ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಷಯದಲ್ಲಿ ಹುಡುಗಾಟ ಆಡ್ಬೇಡಿ; ವಾಟಾಳ್
Team Udayavani, Jun 19, 2020, 5:00 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಷಯವಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹುಡುಗಾಟ ಆಡಬಾರದು. ಪರೀಕ್ಷೆ ನಡೆಸಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ ಚಳವಳಿ ಸಮಿತಿಯ ವಾಟಾಳ್ ನಾಗರಾಜ್ ಎಚ್ಚರಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 8ಲಕ್ಷಕ್ಕೂ ಹೆಚ್ಚು ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ನಿಜಕ್ಕೂ ಕಷ್ಟವಾಗಲಿದೆ. ಅಷ್ಟೊಂದು ಸಂಖ್ಯೆಯಲ್ಲಿನ ಮಕ್ಕಳನ್ನು ನಿಯಂತ್ರಣ ಮಾಡಲಿಕ್ಕಾಗುತ್ತದೆಯೇ ಎಂದು ಪ್ರಶ್ನಿಸಿದರು.
ಕೋವಿಡ್ ವೈರಸ್ ಹಾವಳಿ ಹಿನ್ನೆಲೆಯಲ್ಲಿ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ 12 ರಾಜ್ಯಗಳು ಪರೀಕ್ಷೆ ಇಲ್ಲದೆ ಪಾಸ್ ಮಾಡಿದ್ದಾರೆ. ಶಿಕ್ಷಣ ಸಚಿವರು, ಶಾಸಕರು ಜಿದ್ದಾಜಿದ್ದಿಗೆ ಬಿದ್ದು ಮಕ್ಕಳ ಮೇಲೆ ಸವಾರಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲೂ ಎಸ್ಸೆಸ್ಸೆಲ್ಸಿ, ಡಿಗ್ರಿ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕು. ಸರಿಯಾದ ಶಿಕ್ಷಣ ಇಲ್ಲದೆ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದರು.
ಕೋವಿಡ್ ಸಂದರ್ಭದಲ್ಲೂ ಫೀಸ್ ಎನ್ನುವುದು ಒಂದು ದಂಧೆಯಾಗಿದೆ. ಮಕ್ಕಳು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಜೂ.20ರಂದು ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಹೋರಾಟ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