ಪಾಲಿಕೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ

ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ಆರೋಪ !ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಗೆ ನಿರ್ಧಾರ 

Team Udayavani, Feb 28, 2021, 3:45 PM IST

Congress

ದಾವಣಗೆರೆ: ಕಾನೂನಾತ್ಮಕವಾಗಿ ಸಂಪೂರ್ಣ ಅಭಿವೃದ್ಧಿಪಡಿಸದ 52 ಎಕರೆ ವಿಸ್ತೀರ್ಣದ ಹಲವು ಬಡಾವಣೆಗಳಲ್ಲಿ ಅಕ್ರಮವಾಗಿ ಡೋರ್‌ ನಂಬರ್‌ ನೀಡುವ ಮೂಲಕ ಮಹಾನಗರ ಪಾಲಿಕೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೂಲಕ ದೂರು ಸಲ್ಲಿಸಲಾಗುವುದು ಎಂದು ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಗಂಭೀರ ಆರೋಪ ಮಾಡಿದರು. ಮಾಜಿ ಮೇಯರ್‌ ಅವಧಿಯಲ್ಲಿ ಅಕ್ರಮವಾಗಿ ಮನೆ ನಂಬರ್‌ ಕೊಟ್ಟಿರುವ 52 ಎಕರೆ ಬಡಾವಣೆಗಳಲ್ಲಿ 21 ಎಕರೆ ಬಡಾವಣೆ ಸ್ವತಃ ಮಾಜಿ ಮೇಯರ್‌ ಅವರಿಗೇ ಸೇರಿದ್ದಾಗಿವೆ. ತಮ್ಮ ಆಡಳಿತಾವಧಿಯಲ್ಲಿ ಯಾರಿಂದಲೂ ಒಂದು ಕಪ್‌ ಚಹಾ ಕುಡಿಯದೆ ಜನರ ಕೆಲಸ ಮಾಡಿದ್ದೇನೆ ಎನ್ನುವ ಅವರು, ಈ ವಿಚಾರದಲ್ಲಿ ಭಾರೀ ಭೋಜನವನ್ನೇ ಸವಿದಿದ್ದಾರೆ ಎಂದು ಟೀಕಿಸಿದರು.

ದೂಡಾ ಕಾಯ್ದೆ ಪ್ರಕಾರ ಬಡಾವಣೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಪಡಿಸಿದ ಬಳಿಕವೇ ಡೋರ್‌ ನಂಬರ್‌ ಕೊಡ  ಬೇಕೆಂಬ ನಿಯಮವಿದೆ. ಆದರೆ ಇಲ್ಲಿ ಒಳಚರಂಡಿ, ಡಾಂಬರ್‌ ರಸ್ತೆ, ವಿದ್ಯುತ್‌ ಸಂಪರ್ಕ ಸೇರಿದಂತೆ ವಿವಿಧ ಮೂಲಭೂತ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಇದ್ದರೂ ಡೋರ್‌ ನಂಬರ್‌ಕೊಟ್ಟು ಭ್ರಷ್ಟಾಚಾರ ಮಾಡಲಾಗಿದೆ. ಈ ಕುರಿತು ಸಮಗ್ರ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು ನ್ಯಾಯಾ ಲಯಕ್ಕೆ ದೂರು ಸಲ್ಲಿಸಲಾಗುವುದು ಎಂದರು.

ಮಿತಿ ಮೀರಿ ತೆರಿಗೆ ಹೆಚ್ಚಳ: ಹಿಂದಿನ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಕ್ಷಾಮವಿದ್ದರೂ ಆಸ್ತಿ ತೆರಿಗೆ ಏರಿಕೆ ಮಾಡದೆ ಜನರಿಗೆ ಅನುಕೂಲ ಕಲ್ಪಿಸಲಾಗಿತ್ತು. ಆದರೆ ಕೊರೊನಾ ಸಂಕಷ್ಟದಲ್ಲಿಯೂ ಬಿಜೆಪಿಯವರು ಕಾನೂನು ಮೀರಿ ಅತ್ಯಧಿಕ ತೆರಿಗೆ ಹೆಚ್ಚಿಸಿದ್ದಾರೆ. ಗೃಹ ತೆರಿಗೆ ಶೇ. 20, ವಾಣಿಜ್ಯ ತೆರಿಗೆ ಶೇ. 24ರಷ್ಟು ಹೆಚ್ಚಳ ಮಾಡಿದ್ದಾರೆ ಎಂದು ಆರೋಪಿಸಿದ ದಿನೇಶ್‌ ಶೆಟ್ಟಿ, “ಮನೆ ಬಾಗಿಲಿಗೆ ಮಹಾನಗರಪಾಲಿಕೆ’ ಕಾರ್ಯಕ್ರಮ ಕೇವಲ ಪ್ರಚಾರಕ್ಕಾಗಿ ಮಾಡಿದ ಕಾರ್ಯಕ್ರಮವಾಯಿತು. ಇದರಿಂದ ಒಂದಿಷ್ಟು ಕಂದಾಯ ವಸೂಲಿ ಮಾಡಿರುವುದನ್ನು ಬಿಟ್ಟರೆ ಸಾರ್ವಜನಿಕರಿಗೆ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಈ ಕಾರ್ಯಕ್ರಮ ಒಂದು ವೇಳೆ ಯಶಸ್ವಿಯಾಗಿದ್ದರೆ ಸಮಾರೋಪ ಸಮಾರಂಭಕ್ಕೆ ಜನರ ಕೊರತೆ ಕಾಣುತ್ತಿರಲಿಲ್ಲ ಎಂದು ಹೇಳಿದರು.

ಕ್ರಮ ಏನಾಗುತ್ತೋ ನೋಡೋಣ: ಮಹಾನಗರ ಪಾಲಿಕೆ ವಿರೋಧಪಕ್ಷದ ನಾಯಕ ಎ.ನಾಗರಾಜ್‌ ಮಾತನಾಡಿ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಈ ಹಿಂದೆ ದೇವರಮನಿಯವರು ಪಡೆದಿರುವ ಅಕ್ರಮ ನಿವೇಶನಗಳನ್ನು ವಾಪಸ್‌ ಪಡೆಯುವುದಾಗಿ ಹೇಳಿದ್ದರು. ಅವರ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದರು. ದೇವರಮನಿಯವರು ಈಗ ಬಿಜೆಪಿಗೆ ಸೇರಿದ್ದರಿಂದ ಅವರ ಮೇಲೆ ದೂಡಾ ಅಧ್ಯಕ್ಷರು ಯಾವ ಕ್ರಮ ಕೈಗೊಳ್ಳುತ್ತಾರೋ ನೋಡೋಣ. ಈ ಬಗ್ಗೆ ನಾವೂ ಕಾಯುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.