ದಾವಣಗೆರೆ ಮಹಾನಗರ ಪಾಲಿಕೆ: ಮೂರನೇ ಅವಧಿಗೆ ಬಿಜೆಪಿಗೆ ಮೇಯರ್, ಉಪ ಮೇಯರ್ ಸ್ಥಾನ

ಹೊಸ ಇತಿಹಾಸ ಬರೆದ ಗೋಪಿನಾಯ್ಕ

Team Udayavani, Feb 25, 2022, 12:12 PM IST

1-sdsad

ದಾವಣಗೆರೆ: ಭಾರೀ ಕುತೂಹಲ ಮೂಡಿಸಿದ್ದ ದಾವಣರೆ ಮಹಾನಗರ ಗೆಪಾಲಿಕೆಯ ಮೂರನೇ ಅವಧಿಗೆ ಬಿಜೆಪಿ ಮೇಯರ್, ಉಪ ಮೇಯರ್ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದೆ. ಶುಕ್ರವಾರ ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 30 ನೇ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಸೇರಿರುವ ಜಯಮ್ಮ ಗೋಪಿನಾಯ್ಕ,ಉಪ ಮೇಯರ್ ಆಗಿ 8 ನೇ ವಾರ್ಡ್ ನ ಬಿಜೆಪಿ ಯ ಗಾಯತ್ರಿ ಖಂಡೋಜಿರಾವ್ ಆಯ್ಕೆಯಾದರು.

ಪರಿಶಿಷ್ಟ ಜಾತಿ(ಮಹಿಳೆ) ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ನಿರೀಕ್ಷೆಯಂತೆ 30 ನೇ ವಾರ್ಡ್ ನ ಜಯಮ್ಮ ಗೋಪಿನಾಯ್ಕ ಆಯ್ಕೆಯಾದರು. ಕಾಂಗ್ರೆಸ್ ನ ನಾಗರತ್ನಮ್ಮ ವಿರುದ್ಧ ನಾಲ್ಕು ಮತಗಳ ಅಂತರದಿಂದ ಜಯ ಸಾಧಿಸಿದರು.

ಜಯಮ್ಮ ಗೋಪಿನಾಯ್ಕ 25 ಮತಗಳು ಪಡೆದರೆ. ನಾಗರತ್ನಮ್ಮ 25 ಮತ ಪಡೆದರು.ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಗಾಯತ್ರಿ ಬಾಯಿ ಖಂಡೋಜಿರಾವ್ 29 ಮತ ಪಡೆದರು. ಕಾಂಗ್ರೆಸ್ ನ ಶ್ವೇತಾ ಶ್ರೀನಿವಾಸ್ 25 ಮತ ಪಡೆದರು.

ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂಟನೇ ವಾರ್ಡ್ ನ ಬಿಜೆಪಿಯ ಗಾಯತ್ರಿ ಖಂಡೋಜಿರಾವ್ ಕಾಂಗ್ರೆಸ್ ಶ್ವೇತ ಶ್ರೀನಿವಾಸ್ ವಿರುದ್ದ ನಾಲ್ಕು ಮತಗಳ ಜಯಗಳಿಸಿದರು.

ಒಟ್ಟು 45 ಸದಸ್ಯತ್ವ ಬಲದ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ 18 ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ 29 ಮತದಾರರ ಬಲ ಹೊಂದಿದ್ದು ಸತತ ಮೂರನೇ ಬಾರಿಗೆ ಮೇಯರ್,‌ಉಪ ಮೇಯರ್ ಗಾದಿಗೆ ಏರುವಲ್ಲಿ ಯಶಸ್ವಿಯಾಗಿದೆ.ಮಹಾನಗರ ಪಾಲಿಕೆಯಲ್ಲಿ ಅತಿ ಹೆಚ್ಚಿನ ಸದಸ್ಯರ ಹೊಂದಿರುವ ಕಾಂಗ್ರೆಸ್ ಮೂರನೇ ಬಾರಿಯೂ ಮೇಯರ್, ಉಪ ಮೇಯರ್ ಹುದ್ದೆಗೇರುವಲ್ಲಿ ವಿಫಲವಾಗಿದೆ.

