ಸ್ಮಾರ್ಟ್‌ಸಿಟಿ ಕಾಮಗಾರಿ ಸ್ಲೋ: ಸಿದ್ದೇಶ್ವರ್‌ ಗರಂ

ಕಾಲಮಿತಿಯಲ್ಲಿ ಮುಗಿಸದಿದ್ದಲ್ಲಿ ದಂಡ: ಗುತ್ತಿಗೆದಾರರಿಗೆ ಎಚ್ಚರಿಕೆಡಿಸೆಂಬರ್‌ ಒಳಗೆ ಎಲ್ಲ ಕಾಮಗಾರಿ ಮುಗಿಸಿ

Team Udayavani, Jan 30, 2020, 11:27 AM IST

30-January-4

ದಾವಣಗೆರೆ: ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಂಸದ ಜಿ.ಎಂ.ಸಿದ್ದೇಶ್ವರ್‌, ಕಾಲಮಿತಿಯೊಳಗೆ ಮುಗಿಸದೇ ಇದ್ದರೆ ದಂಡ ವಿಧಿಸಲಾಗುವುದು ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ನಗರದ ವಿವಿಧೆಡೆ ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ಸ್ಮಾರ್ಟ್‌ ಸಿಟಿ ಯೋಜನೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ವೀಕ್ಷಿಸಿದ ಅವರು, ಯಾವ್ಯಾವ ಕಾಮಗಾರಿ ಯಾವ ದಿನ ಆರಂಭವಾಗಿದೆ. ಎಷ್ಟು ಕಾಲಮಿತಿ ನಿಗದಿಪಡಿಸಲಾಗಿದೆ ಎನ್ನುವ ಮಾಹಿತಿ ಪಡೆದು, ನಿಗದಿತ ಕಾಲದೊಳಗೆ ವರ್ಕ್‌ ಮುಗಿಸದೇ ಇದ್ದರೆ ಪೆನಾಲ್ಟಿ ಹಾಕಿ ಎಂದು ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 12.60 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಕಮಾಂಡ್‌ ಮತ್ತು ಕಂಟ್ರೋಲ್‌ ಸೆಂಟರ್‌ ಕಟ್ಟಡ ಕಾಮಗಾರಿ ವೀಕ್ಷಿಸಿದ ಸಂಸದರು, 2018ರ ಅಕ್ಟೋಬರ್‌ನಲ್ಲಿ ಕಾಮಗಾರಿ ಆರಂಭಿಸಲಾಗಿದೆ. 2019ರ ನವಂಬರ್‌ ಗೆ ಮುಗಿಸಬೇಕಿತ್ತಲ್ಲ ಎಂದು ಪ್ರಶ್ನಿಸಿದರು. ಆಗ, ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ನಿರಂತರ ಮಳೆಯ ಕಾರಣ ಕಾಮಗಾರಿ ವೇಗವಾಗಿ ಮಾಡಲಾಗಲಿಲ್ಲ, ಈಗ ಕಾಮಗಾರಿ ಚುರುಕುಗೊಳಿಸಲಾಗಿದೆ ಎಂದರು.

ಮೇ ತಿಂಗಳ ಒಳಗೆ ಕಾಮಗಾರಿ ಮುಗಿಸುವುದಾಗಿ ಗುತ್ತಿಗೆದಾರ ಭರವಸೆ ನೀಡಿದರು. ಹೊಂಡ ವೃತ್ತದ ಬಳಿ ಸಮುದಾಯ ಭವನ ಹಾಗೂ ಕಲ್ಯಾಣಿ ಪುನರ್‌ ನಿರ್ಮಾಣ ಕಾಮಗಾರಿ ವೀಕ್ಷಿಸಿ, ಸಕಾಲಕ್ಕೆ ಕೆಲಸ ಮುಗಿಸಿ, ಒಪ್ಪಿಸದಿದ್ದರೆ ಪೆನಾಲ್ಟಿ ಬೀಳಲಿದೆ ಎಂದು ಸಂಸದ ಸಿದ್ದೇಶ್ವರ್‌ ಎಚ್ಚರಿಸಿದರು.

