ಕೊಟ್ಪಾ ಕಾರ್ಯಾಚರಣೆ: 16 ಪ್ರಕರಣ ದಾಖಲು

ನೋಟಿಸ್‌ ನೀಡಿದ 15 ದಿನಗಳ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ಕಡ್ಡಾಯವಾಗಿ ತೆರವುಗೊಳಿಸಬೇಕು.

Team Udayavani, Feb 29, 2020, 11:15 AM IST

29-February-04

ದಾವಣಗೆರೆ: ದಾವಣಗೆರೆಯನ್ನು ಕೊಟ್ಪಾ ಉನ್ನತ ಅನುಷ್ಠಾನ ಜಿಲ್ಲೆ ಎಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ನಗರದ ಎಚ್‌. ಕೆ.ಆರ್‌. ಸರ್ಕಲ್‌ ಸುತ್ತಮುತ್ತ ಪ್ರದೇಶಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ದಾಳಿ ನಡೆಸಿ, ಒಟ್ಟು 16 ಪ್ರಕರಣ ದಾಖಲಿಸಿದೆ.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿ ನಿಯಮ-2003 ಸೆಕ್ಷನ್‌ 4ರಡಿ 3 ಹಾಗೂ ಸೆಕ್ಷನ್‌ 6ಎ ಅಡಿ 2 ಪ್ರಕರಣ, ಸೆಕ್ಷನ್‌ 6ಬಿರ ಅಡಿ 11ಪ್ರಕರಣ ಸೇರಿ ಒಟ್ಟು 16 ಪ್ರಕರಣ ದಾಖಲಿಸಿಕೊಂಡು, 1,600 ರೂ. ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಗಿದೆ.

ತಂಡವು ನಗರದ ಎಚ್‌.ಕೆ.ಆರ್‌. ಸರ್ಕಲ್‌ ಸುತ್ತಮುತ್ತ ಪ್ರದೇಶಗಳಲ್ಲಿರುವ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ಹೊಟೇಲ್‌, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಪಾನ್‌ಶಾಪ್‌ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮಾರುವವರು ಹಾಗೂ ತಂಬಾಕು ಉತ್ಪನ್ನ ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದೆ. ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರು ಧೂಮಪಾನ ನಿಷೇಧದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ಇದೇ ಸಂದರ್ಭದಲ್ಲಿ ಸೂಚಿಸಲಾಗಿದೆ.

ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ಜಿಲ್ಲಾ ಅಂಕಿತ ಅಧಿ ಕಾರಿ ಡಾ| ರುದ್ರಸ್ವಾಮಿ, ವಿಭಾಗೀಯ ಸಂಯೋಜಕ ಮಹಾಂತೇಶ್‌ ಉಳ್ಳಾಗಡ್ಡಿ, ಆಹಾರ ಸುರಕ್ಷಿತ ಅಧಿಕಾರಿ ಕೊಟ್ರೇಶ್‌, ಆರೋಗ್ಯ ಮೇಲ್ವಿಚಾರಕ ರಾಚಪ್ಪ ಕುಪ್ಪಸ್ತ, ಶಿಕ್ಷಣ ಇಲಾಖೆಯ ಡಾ| ವೀರಪ್ಪ, ಹಿರಿಯ ಆರೋಗ್ಯ ಸಹಾಯಕ ವೆಂಕಟಾಚಾಲ ಕುಮಾರ್‌, ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಉಮಾಪತಿ, ಕೆ.ಟಿ.ಜೆ.ನಗರ ಪೊಲೀಸ್‌ ಠಾಣೆಯ ಎಎಸ್‌ಐ ವಿರುಪಾಕ್ಷ.ಜಿ.ಬಿ.,ಇತರರಿದ್ದರು ಎಂದು ಪ್ರಕಟಣೆ ತಿಳಿಸಿದೆ .

ಕೊಟ್ಪಾ 2003ರ ಕಾಯ್ದೆಯ ಸೆಕ್ಷನ್‌ 6ಬಿ ಅನುಸಾರ ಶೈಕ್ಷಣಿಕ ಸಂಸ್ಥೆಯ 100 ಗಜ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ಅಂಗಡಿಗಳಿಗೆ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ನಗರದದ್ಯಾಂತ ಸೆಕ್ಷನ್‌ 6ಬಿ ಪರಿಣಾಮಕಾರಿ ಅನುಷ್ಠಾನಕ್ಕೆ ತಂಬಾಕು ಮಾರಾಟ ಮಾಡುವವರ ಮಾಲೀಕರಿಗೆ ಎಚ್ಚರಿಕೆ ನೋಟಿಸ್‌ ನೀಡಲಾಗಿದ್ದು, ನೋಟಿಸ್‌ ನೀಡಿದ 15 ದಿನಗಳ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ಕಡ್ಡಾಯವಾಗಿ ತೆರವುಗೊಳಿಸಬೇಕು. ಒಂದು ವೇಳೆ ತೆರವುಗೊಳಿಸದೆ ಇದ್ದಲ್ಲಿ ಕಾನೂನು ರೀತಿ ನಿರ್ದಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು.
ಡಾ| ವೆಂಕಟೇಶ್‌,
ತಾಲ್ಲೂಕು ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.