ದಾವಣಗೆರೆ: ತಾಲೂಕಿನಲ್ಲಿ 7800 ಡೋಸ್ ಕೊವ್ಯಾಕ್ಸಿನ್ ಹಂಚಿಕೆ
Team Udayavani, Jan 6, 2022, 2:34 PM IST
ದಾವಣಗೆರೆ: ತಾಲೂಕಿನಲ್ಲಿ ಸರ್ಕಾರದ ಸೂಚನೆಯಂತೆ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕೋವಿಡ್ -19 ನಿರೋಧಕ ಲಸಿಕೆಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮ ಆರಂಭವಾಗಿದ್ದು ಜ. 6ರಂದು ನಗರದ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ಲಸಿಕೆ ನೀಡಲು 7800 ಡೋಸ್ ಕೊವ್ಯಾಕ್ಸಿನ್ ಲಸಿಕೆ ಹಂಚಿಕೆ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾ ಧಿಕಾರಿ ಡಾ| ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.
ಈಗಾಗಲೇ ತಾಲೂಕಿನ ಗ್ರಾಮೀಣ ಪ್ರದೇಶಗಳ ಶಾಲಾ ಮಕ್ಕಳಿಗೆ ನೀಡುವ ಲಸಿಕೆ ಕಾರ್ಯಕ್ರಮ ಶೇ. 98ರಷ್ಟು ಪೂರ್ಣಗೊಂಡಿದ್ದು ಗೈರುಹಾಜರಿ, ಅನಾರೋಗ್ಯ ನಿಮಿತ್ತ ಬಾಕಿ ಇರುವ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿಕೆ ಎರಡೂ¾ರು ದಿನಗಳಲ್ಲಿ ಆಗಲಿದೆ. ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶೀಘ್ರ ಶೇ. 100 ಗುರಿ ಸಾಧನೆಯಾಗಲಿದೆ. ಉಳಿದಂತೆ ದಾವಣಗೆರೆ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳಿರುವುದರಿಂದ, ಮಕ್ಕಳಿಗೆ ಲಸಿಕೆ ನೀಡಿಕೆ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದಕ್ಕಾಗಿಯೇ ನಗರವೊಂದಕ್ಕೇ ಜ. 6ರಂದು ದಿನಕ್ಕೆ 7800 ಡೋಸ್ ಲಸಿಕೆ ಹಂಚಿಕೆ ಮಾಡಲಾಗಿದೆ. ಅಲ್ಲದೆ ತಾಲೂಕಿನ ಎಲ್ಲ 25 ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಶಾಲಾ ಮಕ್ಕಳಿಗೂ ಕೋವ್ಯಾಕ್ಸಿನ್ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾ ಕಾರಿ ಡಾ| ಎಲ್.ಡಿ. ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