ಸಂಪುಟದಲ್ಲಿ ದಕ್ಕೀತೇ ಸಚಿವ ಸ್ಥಾನ?


Team Udayavani, Jul 28, 2021, 6:21 PM IST

28-9

ರಾ. ರವಿಬಾಬು

ದಾವಣಗೆರೆ: ರಾಜ್ಯಕ್ಕೆ ಹೊಸ ಸಿಎಂ ಘೋಷಣೆಯಾಗಿದ್ದು ಹೊಸ ಸಂಪುಟವೂ ರಚನೆಯಾಗಲಿದೆ. ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೂತನ ಸಂಪುಟದಲ್ಲಾದರೂ ಸಚಿವ ಪಟ್ಟ ಒಲಿಯಲಿದೆಯೇ ಎಂಬ ಕುತೂಹಲ ಗರಿಗೆದರಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌. ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಸಂಪುಟದಲ್ಲಿ ದಾವಣಗೆರೆ ಜಿಲ್ಲೆಯ ಐವರು ಶಾಸಕರಲ್ಲಿ ಒಬ್ಬರಿಗೆ ಮಂತ್ರಿಗಿರಿ ದೊರೆಯಲಿದೆ ಎಂಬ ನಿರೀಕ್ಷೆ ಜಿಲ್ಲಾ ಬಿಜೆಪಿಯಲ್ಲಿ ಮಾತ್ರವಲ್ಲ, ಸಾರ್ವಜನಿಕ ವಲಯದಲ್ಲೂ ಇದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಂಟು ಸ್ಥಾನಗಳಲ್ಲಿ ದಾವಣಗೆರೆ ಉತ್ತರದಿಂದ ಎಸ್‌.ಎ. ರವೀಂದ್ರ ನಾಥ್‌, ಜಗಳೂರಿನಿಂದ ಎಸ್‌.ವಿ. ರಾಮಚಂದ್ರ, ಹೊನ್ನಾಳಿಯಿಂದ ಎಂ.ಪಿ. ರೇಣುಕಾಚಾರ್ಯ, ಮಾಯಕೊಂಡದಿಂದ ಪ್ರೊ| ಎನ್‌. ಲಿಂಗಣ್ಣ, ಚನ್ನಗಿರಿಯಿಂದ ಮಾಡಾಳ್‌ ವಿರೂಪಾಕ್ಷಪ್ಪ ಹಾಗೂ ಈಗ ವಿಜಯನಗರ ಜಿಲ್ಲೆಗೆ ಸೇರ್ಪಡೆಯಾಗಿರುವ ಹರಪನಹಳ್ಳಿಯಿಂದ ಜಿ. ಕರುಣಾಕರ ರೆಡ್ಡಿ ಆಯ್ಕೆಯಾಗುವ ಮೂಲಕ ಬಿಜೆಪಿಗೆ ಬಲ ತುಂಬಿದ್ದಾರೆ. ರಾಜ್ಯ ರಾಜಕಾರಣದಲ್ಲಿನ ಬದಲಾವಣೆಯಿಂದ ಬಿ.ಎಸ್‌. ಯಡಿಯೂರಪ್ಪ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯವರಿಗೆ ಸಚಿವ ಸ್ಥಾನ ಕಟ್ಟಿಟ್ಟ ಬುತ್ತಿ ಎಂಬ ಬಲವಾದ ನಿರೀಕ್ಷೆ ಇತ್ತು.

ಆದರೆ ಸರ್ಕಾರದ ರಚನೆಗೆ ಪ್ರಮುಖ ಕಾರಣಕರ್ತರಾದ 17 ಜನರಿಗೆ ಸಚಿವ ಸ್ಥಾನ ನೀಡಲೇಬೇಕಾದ ಅನಿವಾರ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಜೆಪಿಯ ಶಾಸಕರಿಗೆ ಸಚಿವ ಸ್ಥಾನ ಮರೀಚಿಕೆಯಾಗಿಗಿತ್ತು. ಬಿ.ಎಸ್‌. ಯಡಿಯೂರಪ್ಪ ಮಂತ್ರಿ ಮಂಡಲ ವಿಸ್ತರಣೆ, ಪುನರ್‌ ರಚನೆ ಮಾಡಿದ ಸಂದರ್ಭದಲ್ಲಿ ಸಹಜ ಎನ್ನುವಂತೆ ಜಿಲ್ಲೆಯ ಬಿಜೆಪಿ ಶಾಸಕರಲ್ಲಿ ಸಚಿವ ಸ್ಥಾನದ ನಿರೀಕ್ಷೆ ಗರಿಗೆದರುತ್ತಿತ್ತು.