ಮೊದಲ ಮತ್ತು ಎರಡನೇ ಅವಧಿಯ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಭಾರೀ ಉತ್ಸಾಹ ದೊಂದಿಗೆ ರಾಜಕೀಯ ಕಸರತ್ತು ನಡೆಸಿದ್ದ ಕಾಂಗ್ರೆಸ್ ತನ್ನ ಸದಸ್ಯರೇ ಕೈ..ಕೊಟ್ಟ ಪರಿಣಾಮ ಮಹಾ ನಗರಪಾಲಿಕೆಯ ಅಧಿಕಾರ ಪಡೆಯುವಲ್ಲಿ ಎಡವಿತ್ತು. ಮೂರನೇ ಅವಧಿಗೂ ಕಾಂಗ್ರೆಸ್ ಗೆ ಮೇಯರ್, ಉಪ ಮೇಯರ್ ಗಾದಿ ಕೈಗೆಟುಕದ ದ್ರಾಕ್ಷಿ ಯಂತಾಗಿದೆ. ಕಾಂಗ್ರೆಸ್ ಸದಸ್ಯರು ಮತ್ತು ಪಕ್ಷೇತರರು ಅಂತಿಮ ಗಳಿಗೆಯಲ್ಲಿ ಕೈ ಕೊಡುವುದು ಮಾಮೂಲಿ ಎನ್ನುವಂತಾಗಿದೆ. ಕಾಂಗ್ರೆಸ್ ಮತ್ತೆ ಕೈ ಸುಟ್ಟುಕೊಂಡಿದೆ.

ಮೇಯರ್, ಉಪ ಮೇಯರ್ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ ಪ್ರಾರಂಭ ವಾಗಿದ್ದವು. ಮೇಯರ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಶಿಲ್ಪಾ ಜಯಪ್ರಕಾಶ್, ಜಯಮ್ಮ ಗೋಪಿನಾಯ್ಕ ತಂತ್ರ, ಪ್ರತಿತಂತ್ರ ರೂಪಿಸಿದ್ದರು. ಜಿಲ್ಲಾ ಬಿಜೆಪಿ ಮುಖಂಡರ ಮನವೊಲಿಸುವ ಭಾರೀ ಪ್ರಯತ್ನ ನಡೆಸಿದ್ದರು. ಶಿಲ್ಪ ಜಯಪ್ರಕಾಶ್ ಉಪ ಮೇಯರ್ ಹುದ್ದೆ ಅಲಂಕರಿಸಿರುವ ಹಿನ್ನೆಲೆಯಲ್ಲಿ ತಮಗೆ ಮೇಯರ್ ಸ್ಥಾನ ನೀಡಬೇಕು ಎಂದು ಜಯಮ್ಮ ಗೋಪಿನಾಯ್ಕ ಪಟ್ಟು ಹಿಡಿದಿದ್ದರು. ಬಿಜೆಪಿ ಅಧಿಕಾರಕ್ಕೆ ಏರುವಲ್ಲಿ ಸಹಕಾರ‌ ನೀಡಿರುವುದರಿಂದ ತಮಗೆ ಅವಕಾಶ ನೀಡಬೇಕು ಎಂದು ನಾಯಕರಿಗೆ ಕೋರಿದ್ದರು.

