Udayavni Special

ಪಾಲಿಕೆಯಲ್ಲಿ ಮತ್ತೆ ಅರಳಿದ ಕಮಲ

ಬಿ.ಜೆ.ಅಜಯಕುಮಾರ್‌ ಮೇಯರ್‌-ಸೌಮ್ಯ ಉಪ ಮೇಯರ್‌ ಕಾಂಗ್ರೆಸ್‌ನ ಮೂವರು ಪಾಲಿಕೆ ಸದಸ್ಯರು ಚುನಾವಣೆಗೆ ಗೈರು

Team Udayavani, Feb 20, 2020, 11:20 AM IST

20-February-03

ದಾವಣಗೆರೆ: ಕಾಂಗ್ರೆಸ್‌ ಸದಸ್ಯರ ಸಭಾತ್ಯಾಗ, ಮೂವರು ಸದಸ್ಯರ ಗೈರು, ಬಿಜೆಪಿ ಸದಸ್ಯರ ರಣೋತ್ಸಾಹದ ನಡುವೆ ಬುಧವಾರ ನಡೆದ ಚುನಾವಣೆಯಲ್ಲಿ ನೂತನ ಮೇಯರ್‌ ಆಗಿ ಬಿಜೆಪಿಯ 17ನೇ ವಾರ್ಡ್‌ ಸದಸ್ಯ ಬಿ.ಜೆ. ಅಜಯ್‌ ಕುಮಾರ್‌, ಉಪ ಮೇಯರ್‌ ಆಗಿ 13ನೇ ವಾರ್ಡ್‌ನ ಸೌಮ್ಯ ನರೇಂದ್ರಕುಮಾರ್‌ ಆಯ್ಕೆಯಾದರು.

ಸಾಕಷ್ಟು ಜಿದ್ದಾಜಿದ್ದಿ, ತೀವ್ರ ಪೈಪೋಟಿ ಮತ್ತು ಸಮಬಲದ ಕಾಳಗಕ್ಕೆ, ರಣರೋಚಕ ಕುತೂಹಲಕ್ಕೆ ಕಾರಣವಾಗಿದ್ದ ಮೇಯರ್‌, ಉಪ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ 28ನೇ ವಾರ್ಡ್‌ ಸದಸ್ಯ ಜೆ.ಎನ್‌. ಶ್ರೀನಿವಾಸ್‌, 20ನೇ ವಾರ್ಡ್‌ನ ಯಶೋಧ ಉಮೇಶ್‌, 37ನೇ ವಾರ್ಡ್ ನ ಶ್ವೇತಾ ಜೆ.ಎನ್‌. ಶ್ರೀನಿವಾಸ್‌ ಗೈರು ಹಾಜರಿ ಬಿಜೆಪಿಯ ಗೆಲುವಿನ ಮಾರ್ಗವನ್ನು ಸುಲಭವಾಗಿಸಿತು. ಒಂದೊಮ್ಮೆ ಕಾಂಗ್ರೆಸ್‌ನ ಮೂವರು ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಲ್ಲಿ ಬಿಜೆಪಿ ಗೆಲುವು ಅಷ್ಟೊಂದು ಸುಲಭವಾಗಿರಲಿಲ್ಲ, ಜೆಡಿಎಸ್‌ ಸದಸ್ಯೆ ನೂರ್‌ಜಹಾನ್‌ ಹಾಗೂ 45ನೇ ವಾರ್ಡ್‌ನ ಪಕ್ಷೇತರ ಸದಸ್ಯ ಎಚ್‌.ಬಿ. ಉದಯ್‌ಕುಮಾರ್‌ ಕಾಂಗ್ರೆಸ್‌ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್‌ ಸದಸ್ಯೆ ನೂರ್‌ಜಹಾನ್‌ ಉಪ ಮೇಯರ್‌ ಸ್ಥಾನಕ್ಕೆ ನಾಮಪತ್ರ ಸಹ ಸಲ್ಲಿಸಿದ್ದರು. ಆದರೆ ಮೂವರು “ಕೆ’ç ಸದಸ್ಯರ ಗೈರು ಹಾಜರಿ ಬಿಜೆಪಿಗೆ ಪಾಲಿಕೆಯಲ್ಲಿ ಮತ್ತೂಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪರೋಕ್ಷವಾಗಿ ಸಹಕಾರಿಯಾಯಿತು.

ಚುನಾವಣಾ ಪ್ರಕ್ರಿಯೆಯಲ್ಲಿ ಒಟ್ಟು 59ಸದಸ್ಯರು ಹಾಜರಾಗಿದ್ದರು. ಮಧ್ಯದಲ್ಲಿ ಕಾಂಗ್ರೆಸ್‌ ಸದಸ್ಯರು, ಶಾಸಕರು, ವಿಧಾನ ಪರಿಷತ್ತು ಸದಸ್ಯರು, ಅಧಿಕಾರಿಗಳು ಸರ್ಕಾರದ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಭಾತ್ಯಾಗ ಮಾಡಿದ್ದರಿಂದ ಸಭೆಯಲ್ಲಿ ಹಾಜರಿದ್ದ 31 ಮಂದಿ ಮೇಯರ್‌, ಉಪ ಮೇಯರ್‌, ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಮತದಾನ ಮಾಡಿದರು.

