ಮಧ್ಯಾಹ್ನ 2 ಗಂಟೆ ನಂತರ ಅಂಗಡಿ ಬಂದ್‌ಗೆ ನಿರ್ಧಾರ


Team Udayavani, Jun 25, 2020, 9:10 AM IST

ಮಧ್ಯಾಹ್ನ 2 ಗಂಟೆ ನಂತರ ಅಂಗಡಿ ಬಂದ್‌ಗೆ ನಿರ್ಧಾರ

ಸಾಂದರ್ಭಿಕ ಚಿತ್ರ

ಹರಿಹರ: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೂ. 25 ರಿಂದ ಪ್ರತಿ ದಿನ ಮಧ್ಯಾಹ್ನ 2 ಗಂಟೆ ನಂತರ ನಗರದ ಎಲ್ಲಾ ಅಂಗಡಿ-ಮುಂಗಟ್ಟು ಬಂದ್‌ ಮಾಡುವ ಮೂಲಕ ಸ್ವಯಂಪ್ರೇರಿತ ಲಾಕ್‌ಡೌನ್‌ ಮಾಡಲು ಬುಧವಾರ ನಗರದ ಮಿನಿ ವಿಧಾನ ಸೌಧದಲ್ಲಿ ನಡೆದ ಅಧಿಕಾರಿಗಳು, ವ್ಯಾಪಾರಸ್ಥರ ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್‌. ರಾಮಪ್ಪ ಮಾತನಾಡಿ, ತಾಲೂಕಿನಲ್ಲಿ ದಿನೇ ದಿನೇ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ವೈರಾಣು ಹರಡದಂತೆ ತಡೆಯಲು ನಾವೆಲ್ಲಾ ಕೆಲ ಸ್ವಯಂ ನಿರ್ಬಂಧ ಹಾಕಿಕೊಳ್ಳುವುದು ಅನಿವಾರ್ಯವಾಗಿದೆ. ವ್ಯಾಪಾರಸ್ಥರು, ಬೀದಿಬದಿ ವ್ಯಾಪಾರಿಗಳು ಮಧ್ಯಾಹ್ನ 2 ಗಂಟೆಯ ನಂತರ ಸ್ವಯಂಪ್ರೇರಿತವಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ವೈರಸ್‌ ಹರಡದಂತೆ ಸಹಕರಿಸಬೇಂಕೆದು ಮನವಿ ಮಾಡಿದರು.

ಹಿಂದೆ ಸರ್ಕಾರ ಲಾಕ್‌ಡೌನ್‌ ಜಾರಿಗೊಳಿಸಿದ್ದ ಸಂದರ್ಭದಲ್ಲಿ ತಾಲೂಕಿನಲ್ಲಿ ಒಂದೂ ಕೋವಿಡ್ ಪ್ರಕರಣಗಳಿರಲಿಲ್ಲ. ಈಗ ವೈರಾಣು ತೀವ್ರವಾಗಿ ವ್ಯಾಪಿಸುತ್ತಿದ್ದು, ಹಿಂದಿಗಿಂತಲೂ ಈಗ ಲಾಕ್‌ಡೌನ್‌ ಅತ್ಯಂತ ಅಗತ್ಯವಾಗಿದೆ. ಇಲ್ಲದಿದ್ದರೆ ನೋಡ ನೋಡುತ್ತಿದ್ದಂತೆ ಸೋಂಕು ಎಲ್ಲರ ಮನೆಬಾಗಿಲಿಗೆ ಬರುವ ಅಪಾಯವಿದೆ ಎಂದು ಎಚ್ಚರಿಸಿದರು.

ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ ಮಾತನಾಡಿ, ತಾಲೂಕಿನಲ್ಲಿ ಸೋಂಕು ಹೆಚ್ಚಾಗುತ್ತಿರುವುದನ್ನು ಮನಗಂಡು ನಗರದ ಕೆಲವು ವರ್ತಕರು ಮಧ್ಯಾಹ್ನದ ನಂತರ ನಗರವನ್ನು ಬಂದ್‌ ಮಾಡಲು ತಾಲೂಕು ಆಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಶಾಸಕರೊಂದಿಗೆ ಚರ್ಚಿಸಿ ಈ ಸಭೆಯನ್ನು ಆಯೋಜಿಸಲಾಗಿದೆ ಎಂದರು.

ಸಭೆಯಲ್ಲಿ ವ್ಯಾಪಾರಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡ ನಂತರ ನಗರದ ಎಲ್ಲಾ ವ್ಯಾಪಾರ-ವಹಿವಾಟುಗಳನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆವರೆಗೂ ಮಾತ್ರ ನಡೆಸಲು ಹಾಗೂ ಮಧ್ಯಾಹ್ನದಿಂದ ಎಲ್ಲಾ ಚಟುವಟಿಕೆ ಬಂದ್‌ ಮಾಡಲು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ಸ್ವಯಂಪ್ರೇರಿತರಾಗಿ ಬಂದ್‌ ಮಾಡಿಕೊಳ್ಳಬೇಕು. ಈ ಕುರಿತು ಯಾರೂ ಒತ್ತಡ ಹೇರುವಂತಿಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ಹಂತ ಹಂತವಾಗಿ ಸಂಪೂರ್ಣ ಬಂದ್‌ ಮಾಡುವ ಪ್ರಯತ್ನ ಮಾಡಲಾಗುವುದು. ಕಂಟೇನ್ಮೆಂಟ್‌ ಝೋನ್‌ಗೆ ಎಲ್ಲಾ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ. ಯಾರಾದರೂ ಅನಾಶ್ಯಕವಾಗಿ ಸುತ್ತಾಡಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಶಾಸಕರು ಪೊಲೀಸರಿಗೆ ಸೂಚಿಸಿದರು.

ನಗರಸಭೆ ಪೌರಾಯುಕ್ತೆ ಎಸ್‌. ಲಕ್ಷ್ಮೀ, ಸಿಪಿಐ ಶಿವಪ್ರಸಾದ್‌, ಚೇಂಬರ್‌ ಆಪ್‌ ಕಾಮರ್ಸ್‌ ಅಧ್ಯಕ್ಷ ಶಂಕರ್‌ ಕಟಾವಕರ್‌, ಉದ್ಯಮಿಗಳಾದ ಎಚ್‌. ಬಸವರಾಜು, ಶಿವಪ್ರಕಾಶ್‌ ಶಾಸ್ತ್ರಿ, ಮಾಲತೇಶ್‌ ಭಂಡಾರಿ, ಆರ್‌.ಆರ್‌. ಕಾಂತರಾಜ್‌ ಇದ್ದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.