ಹಳ್ಳಿಗಳಲ್ಲಿ ಗುಂಡಿತೋಡಿ ಮುಚ್ಚದೆ ಬಿಡುವವರ ವಿರುದ್ಧ ಕ್ರಮಕ್ಕೆ ಆಗ್ರಹ

Team Udayavani, Jan 31, 2019, 7:23 AM IST

dvg-1.jpg

ಹೊನ್ನಾಳಿ: ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟ ಗ್ರಾಮಾಂತರ ಪ್ರದೇಶದಲ್ಲಿ ರಸ್ತೆಗಳನ್ನು ಅಗೆದು ಗುಂಡಿ ತೋಡಿ ಮುಚ್ಚದೆ ಹಾಗೆ ಬಿಡುತ್ತಿದ್ದಾರೆ. ಇದರಿಂದ ಅನೇಕ ಅಪಘಾತಗಳು ಜರುಗುತ್ತಿದ್ದು, ಇಲಾಖೆ ಇಂಜಿನಿಯರ್‌ಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಉಪಾಧ್ಯಕ್ಷ ಎಸ್‌.ಪಿ. ರವಿಕುಮಾರ್‌ ಹೇಳಿದರು.

ತಾಪಂ ಸಾಮರ್ಥ್ಯಸೌಧದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಹಳ್ಳಿಗಳ ಲೋಕೋಪಯೋಗಿ ರಸ್ತೆಗಳಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ಕೆಲ ರೈತರು ಪೈಪ್‌ಲೈನ್‌ ಹಾಕಿಕೊಳ್ಳಲು ಗುಂಡಿ ತೋಡಿ ಗುಂಡಿ ಮುಚ್ಚದೆ ಹಾಗೇ ಬಿಟ್ಟಿದ್ದಾರೆ. ಇದರಿಂದ ಈಚೆಗೆ ಹನುಮನಹಳ್ಳಿ ಬಳಿ ಬೈಕ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಗುಂಡಿ ತೋಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಎಇಇ ಭೀಮಾನಾಯ್ಕ, ರಸ್ತೆಗೆ ಅಡ್ಡವಾಗಿ ಗುಂಡಿ ತೆಗೆಯುವವರಿಗೆ ನೋಟಿಸ್‌ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಪಂಚಾಯತ್‌ ರಾಜ್ಯ ಇಂಜಿನಿಯರ್‌ ಮಂಜುನಾಥ ಕಪಾಲಿ ಮಾತನಾಡಿ, ನಬಾರ್ಡ್‌ ವತಿಯಿಂದ ಹಮ್ಮಿಕೊಂಡಿದ್ದ ಹಳೆ ಕಾಮಗಾರಿಗಳನ್ನು ಫೂರ್ಣಗೊಳಿಸಲಾಗಿದೆ. 1.5 ಕೋಟಿ ರೂ. ವೆಚ್ಚದ ಅರಕೆರೆ ಗ್ರಾಮದ ರಸ್ತೆ ಮತ್ತು ಬೆಳಗುತ್ತಿ ಗ್ರಾಮದ ರಸ್ತೆ ಹೊಸ ಕಾಮಗಾರಿಗಳು ಪ್ರಾರಂಭಗೊಂಡಿವೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಇಒ ಕೆ.ಸಿ. ಮಲ್ಲಿಕಾರ್ಜುನ, ಪಂಚಾಯತ್‌ ರಾಜ್‌ ಇಲಾಖೆಯಿಂದ 8 ರಿಂದ 9 ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ನಡೆಯಬೇಕಿದೆ. ಈಗಾಗಲೆ ಜನವರಿ ತಿಂಗಳು ಮುಗಿದು ಫೆಬ್ರವರಿ ತಿಂಗಳು ಬರುತ್ತಿದೆ. ಕಾಮಗಾರಿಗಳಿಗೆ ವೇಗವಾದ ಚಾಲನೆ ಕೊಡಿ ಎಂದು ಹೇಳಿದರು.

ಕೃಷಿ ಅಧಿಕಾರಿ ಬಸಪ್ಪ ಮಾತನಾಡಿ, ತಾಲೂಕಿನಲ್ಲಿ 680 ಕೃಷಿ ಹೊಂಡಗಳ ನಿರ್ಮಾಣದ ಗುರಿಯಿದ್ದು, ಈಗಾಗಲೇ 178 ಕೃಷಿ ಹೊಂಡಗಳ ನಿರ್ಮಾಣವಾಗಿದೆ. ಇದಕ್ಕಾಗಿ 1.75 ಕೋಟಿ ರೂ.ವೆಚ್ಚವಾಗುತ್ತದೆ ಎಂದರು.