ಬೆಳಗ್ಗೆ 8.30 ರಿಂದ 10.30ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಮೇಯರ್‌ ಸ್ಥಾನಕ್ಕೆ ಬಿಜೆಪಿಯಿಂದ ಬಿ.ಜೆ.ಅಜಯ್‌ಕುಮಾರ್‌ ಒಂದು ಜೊತೆ ನಾಮಪತ್ರ ಸಲ್ಲಿಸಿದರು. ಕೆ. ಪ್ರಸನ್ನಕುಮಾರ್‌ ಸೂಚಕರಾಗಿದ್ದರೆ, ರಾಕೇಶ್‌ ಜಾಧವ್‌ ಅನುಮೋದಕರಾಗಿದ್ದರು. ಕಾಂಗ್ರೆಸ್‌ನಿಂದ ಮೇಯರ್‌ ಸ್ಥಾನಕ್ಕೆ 22ನೇ ವಾರ್ಡ್‌ ಸದಸ್ಯ ದೇವರಮನೆ ಶಿವಕುಮಾರ್‌ 2 ಜೊತೆ ನಾಮಪತ್ರ ಸಲ್ಲಿಸಿದ್ದರು. ಗಡಿಗುಡಾಳ್‌ ಮಂಜುನಾಥ್‌ ಸೂಚಕ, ಕೆ. ಚಮನ್‌ಸಾಬ್‌ ಅನುಮೋದಕರಾಗಿದ್ದರು.

ಉಪ ಮೇಯರ್‌ ಸ್ಥಾನಕ್ಕೆ 13ನೇ ವಾರ್ಡ್‌ನ ಬಿಜೆಪಿ ಸದಸ್ಯೆ ಸೌಮ್ಯ ನರೇಂದ್ರಕುಮಾರ್‌ ಸಲ್ಲಿಸಿದ ನಾಮಪತ್ರಕ್ಕೆ ಬಿ.ಎ. ಯಶೋಧ ಸೂಚಕರಾಗಿದ್ದರೆ, ಗೌರಮ್ಮ ಅನುಮೋದಕರಾಗಿದ್ದರು. ಕಾಂಗ್ರೆಸ್‌ನಿಂದ 15ನೇ ವಾರ್ಡ್‌ ಸದಸ್ಯೆ ಆಶಾ ಉಮೇಶ್‌ 2 ಜೊತೆ ನಾಮಪತ್ರ ಸಲ್ಲಿಸಿದ್ದರು. ಸೈಯದ್‌ ಚಾರ್ಲಿ ಸೂಚಕರಾಗಿದ್ದರು. ಸುಧಾ ಇಟ್ಟಿಗುಡಿ ಮಂಜುನಾಥ್‌ ಅನುಮೋದಕರಾಗಿದ್ದರು. ಜೆಡಿಎಸ್‌ನ ಬಿ. ನೂರ್‌ಜಹಾನ್‌ ಸಲ್ಲಿಸಿದ್ದ ನಾಮಪತ್ರಕ್ಕೆ ಶಿವಲೀಲಾ ಸೂಚಕರು, ಬಿ.ಎಚ್‌. ವಿನಾಯಕ ಪೈಲ್ವಾನ್‌ ಅನುಮೋದಕರಾಗಿದ್ದರು. ಚುನಾವಣಾಧಿಕಾರಿಯಾಗಿದ್ದ ಬೆಂಗಳೂರು ಪ್ರಾದೇಶಿಕ ಆಯುಕ್ತ ವಿ.ಪಿ. ಇಕ್ಕೇರಿ ಚುನಾವಣಾ ಪ್ರಕ್ರಿಯೆ ನಡೆಸಿದರು. ಉಚ್ಚ ನ್ಯಾಯಾಲಯದ ಆದೇಶದನ್ವಯ ಪ್ರತಿಯೊಂದು ಪ್ರಕ್ರಿಯೆಯನ್ನು ವೀಡಿಯೋ ಮಾಡಲಾಯಿತು. ನಾಲ್ಕು ಕಡೆ ಸಿಸಿ ಟಿವಿ ಅಳವಡಿಸಲಾಗಿತ್ತು. ಇಡೀ ಚುನಾವಣೆ ಪ್ರಕ್ರಿಯೆಯಿಂದ ಮಾಧ್ಯಮದವರನ್ನೂ ಹೊರಗಿಡಲಾಗಿತ್ತು.