ಶಾಸಕರಿಂದ ಗದ್ದಿಗೆಗೆ ಏರುವ ಕಸರತ್ತು ಸಹ ನಡೆಯುತ್ತಿತ್ತು. ಆದರೆ ಕೊನೆಯವರೆಗೆ ಜಿಲ್ಲೆಯ ಶಾಸಕರಿಗೆ ಸಚಿವಗಿರಿ ಕೈಗೆಟುಕದ ದ್ರಾಕ್ಷಿ ಆಗಿಯೇ ಉಳಿಯಿತು. ಯಡಿಯೂರಪ್ಪ ಅವರು ಜಿಲ್ಲೆಯ ಶಾಸಕರನ್ನು ಸಚಿವರನ್ನಾಗಿ ಮಾಡದೇ ಇದ್ದರೂ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನಮಾನದ ರಾಜಕೀಯ ಕಾರ್ಯದರ್ಶಿ, ಚನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಕರ್ನಾಟಕ ಸೋಪ್ಸ್‌ ಆ್ಯಂಡ್‌ ಡಿಟರ್ಜೆಂಟ್‌, ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ| ಎನ್‌. ಲಿಂಗಣ್ಣ ಅವರಿಗೆ ಡಾ| ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಜಗಳೂರು ಕ್ಷೇತ್ರದ ಶಾಸಕ ಎಸ್‌.ವಿ. ರಾಮಚಂದ್ರ ಅವರಿಗೆ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದರು. ಆದರೆ ಸಚಿವ ಸ್ಥಾನವನ್ನು ನೀಡಲೇ ಇಲ್ಲ ಎನ್ನುವುದು ಈಗ ಇತಿಹಾಸ.

ಯಾರ್ಯಾರು ಆಕಾಂಕ್ಷಿಗಳು

ಯಡಿಯೂರಪ್ಪ ಜು. 26 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೂತನ ಮಂತ್ರಿ ಮಂಡಲ ಅಸ್ತಿತ್ವಕ್ಕೆ ಬರಲಿದೆ. ಹಾಗಾಗಿ ಮತ್ತೆ ಬಿಜೆಪಿ ಶಾಸಕರಲ್ಲಿ ಮಂತ್ರಿಗಿರಿ ಆಸೆ ಚಿಗುರೊಡದಿದೆ. ಬಿಜೆಪಿಯ ನೂತನ ಶಾಸಕಾಂಗ ಪಕ್ಷದ ಆಯ್ಕೆ ನಡೆಯದೇ ಇದ್ದರೂ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ಯಾವುದೇ ಸಚಿವ ಸ್ಥಾನ ನೀಡಿದರೂ ನಿರ್ವಹಿಸುವುದಾಗಿ ಹೇಳುವ ಮೂಲಕ ತಾವು ಸಚಿವ ಸ್ಥಾನದ ಆಕಾಂಕ್ಷಿ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಜಗಳೂರು ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ, ವಾಲೀ¾ಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌.ವಿ. ರಾಮಚಂದ್ರ ಅವರಿಗೆ ಕ್ಯಾಬಿನೆಟ್‌ ಸಚಿವ ಸ್ಥಾನ ನೀಡಲೇಬೇಕು ಎಂದು ಜಿಲ್ಲಾ ವಾಲೀಕಿ ನಾಯಕ ಸಮಾಜ ಧ್ವನಿ ಎತ್ತಿದೆ. ಈ ಬಾರಿಯೂ ರಾಮಚಂದ್ರ ಅವರಿಗೆ ಸಚಿವ ಸ್ಥಾನ ಕೊಡದೇ ಇದ್ದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನೋಡಿಕೊಳ್ಳುತ್ತೇವೆ ಎನ್ನುವ ಎಚ್ಚರಿಕೆಯ ಸಂದೇಶ ಸಹ ನೀಡಲಾಗಿದೆ.

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ತಮಗೆ ಸಚಿವ ಸ್ಥಾನ ಬೇಕಾಗಿಯೇ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದರೆ ರಾಜ್ಯ ರಾಜಕಾರಣದಲ್ಲಿನ ಬದಲಾವಣೆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಮಾನಸ ಪುತ್ರ ರೇಣುಕಾಚಾರ್ಯ ಸಚಿವ ಸ್ಥಾನದತ್ತ ದಾಳ ಉರುಳಿಸಬಹುದು. ಯಡಿಯೂರಪ್ಪ ಅತ್ಯಾಪ್ತ ವಲಯ ದಲ್ಲಿ ಗುರುತಿಸಿಕೊಂಡಿರುವ ರೇಣುಕಾಚಾರ್ಯರಿಗೆ ಮಂತ್ರಿಗಿರಿ ಒಲಿಯುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.