ಡಿಸೆಂಬರ್‌ ಗಡುವು: ಕಾಮಗಾರಿ ವೀಕ್ಷಣೆ ನಂತರ ಹೊಂಡ ವೃತ್ತದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್‌, ಮೂರು ವರ್ಷದಿಂದ ಸ್ಮಾರ್ಟ್‌ ಸಿಟಿ ಯೋಜನೆಯಡಿ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಒಟ್ಟು 396 ಕೋಟಿ ರೂ. ಬಿಡುಗಡೆ ಆಗಿದೆ. ಈವರೆಗೂ 136 ಕೋಟಿ ರೂ. ಖರ್ಚು ಮಾಡಲಾಗಿದೆ. ಈಗ ಕಾಮಗಾರಿ ವೀಕ್ಷಿಸಲಾಗಿದ್ದು, ಚುರುಕುಗೊಳಿಸಲು ಸೂಚನೆ ನೀಡಲಾಗಿದೆ. 2020ರ ಡಿಸೆಂಬರ್‌ ಹೊತ್ತಿಗೆ ಎಲ್ಲ ಕಾಮಗಾರಿ ಮುಗಿಸಬೇಕು. ಬಿಡುಗಡೆ ಆಗಿರುವ ಹಣ ಖಾಲಿ ಮಾಡಿ ಬಳಕೆ ಪ್ರಮಾಣ ಪತ್ರ ನೀಡಿದರೆ ಮಾತ್ರ ಎರಡನೇ ಕಂತಿನ ಅನುದಾನ ಬರಲಿದೆ. ಕಮಾಂಡ್‌ ಸೆಂಟರ್‌ ಕಾಮಗಾರಿಗೆ ಬಳಸಿರುವ ಕಬ್ಬಿಣ ತುಕ್ಕು ಹಿಡಿದಂತಿದೆ. ಕ್ಲೀನ್‌ ಮಾಡಿ ಬಳಸಿ. ಕ್ವಾಲಿಟಿ ಕಾಮಗಾರಿ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತ, ದೂಡಾ ಆಯುಕ್ತ ಹಾಗೂ ಸ್ಮಾರ್ಟ್‌ ಸಿಟಿ ಯೋಜನೆ ಎಂಡಿ ಮೂವರು ಚುರುಕಾಗಿ ಕೆಲಸ ಮಾಡುತ್ತಿದ್ದಾರೆ. ಕಾಮಗಾರಿಗಳು ಆದಷ್ಟು ವೇಗ ಪಡೆದುಕೊಳ್ಳಲಿವೆ ಎಂದು ಅವರು ಹೇಳಿದರು.

ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್‌, ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್‌ ಪಿ ಮುದಜ್ಜಿ, ಮುಖ್ಯ ಎಂಜಿನಿಯರ್‌ ಸತೀಶ್‌, ಬಿಜೆಪಿ ಮುಖಂಡರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಹಾವೇರಿ ಜಿಲ್ಲೆಯಾದ್ಯಂತ ಮಳೆ ಎಲ್ಲ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ: ಸ್ಪಷ್ಟನೆ ನೀಡಿದ ಸಚಿವ ಕೋಟ

heavy rain; holiday for schools in dharwad

ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

damage

ವರುಣನ ಅಬ್ಬರಕ್ಕೆ ಅಪಾರ ಬೆಳೆ ಹಾನಿ

honnali

ನ್ಯಾಮತಿ ತಾಲೂಕಿಗೆ ತಪ್ಪದ ಹೊನ್ನಾಳಿ ಅವಲಂಬನೆ!

crop-damage

ಮಲೆ ಬೆನ್ನೂರು: ಭಾರೀ ಮಳೆ-ಗಾಳಿಗೆ ಅಪಾರ ಬೆಳೆ ಹಾನಿ

congress

ಬಿಜೆಪಿ-ಕಾಂಗ್ರೆಸ್‌ನಿಂದ ಅಬ್ಬರದ ಪ್ರಚಾರ

renukacharya

ಸನಾತನ ಧರ್ಮ-ಸಂಸ್ಕೃತಿ ಉಳಿಸಿ ಬೆಳೆಸಿ

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

barrier

ಅರೆಹೊಳೆ ರಾಜಕಾಲುವೆ: ಶಾಶ್ವತ ತಡೆಗೋಡೆ ಮರೀಚಿಕೆ

3

ವಿಧಾನ ಪರಿಷತ್‌ ಚುನಾವಣೆ; ನಾಮಪತ್ರ ಸ್ವೀಕಾರ ಪ್ರಾರಂಭ

2

ಎಸ್ಸೆಸ್ಸೆಲ್ಸಿ; ಶೇ.84.95 ಫಲಿತಾಂಶ ದಾಖಲು- ಎ ಗ್ರೇಡ್ ಪಟ್ಟಿಯಲ್ಲಿ ಸ್ಥಾನ ಪಡೆದ ಧಾರವಾಡ

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

ಎರಡು ವರ್ಷಗಳ ಜೈಲುವಾಸದ ನಂತರ ಅಜಂ ಖಾನ್ ಸೀತಾಪುರ್ ಕಾರಾಗೃಹದಿಂದ ಬಿಡುಗಡೆ

bc-road

ಬಿ.ಸಿ.ರೋಡ್‌: ನೀರಲ್ಲೇ ಬಸ್‌ಗೆ ಕಾಯಬೇಕಾದ ಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.