15 ರಂದು ವೀರಭದ್ರೇಶ್ವರ ಶಿಲಾ ಮೂರ್ತಿ ಪುರ ಪ್ರವೇಶ

Team Udayavani, Apr 14, 2021, 5:34 PM IST

Davanagere

ಮಲೇಬೆನ್ನೂರು: ಮಲೇಬೆನ್ನೂರು-ಕುಂಬಳೂರು ಮಧ್ಯದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ವೀರಭದ್ರಸ್ವಾಮಿ ದೇವಾಲಯದ ನೂತನ ಶಿಲಾಮೂರ್ತಿಗಳ ಪುರ ಪ್ರವೇಶದ ನಂತರ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು ಎಂದು ಶ್ರೀ ವೀರಭದ್ರೇಶ್ವರ ಟ್ರಸ್ಟ್‌ ಅಧ್ಯಕ್ಷ ಪಿ. ಪಂಚಪ್ಪ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಶಿಲಾ ಮೂರ್ತಿಗಳ ಪುರಪ್ರವೇಶ ಮತ್ತು ಮೆರವಣಿಗೆಯನ್ನು ಹಾಗೂ ಶ್ರೀ ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ಲೋಕಾರ್ಪಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದರು.

ಟ್ರಸ್ಟ್‌ ನಿರ್ದೆಶಕ ಬಿ. ಚಿದಾನಂದಪ್ಪ ಮಾತನಾಡಿ, ದೇವಾಲಯದ ಲೋಕಾರ್ಪಣೆಯನ್ನು ಸಭೆ, ಸಮಾರಂಭ ಮತ್ತು ಸಾಮೂಹಿಕ ವಿವಾಹಗಳನ್ನು ಒಟ್ಟು ಮೂರು ದಿನಗಳವರೆಗೆ ಮಾಡಬೇಕೆಂದು ಮಾ. 7 ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಿದ್ದೆವು. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ ಒಂದು ದಿನ ಮಾತ್ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಏ. 15ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾಳಿ ತಾಲೂಕು ಬೀರಗೊಂಡನಹಳ್ಳಿಯಲ್ಲಿ ನಿರ್ಮಿಸಿರುವ ನೂತನ ಶಿಲಾ ವಿಗ್ರಹಗಳು ಪಟ್ಟಣದ ಪಿಡಬ್ಲೂಡಿ ಕಾಲೋನಿಯಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದ ಆವರಣಕ್ಕೆ ಪುರಪ್ರವೇಶ ಮಾಡಲಿವೆ. 10:30ರ ನಂತರ ಹೊನ್ನಾಳಿ ಹಿರೇಕಲ್ಮಠದ ಡಾ| ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡುವರು.

ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ಮಾತಾ, ಶ್ರಿ ನಂದಿ, ಶ್ರೀ ಕಾಲಬೈರವ ಮತ್ತು ನಾಗ ಪರಿವಾರ ಶಿಲಾ ವಿಗ್ರಹಗಳನ್ನು ಮಲೇಬೆನ್ನೂರು ಮತ್ತು ಕುಂಬಳೂರಿನ ರಾಜಬೀದಿಗಳಲ್ಲಿ ಮೆರವಣಿಗೆಯೊಂದಿಗೆ ನೂತನ ದೇವಸ್ಥಾನದ ಆವರಣಕ್ಕೆ ತರಲಾಗುವುದು. ಲೋಕಾರ್ಪಣೆಗೊಳ್ಳುವವರೆಗೆ ವಿಗ್ರಹಗಳನ್ನು ಜಲಾವಾಸ, ಕ್ಷೀರಾ ವಾಸ, ಪುಷ್ಪವಾಸ ಸೇರಿದಂತೆ ವಿವಿಧ ಧಾರ್ಮಿಕ ವಿ  ವಿಧಾನಗಳನ್ನು ನೆರವೇರಿಸಲಾಗುವುದು. ಮೇ 14 ರಂದು ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನೆರವೇರಿಸುವರು ಎಂದರು.

ಟ್ರಸ್ಟ್‌ ಉಪಾಧ್ಯಕ್ಷ ಬಿ. ನಾಗೇಂದ್ರಪ್ಪ, ನಿರ್ದೇಶಕರುಗಳಾದ ಬಿ. ಚಿದಾನಂದಪ್ಪ, ಕೆ. ವೃಷಭೇಂದ್ರಪ್ಪ, ಎನ್‌.ಕೆ. ಬಸವರಾಜ್‌, ಎಸ್‌.ಎನ್‌. ಶಂಭುಲಿಂಗಪ್ಪ, ಎಚ್‌.ಸಿ. ವಿಜಯ್‌ಕುಮಾರ್‌, ಬಿ. ಶಂಭುಲಿಂಗಪ್ಪ, ಬಿ. ಉಮಾಶಂಕರ್‌, ಎಚ್‌. ವಿಶ್ವನಾಥ್‌, ಡಿ.ಎಂ. ಕಿರಣ, ಸಚಿನ್‌, ಬಿ. ವೀರೇಶ್‌, ಬಿ.ಸಿ. ಸತೀಶ್‌ ಇದ್ದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.