ಮೇಯರ್‌, ಉಪ ಮೇಯರ್‌, ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಮಾಧ್ಯಮದವರಿಗೆ ಅವಕಾಶ ಮಾಡಿಕೊಡಲಾಯಿತು. ಸ್ಥಳದ ಕೊರತೆ ಕಾರಣಕ್ಕೆ ಮಾಧ್ಯಮದವರಿಗೆ ಅವಕಾಶ ನೀಡಲಾಗಲಿಲ್ಲ ಎಂದು ಚುನಾವಣಾಧಿಕಾರಿ ಸಮಜಾಯಿಷಿ ನೀಡಿದರು. ಮೇಯರ್‌, ಉಪ ಮೇಯರ್‌ ಆಯ್ಕೆ ರಾಜ್ಯ ಉಚ್ಚ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿದ್ದು, ಫೆ. 24 ರ ಉಚ್ಚ ನ್ಯಾಯಾಲಯದ ತೀರ್ಪಿನ ಮೇಲೆ ನೂತನ ಮೇಯರ್‌, ಉಪ ಮೇಯರ್‌ ಅಧಿಕಾರದ ಭವಿಷ್ಯ ನಿರ್ಧಾರವಾಗಲಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಕೃಷಿ ಚಟುವಟಿಕೆಗಳಿಗೆ ಯಾವುದೇ ವ್ಯತ್ಯಾಸವಾಗಬಾರದು: ಸಚಿವ ಬಿ.ಸಿ ಪಾಟೀಲ್ ಸೂಚನೆ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಮುಂಬೈ ಇಡೀ ಆಸ್ಪತ್ರೆ ಲಾಕ್ ಡೌನ್: 26 ನರ್ಸ್, ಮೂವರು ವೈದ್ಯರಿಗೆ ಕೋವಿಡ್ 19 ವೈರಸ್ ದೃಢ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಭಾರತದಿಂದ ಬ್ರಿಟನ್‌ ಪ್ರಜೆಗಳನ್ನು ಕರೆತರಲು ಏಳು ವಿಶೇಷ ವಿಮಾನ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ ಭೀತಿ ನಡುವೆ ಮಂಗನ ಖಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೋವಿಡ್ 19 ಮಹಾಮಾರಿ ವಿರುದ್ಧ ದೀರ್ಘಕಾಲ ಹೋರಾಡಬೇಕಾಗಿದೆ: ಪ್ರಧಾನಿ ಮೋದಿ

ಕೊರೊನಾ ಹರಡಲು 5 ಜಿ ಕಾರಣ ?

ಕೊರೊನಾ ಹರಡಲು 5 ಜಿ ಕಾರಣ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dg-tdy-1

ಲಾಕ್‌ಡೌನ್‌ ಉಲ್ಲಂಘಿಸಿದ್ರೆ ನಿರ್ದಾಕ್ಷಿಣ್ಯ ಕ್ರಮ

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

ಸೂಪರ್‌ವೈಸ್ಡ್ ಕ್ವಾರಂಟೈನ್‌ ಸೆಂಟರ್‌ನಲ್ಲಿ 12 ಮಂದಿ

ಸೂಪರ್‌ವೈಸ್ಡ್ ಕ್ವಾರಂಟೈನ್‌ ಸೆಂಟರ್‌ನಲ್ಲಿ 12 ಮಂದಿ

dg-tdy-01

ಲಾಕ್‌ಡೌನ್‌ ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕ್ರಮ

ಇದ್ದಲ್ಲಿಯೇ ಪಡಿತರ ಪಡೆಯಿರಿ: ಜಿಲ್ಲಾಧಿಕಾರಿ

ಇದ್ದಲ್ಲಿಯೇ ಪಡಿತರ ಪಡೆಯಿರಿ: ಜಿಲ್ಲಾಧಿಕಾರಿ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಮೈಸೂರು ಜಿಲ್ಲೆಯ ಮೊದಲ ಸೋಂಕಿತ ಗುಣಮುಖನಾಗಿ ಬಿಡುಗಡೆ

ಮೈಸೂರು ಜಿಲ್ಲೆಯ ಮೊದಲ ಸೋಂಕಿತ ಗುಣಮುಖನಾಗಿ ಬಿಡುಗಡೆ

ಇಎಂಐ ಕಟ್ಟಿಲ್ವಾ ?

ಇಎಂಐ ಕಟ್ಟಿಲ್ವಾ ?

ಮನೆಯೇ ಚಿತ್ರಾಲಯ

ಮನೆಯೇ ಚಿತ್ರಾಲಯ

isiri-tdy-4

ಬಂತು ನೋಡಿ ವಾಟ್ಸ್ ಆ್ಯಪ್ ಬ್ಯಾಂಕಿಂಗ್‌

ಆರ್ಟ್ ಆಫ್ ಸಿಂಪಲ್ ಲಿವಿಂಗ್

ಆರ್ಟ್ ಆಫ್ ಸಿಂಪಲ್ ಲಿವಿಂಗ್