ಜಯಮ್ಮ ಗೋಪಿನಾಯ್ಕ ಪಕ್ಷೇತರರಾಗಿ ಆಯ್ಕೆ ಆಗಿದ್ದರೂ ಅಂತಿಮವಾಗಿ ಮೇಯರ್ ಸ್ಥಾನ ನೀಡಲು ಪಕ್ಷದ ಮುಖಂಡರು ನಿರ್ಧರಿಸಿದರು. ಮೇಯರ್ ಆಗಿ ಆಯ್ಕೆಯಾಗಿರುವ ಜಯಮ್ಮ ಗೋಪಿನಾಯ್ಕ ಹೊಸ ಇತಿಹಾಸ ಬರೆದರು. ಪಕ್ಷೇತರರಾಗಿ ಆಯ್ಕೆಯಾದ ವರು ನಗರಪಾಲಿಕೆಯ ಉನ್ನತ ಸ್ಥಾನಕ್ಕೇರಿದ ಉದಾಹರಣೆಯೇ ಇಲ್ಲ. ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣವಾದವರಿಗೆ ಸಚಿವ ಸ್ಥಾನಮಾನ ನೀಡಿರುವಂತೆ ದಾವಣಗೆರೆ ಮಹಾನಗರ ಪಾಲಿಕೆಯ ಅಧಿಕಾರದ ಗದ್ದುಗೆ ಏರಲು ಸಹಕಾರ ನೀಡಿದವರಿಗೆ ನಾಯಕರು ಮನ್ನಣೆ ನೀಡಿದರು. ದಾವಣಗೆರೆ ಉತ್ತರಕ್ಕೆ ಮೇಯರ್ ಸ್ಥಾನ ನೀಡಿದರೆ ದಕ್ಷಿಣಕ್ಕೆ ಉಪ ಮೇಯರ್ ಸ್ಥಾನ ನೀಡಬೇಕು ಎನ್ನುವ ಸಿದ್ಧ ಸೂತ್ರದಂತೆ ಉತ್ತರ ಕ್ಷೇತ್ರದ ಜಯಮ್ಮ ಗೋಪಿನಾಯ್ಕ ಮೇಯರ್ ಆದರೆ, ದಕ್ಷಿಣ ದ ಗಾಯತ್ರಿ ಖಂಡೋಜಿರಾವ್ ಉಪ ಮೇಯರ್ ಸ್ಥಾನ ಅಲಂಕರಿಸಿದರು.

ಮೇಯರ್, ಉಪ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಾಳೆಯದಲ್ಲಿ ಆತಂಕ ಉಂಟಾಗಿತ್ತು. ಕಳೆದ ಎರಡು ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ‌ ಬೆಂಬಲಿಸಿದ್ದ ಇಬ್ಬರು ಮುನಿಸಿಕೊಂಡು ನಾಟ್ ರೀಚಬಲ್ ಆಗಿದ್ದರು. ‌ಕಾಂಗ್ರೆಸ್ ಬೆಂಬಲಿಸಿದ್ದ ಪಕ್ಷೇತರ ಸದಸ್ಯರೊಬ್ಬರು ಬಿಜೆಪಿಯತ್ತ ವಾಲಿದ್ದು ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿತ್ತು. ನಿಕಟಪೂರ್ವ ಮೇಯರ್ ಎಸ್.ಟಿ. ವೀರೇಶ್ ಒಳಗೊಂಡಂತೆ ಅನೇಕರು ಗುರುವಾರ ಮಧ್ಯಾಹ್ನದಿಂದ ಯಾರ ಸಂಪರ್ಕಕ್ಕೂ ದೊರೆಯದೇ ಹೋಗಿದ್ದು ಕಮಲ ಪಾಳೆಯದಲ್ಲಿ ಉಂಟಾಗಿದ್ದ ಆತಂಕದ ಪ್ರತೀಕವಾಗಿತ್ತು. ಕೊನೆಗೂ ಬಿಜೆಪಿ ಹಾಗೂ ಬೆಂಬಲಿತ ಸದಸ್ಯರ ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿ ಯಾದ ನಾಯಕರು ಮಹಾನಗರ ಪಾಲಿಕೆಯ ಅಧಿಕಾರ ಉಳಿಸಿಕೊಳ್ಳುವಲ್ಲೂ ಯಶ ಸಾಧಿಸಿದರು.

ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣ ಸ್ವಾಮಿ ಗುರುವಾರ ಜಿ.ಎಂ.ಐ.ಟಿ.ಅತಿಥಿ ಗೃಹದಲ್ಲಿ ದಿನವಿಡೀ ರಾಜಕೀಯ ತಂತ್ರ ಹೆಣೆದರು.

ಇನ್ನುಳಿದ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ತೇಜಸ್ವಿನಿಗೌಡ ಇತರರು ಹೆಲಿಕಾಪ್ಟರ್ ನಲ್ಲಿ ದಾವಣಗೆರೆಗೆ ಆಗಮಿಸಿದರು. ಎಲ್ಲರೂ ಜಿಎಂಐಟಿ ಅತಿಥಿ ಗೃಹದಿಂದ ನೇರವಾಗಿ ಮಹಾನಗರ ಪಾಲಿಕೆಗೆ ದೌಡಾಯಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.