಇ ಕಿಟ್‌ ಧರಿಸಿ ಸೋಂಕಿತರ ವಾರ್ಡ್‌ಗೆ ಭೇಟಿ ನೀಡಿ ಪರಿಸ್ಥಿತಿಯ ಗಂಭೀರತೆ ಅವಲೋಕಿಸಿ ತಕ್ಷಣವೇ ಜಿಲ್ಲಾ ಧಿಕಾರಿಗಳಿಗೆ ಪರಿಸ್ಥಿತಿ ತಿಳಿಸಿ ಸಿಲಿಂಡರ್‌ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ನಂತರ ತಾಲೂಕು ಅಧಿಕಾರಿಗಳ ತಂಡದೊಂದಿಗೆ ಖಾಲಿ ಸಿಲಿಂಡರ್‌ಗಳನ್ನು ತೆಗೆದುಕೊಂಡು ಹರಿಹರದ ದಿ.ಸದರನ್‌ ಗ್ಯಾಸ್‌ ಲಿಮಿಟೆಡ್‌ ಕಂಪೆನಿಗೆ ಭೇಟಿ ನೀಡಿ 22 ಜಂಬೋ ಮತ್ತು 2 ಸಣ್ಣ ಸಿಲಿಂಡರ್‌ ವ್ಯವಸ್ಥೆ ಮಾಡಿಕೊಂಡು ರಾತ್ರಿ 2.30ಕ್ಕೆ ಹೊನ್ನಾಳಿ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಆಕ್ಸಿಜನ್‌ ಕೊರತೆ ಆಗದಂತೆ ಮಾಡಿ ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

ಕಣ್ಣೀರಿಟ್ಟ ಶಾಸಕ: ತಡರಾತ್ರಿ ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಎಂ.ಪಿ. ರೇಣುಕಾಚಾರ್ಯ ರೋಗಿಗಳ ಶೋಚನೀಯ ಪರಿಸ್ಥಿತಿ ಕಣ್ಣಾರೆ ಕಂಡು ಭಾವುಕರಾಗಿ “ನಿಮಗೇನೂ ಆಗುವುದಿಲ್ಲ. ನಿಮ್ಮ ಜೊತೆ ನಾನಿದ್ದೇನೆ. ಈಗಲೇ ಆಕ್ಸಿಜನ್‌ ತರುತ್ತೇನೆ’ ಎಂದು ಧೈರ್ಯ ತುಂಬಿ ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು. ಕಾರ್ಯಾಚರಣೆಯಲ್ಲಿ ತಹಶೀಲ್ದಾರ್‌ ಬಸವನಗೌಡ ಕೊಟೂರ, ಸಿಪಿಐ ದೇವರಾಜ್‌, ಎಸೈಗಳಾದ ಬಸವನಗೌಡ ಬಿರಾದರ್‌, ರಮೇಶ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.