ತಾಪಂ ಇಒ ಕೆ.ಸಿ. ಮಲ್ಲಿಕಾರ್ಜುನ ಮಾತನಾಡಿ, ಕೃಷಿ ಇಲಾಖೆಯಿಂದ ರೈತರಿಗೆ ಉಪಯೋಗವಾಗುವ ರಚನಾತ್ಮಕ ಕಾರ್ಯಕ್ರಮಗಳನ್ನು ಕೃಷಿ ಅಧಿಕಾರಿಗಳು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಈಚೆಗೆ ನ್ಯಾಮತಿ ತಾಲೂಕು ಕೇಂದ್ರದಲ್ಲಿ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಸಮ್ಮೇಳಾನಧ್ಯಕ್ಷರ ಮೆರವಣಿಗೆ ಕಾರ್ಯಕ್ರಮದಲ್ಲಿ ಸರತಿ ಸಾಲಿನಲ್ಲಿ ನಡೆದು ಹೋಗುತ್ತಿದ್ದರೆ ಶಾಲಾ ಶಿಕ್ಷಕರು ರಸ್ತೆ ಬಳಿ ನಿಂತು ನೋಡುತ್ತಿದ್ದರು. ಸಮ್ಮೇಳನದಲ್ಲಿ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲೇ ಇಲ್ಲ. ಇದಕ್ಕೆ ಬಿಇಒ ಅವರು ಉತ್ತರ ನೀಡಬೇಕು ಎಂದು ತಾಪಂ ಉಪಾಧ್ಯಕ್ಷ ಎಸ್‌.ಪಿ. ರವಿಕುಮಾರ್‌ ಮತ್ತು ಸದಸ್ಯ ಸಿದ್ದಲಿಂಗಪ್ಪ ಒತ್ತಾಯಿಸಿದರು.

ಬಿಇಒ ರಾಜೀವ್‌ ಪ್ರತಿಕ್ರಿಯಿಸಿ, ಎಲ್ಲ ಶಿಕ್ಷಕರು ಹಾಗೂ ಮಕ್ಕಳು ತಪ್ಪದೇ ಸಮ್ಮೇಳನದಲ್ಲಿ ಭಾಗವಹಿಸಲು ಸೂಚಿಸಲಾಗಿತ್ತು ಎಂದಾಗ ಸದಸ್ಯರು ಕೇವಲ ಸೂಚನೆ ನೀಡಿದರೆ ಸಾಲದು ಗೈರಾದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನ್ಯಾಮತಿ ತಾಲೂಕಿನ ಬೆಸ್ಕಾಂ ಲೈನ್‌ಮ್ಯಾನ್‌ಗಳಿಗೆ ದೂರವಾಣಿ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ. ಕೆಲವರು ಸ್ವೀಕರಿಸಿ ಇಲಾಖೆ ಸ್ಥಿರ ದೂರವಾಣಿಗೆ ಕರೆ ಮಾಡಿ ಎಂದು ಅಸಡ್ಡೆ ಉತ್ತರ ನೀಡುತ್ತಾರೆ. ಇದಕ್ಕೆ ಇಲಾಖಾಧಿಕಾರಿಗಳನ್ನು ನೇರವಾಗಿ ಹೊಣೆ ಮಾಡಲಾಗುವುದು ಎಂದು ನ್ಯಾಮತಿ ತಾಲೂಕು ತಾಪಂ ಸದಸ್ಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಬೆಸ್ಕಾಂ ಎಇಇ ರವಿಕಿರಣ್‌ ತಕ್ಷಣ ಎಲ್ಲ ಲೈನ್‌ಮ್ಯಾನ್‌ಗಳಿಗೆ ಸೂಚನೆ ನೀಡಿ ಕರೆ ಸ್ವೀಕರಿಸಿ ಕೆಲಸ ಮಾಡುವಂತೆ ಎಚ್ಚರಿಕೆ ನೀಡುತ್ತೇನೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು.

ತಾಪಂ ಅಧ್ಯಕ್ಷೆ ಚಂದ್ರಮ್ಮ ಹಾಲೇಶಪ್ಪ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಲ್‌. ರಂಗಪ್ಪ, ಸದಸ್ಯರಾದ ಸಿ.ಆರ್‌. ಶಿವಾನಂದ್‌, ಅಬೀದಲಿ ಖಾನ್‌, ವಿಜಯಕುಮಾರ್‌, ತಿಪ್ಪೇಶಪ್ಪ ಮಾತನಾಡಿದರು.

ಸದಸ್ಯರಾದ ಸುಲೋಚನಮ್ಮ ಪಾಲಾಕ್ಷಪ್ಪ, ಮರಿಕನ್ನಪ್ಪ, ರೇಖಾ ಉಮೇಶ್‌ನಾಯ್ಕ, ಪುಷ್ಪಾ ದೇವೀರಪ್ಪ, ಕವಿತಾ ಪ್ರಭಗೌಡ ಇದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.