ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ

Team Udayavani, Jun 14, 2021, 9:53 PM IST

14-11

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ| ವಿಜಯಮಹಾಂತೇಶ್‌ ದಾನಮ್ಮನವರ್‌ ಇತರೆ ಅಧಿಕಾರಿಗಳು ಭಾನುವಾರ ನಿಗದಿತ ಕೋವಿಡ್‌ ಆಸ್ಪತ್ರೆಗೆ (ಜಿಲ್ಲಾ ಚಿಗಟೇರಿ ಆಸ್ಪತ್ರೆ) ಭೇಟಿ ನೀಡಿ ಕೊರೊನಾ ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ವಿವಿಧ ಸೌಲಭ್ಯಗಳು, ಆಸ್ಪತ್ರೆಯಲ್ಲಿನ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದರು.

ಜಿಲ್ಲಾ ನಿಗದಿತ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್‌ ಸೋಂಕಿತರಿಗೆ ಒದಗಿಸಲಾಗುತ್ತಿರುವ ಚಿಕಿತ್ಸೆಯ ಪ್ರತಿ ಹಂತವನ್ನ ಕೂಲಂಕುಷವಾಗಿ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ, ಉತ್ತಮ ಚಿಕಿತ್ಸೆ ನೀಡಬೇಕು. ಯಾವುದೇ ಲೋಪವಾಗದಂತೆ ನಿಗಾ ವಹಿಸಬೇಕು ಎಂದು ಸೂಚಿಸಿತು.

ಆಸ್ಪತ್ರೆಯ ಹೊರಾಂಗಣ, ಒಳಾಂಗಣ, ಕೋವಿಡ್‌ ಚಿಕಿತ್ಸಾ ಕೊಠಡಿ ಇತರೆ ವಾರ್ಡ್‌ಗಳಲ್ಲಿನ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್‌, ಸರ್ಜನ್‌ ಡಾ| ಜಯಪ್ರಕಾಶ್‌ ಮತ್ತಿತರ ಅಧಿಕಾರಿಗಳೊಡನೆ ಚರ್ಚಿಸಲಾಯಿತು. ಸ್ವತ್ಛತೆ ಇತರೆ ವಿಷಯಗಳ ಬಗ್ಗೆ ಗಮನಹರಿಸುವಂತೆ ಸೂಚಿಸಲಾಯಿತು. ಮಹಾಮಾರಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರೊಡನೆ ಆಸ್ಪತ್ರೆಯಲ್ಲಿ ಇರುವಂತಹ ಸಂಬಂಧಿಕರು ಇತರರು ಅನಗತ್ಯವಾಗಿ ಓಡಾಡುತ್ತಿರುವುದು ಇತರೆ ಸಮಸ್ಯೆಗೆ ಕಾರಣವಾಗಬಹುದು.

ಹಾಗಾಗಿ ಅನಗತ್ಯವಾಗಿ ಓಡಾಡುವುದನ್ನ ನಿರ್ಬಂಧಿಸುವಂತೆ ಜಿಲ್ಲಾ ಆಸ್ಪತ್ರೆ ಅಧೀಕ್ಷಕ ಡಾ| ಜಯಪ್ರಕಾಶ್‌ ಅವರಿಗೆ ಸೂಚಿಸಲಾಯಿತು. ನಿಗದಿತ ಕೋವಿಡ್‌ ಆಸ್ಪತ್ರೆಯ ಎಲ್ಲ ವಾರ್ಡ್‌ಗಳನ್ನು ಒಂದು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಲಾ ಯಿತು. ಆಸ್ಪತ್ರೆಯ ಹಿಂಭಾಗದಲ್ಲಿನ ತುರ್ತು ಚಿಕಿತ್ಸಾ ಕೊಠಡಿ, ಕೋವಿಡ್‌ ಫ್ಲೂ ಕೊಠಡಿ ವೀಕ್ಷಿಸಿದ ಅಧಿಕಾರಿಗಳ ತಂಡ, ಆಸ್ಪತ್ರೆಯಲ್ಲಿನ ಸೋಂಕಿತ ಸಂಬಂಧಿಕರು, ಸಾರ್ವಜನಿಕರೊಡಗೆ ಆಸ್ಪತ್ರೆಯಲ್ಲಿನ ಸ್ಥಿತಿಗತಿ, ಚಿಕಿತ್ಸೆ, ಸೌಲಭ್ಯಗಳ ಇತರೆ ವಿಚಾರಗಳ ಬಗ್ಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ರೋಗಿಗಳ ಸಂಬಂಧಿಕರು ಕೆಲ ವಿಚಾರದ ಬಗ್ಗೆ ಗಮನ ಸೆಳೆದರು.

ಜಿಲ್ಲಾ ಆಸ್ಪತ್ರೆಗೆ ಆಮ್ಲಜನಕ ಪೂರೈಸುವ ಘಟಕ, ಕೊಠಡಿಗಳ ಪರಿಶೀಲನೆ ನಡೆಸಲಾಯಿತು. ಆಕ್ಸಿಜನ್‌ ಲಭ್ಯತೆ, ಬಳ್ಳಾರಿ ಸಮೀಪದ ಜಿಂದಾಲ್‌ ಘಟಕದಿಂದ ಪೂರೈಕೆಯ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗೆ ಮಾಹಿತಿ ನೀಡಲಾಯಿತು. ಆಸ್ಪತ್ರೆಯಲ್ಲಿ ಎಷ್ಟು ಜಂಬೋ ಸಿಲಿಂಡರ್‌ ಇವೆ, ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ವಿವರ ನೀಡಲಾಯಿತು. ಆಸ್ಪತ್ರೆ ಆವರಣದಲ್ಲಿರುವ ಲಿಕ್ವಿಡ್‌ ಆಕ್ಸಿಜನ್‌ ಶೇಖರಣಾ ಘಟಕವನ್ನೂ ಪರಿಶೀಲಿಸಿದ ಅಧಿಕಾರಿಗಳ ತಂಡ, ಎಷ್ಟು ಖಾಲಿ ಇದೆ ಹಾಗೂ ಯಾವೆಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದರ ಕುರಿತಂತೆ ಚರ್ಚಿಸಿತು.

ಆಮ್ಲಜನಕ ಒಳಗೊಂಡಂತೆ ಅನೇಕ ವಿಷಯಗಳ ಬಗ್ಗೆ ವೈದ್ಯಾಧಿಕಾರಿಗಳ ಜೊತೆಗೆ ಕೂಲಂಕುಷವಾಗಿ ಚರ್ಚಿಸಿ, ಹಲವಾರು ಅಗತ್ಯ ಸಲಹೆ ನೀಡಲಾಯಿತು. ಸೋಂಕಿತರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಸೋಂಕಿನ ಪ್ರಮಾಣ ಕಡಿಮೆ ಆಗುವತ್ತಲೂ ಶ್ರಮವಹಿಸ ಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿತು. ಡಾ| ಶಶಿಧರ, ಜಿಲ್ಲಾ ಆಸ್ಪತ್ರೆಯ ವೈದ್ಯರು, ವೈದ್ಯಕಿಯೇತರ ಸಿಬ್ಬಂದಿ ಇತರರು ಇದ್ದರು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.