ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹನ

ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಲಾಯಿತು.

Team Udayavani, Feb 6, 2021, 3:36 PM IST

6-17

ದಾವಣಗೆರೆ: ಪೆಟ್ರೋಲ್‌, ಡೀಸೆಲ್‌, ಅಡುಗೆ ಎಣ್ಣೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶುಕ್ರವಾರ ಎಸ್‌.ಯು.ಸಿ.ಐ (ಕಮ್ಯುನಿಸ್ಟ್‌) ಪಕ್ಷದ ಕಾರ್ಯಕರ್ತರು ಗಾಂಧಿ ವೃತ್ತದಲ್ಲಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ‌ ನಡೆಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಕೈದಾಳೆ ಮಾತನಾಡಿ, ದೇಶದ ಜನ ಸಾಮಾನ್ಯರು ಆರ್ಥಿಕ ಸಂಕಷ್ಟ ಮತ್ತು ಸಾಂಕ್ರಾಮಿಕ ರೋಗದ ಆಘಾತದಿಂದ ಕಂಗಾಲಾಗಿ ಜೀವನ ನಿರ್ವಹಣೆಗಾಗಿ ಸರ್ಕಾರದಿಂದ ಆರ್ಥಿಕ ಬೆಂಬಲಕ್ಕಾಗಿ ಕಾತರದಿಂದ ಕಾಯುತ್ತಿರುವಾಗ, ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌, ಅಡುಗೆ ಎಣ್ಣೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದು ಜನ ವಿರೋಧಿ ನೀತಿ ಎಂದು ದೂರಿದರು.
ಕೇಂದ್ರ ಸರ್ಕಾರದ ಬಜೆಟ್‌ ಆರ್ಥಿಕ ಪುನಶ್ಚೇತನ ಮತ್ತು ಬೆಳವಣಿಗೆಯ ಕುರಿತು ಹುಸಿ ಪ್ರತಿಪಾದನೆಗಳಿಂದ ತುಂಬಿ ಹೋಗಿದೆ.

ಆತ್ಮ ನಿರ್ಭರ ಭಾರತ ನಿರ್ಮಿಸುವ ಹೆಸರಿನಲ್ಲಿ ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್‌, ವಿಮೆ ಮುಂತಾದ ಸಮಾಜ ಕಲ್ಯಾಣ ಮತ್ತು ಸೇವಾ ವಲಯಗಳು ಒಳಗೊಂಡಂತೆ ಎಲ್ಲ ರಂಗಗಳ ಸಂಪೂರ್ಣ ಖಾಸಗೀಕರಣದ ನೀಲಿ ನಕ್ಷೆ ಬಿಚ್ಚಿಡಲಾಗಿದೆ. ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಕ್ಷೇತ್ರದಲ್ಲಿ ವಾಸ್ತವದಲ್ಲಿ ಬಜೆಟ್‌ ಕಡಿತಗೊಂಡಿದ್ದರೂ ಗೊಂದಲಗಳಿಂದ ಕೂಡಿರುವ ಅಂಕಿ ಅಂಶಗಳಲ್ಲಿ ಬಜೆಟ್‌ ಹೆಚ್ಚು ಮಾಡಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಕರಾಳ ಕೃಷಿ ಮತ್ತು ಇತರ ಬಂಡವಾಳ ಶಾಹಿ ಕಂಪನಿಗಳ ಪರ ಕಾಯ್ದೆಗಳ ವಿರುದ್ಧ ದೇಶದ ಶೇ.70 ರಷ್ಟಿರುವ ಅನ್ನದಾತರಾದ ರೈತರು ನಡೆಸುತ್ತಿರುವ ಐತಿಹಾಸಿಕ ಹೋರಾಟ ನಡೆಯುತ್ತಿದೆ. ವಿತ್ತ ಸಚಿವರು ಸರ್ಕಾರದ ಸರ್ವಾಧಿ ಕಾರಿ ಧೋರಣೆಗೆ ತಕ್ಕಂತೆ ಕೃಷಿಕರ ನ್ಯಾಯಯುತ ಹೋರಾಟದ ಬೇಡಿಕೆಗಳ ಬಗ್ಗೆ ಜಾಣ ಮೌನ ವಹಿಸಿದ್ದಾರೆ. ಆತ್ಮ ನಿರ್ಭರ ಭಾರತ ಎಂಬುದು ವಾಸ್ತವದಲ್ಲಿ ಕಾರ್ಪೋರೇಟ್‌ ಅವಲಂಬಿತ ಭಾರತ ಎಂಬ ಪದಕ್ಕೆ ಪರ್ಯಾಯವಾಗಿದೆ. ತೀವ್ರ ಬಿಕ್ಕಟ್ಟಿನ ಸಂದರ್ಭದಲ್ಲೂ ಬಂಡವಾಳಶಾಹಿಗಳ ಆದೇಶಕ್ಕೆ ತಕ್ಕಂತೆ ರೂಪಿತವಾದ ಬಜೆಟ್‌ ಮಂಡಿಸಲಾಗಿದೆ. ಕೂಡಲೇ ಪೆಟ್ರೋಲ್‌, ಡೀಸೆಲ್‌, ಅಡುಗೆ ಎಣ್ಣೆ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸಮಿತಿ ಸದಸ್ಯರಾದ ತಿಪ್ಪೇಸ್ವಾಮಿ, ಕೆ. ಭಾರತಿ, ಪುಷ್ಪ, ಕಾವ್ಯ, ಸ್ಮಿತಾ, ಜ್ಯೋತಿ, ಸೌಮ್ಯ ಇತರರು ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದರು.

ಓದಿ :  ಉಲ್ಲಾಸ್‌ ಯುವ ಕಾಂಗ್ರೆಸ್‌·ಗೆ ಅಧ್ಯಕ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.