ಪೆಟ್ರೋಲ್‌-ಡೀಸೆಲ್‌ ಬೆಲೆ ಇಳಿಕೆಗೆ ಆಗ್ರಹಿಸಿ ಧರಣಿ

Team Udayavani, Feb 14, 2021, 3:35 PM IST

Demand for a reduction in petrol-diesel prices

ದಾವಣಗೆರೆ: ಪೆಟ್ರೋಲ್‌ ಮತ್ತು ಡಿಸೇಲ್‌ ಬೆಲೆ ಏರಿಕೆಯಿಂದಾಗಿ ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಕೂಡಲೇ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಇಳಿಕೆ ಮಾಡಬೇಕು ಎಂದು ಆನಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್‌. ಬಸವಂತಪ್ಪ ಆಗ್ರಹಿಸಿದರು.

ಮಾಯಕೊಂಡ ಕ್ಷೇತ್ರದ ಅಣಜಿ ಗ್ರಾಮದಲ್ಲಿ ಕಾಂಗ್ರೆಸ್‌ನಿಂದ ಏರ್ಪಡಿಸಿದ್ದ ಬೃಹತ್‌ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿದರು. ಕೋವಿಡ್‌-19 ಸಮಯದಲ್ಲಿ ಕೃಷಿ ಕಾಯ್ದೆಯನ್ನು ಲೋಕಸಭೆಯಲ್ಲಾಗಲೀ, ಕೃಷಿ ತಜ್ಞರ ಜೊತೆಯಲ್ಲಾಗಲೀ ಇಲ್ಲವೇ ರೈತರೊಂದಿಗೆ ಚರ್ಚಿಸದೆ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೇವಲ ಆದೇಶದ ಮೂಲಕ ಕಾಯ್ದೆಯನ್ನು ಜಾರಿಗೊಳಿಸಿರುವುದು ಖಂಡನೀಯ. ದೇಶದ ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಾಭಿವೃದ್ಧಿಗೆ ಶ್ರಮಿಸಿ ರೈತರ ಕೃಷಿ ಚಟುವಟಿಕೆ ಬೆಳವಣಿಗೆಗೆ ಸೂಕ್ತ ಕಾಯ್ದೆಗಳನ್ನು ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವುದನ್ನು ಮರೆಯಲಾಗದು ಎಂದರು.

ಎಪಿಎಂಸಿ ಅಧ್ಯಕ್ಷ ಎಸ್‌.ಬಿ. ಚಂದ್ರಶೇಖರ್‌ ಮಾತನಾಡಿ, ಎಪಿಎಂಸಿ ಕಾಯ್ದೆಯಿಂದ ರೈತರು ಬೀದಿಗೆ ಬರುವ ಪರಿಸ್ಥಿತಿ ಉಂಟಾಗಿದೆ.ಎಪಿಎಂಸಿಯನ್ನು ಮುಚ್ಚುವಂತಾಗಿದ್ದು ರೈತರ ಅನುಕೂಲಕ್ಕಿರುವ ಆವರ್ತ ನಿಧಿಯನ್ನು ಸಮರ್ಪಕವಾಗಿ ಬಳಸದೇ ರೈತರ ಬೆಳೆಗಳನ್ನು ಸಹ ಸೂಕ್ತ ಬೆಂಬಲ ಬೆಲೆಯಲ್ಲಿ ಖರೀದಿಸದೇ ಆವರ್ತ ನಿಧಿಯನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ:ಯಾರಿಗೂ ಸಂಶಯ ಬೇಡ, ಮೀಸಲಾತಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಯಡಿಯೂರಪ್ಪ

ಜಿಪಂ ಸದಸ್ಯ ಓಬಳಪ್ಪ, ಎಪಿಎಂಸಿ ಮಾಜಿ ಉಪಾಧ್ಯಕ್ಷ ರಾಜೇಂದ್ರ, ತಾಪಂ ಸದಸ್ಯ ಚಂದ್ರಪ್ಪ, ಕಾಂಗ್ರೆಸ್‌ ಮುಖಂಡ ಕೊಟ್ರೇಶ್‌ ನಾಯ್ಕ, ರಾಜಾ ನಾಯ್ಕ, ಅಂಜಿನಪ್ಪ, ಮಾಯಕೊಂಡ ರುದ್ರೇಶ್‌, ಕೊಗ್ಗನೂರು ಹನುಮಂತಪ್ಪ ಮತ್ತಿತತರು ಮಾತನಾಡಿ, ಪೆಟ್ರೋಲ್‌ ಮತ್ತು ಡಿಸೇಲ್‌ ಬೆಲೆ ಏರಿಕೆ ಮತ್ತು ಕೃಷಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿದರು.

ಪ್ರತಿಭಟನೆ ಮೆರವಣಿಗೆ ಗ್ರಾಮದ ದಿಗಂಬರ ದೇವಸ್ಥಾನದಿಂದ ಹೊರಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಉಪತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ತಾಪಂ ಮಾಜಿ ಸದಸ್ಯ ಶಂಭುಲಿಂಗಪ್ಪ, ಕಾಂಗ್ರೆಸ್‌ ಮುಖಂಡ ಆಲೂರು ವೀರಭದ್ರಪ್ಪ, ಆನಗೋಡು ಗ್ರಾಪಂ ಮಾಜಿ ಅಧ್ಯಕ್ಷ ರವಿ, ಅಣಜಿ ಗ್ರಾಪಂ ಅಧ್ಯಕ್ಷೆ ಜ್ಯೋತಿ ಶಶಿಕುಮಾರ್‌, ಪಿ.ಎನ್‌. ಶಿವಪ್ರಕಾಶ್‌, ಅಣಜಿಹೊನ್ನಪ್ಪ, ಬಸವಲಿಂಗಪ್ಪ, ರಾಮಗೊಂಡನಹಳ್ಳಿ  ಶರಣಪ್ಪ, ಮೆಳ್ಳೆಕಟ್ಟೆ ಹನುಮಂತಪ್ಪ, ಆಲೂರು ಸೋಮಣ್ಣ, ಹುಲಿಕಟ್ಟೆ ಗ್ರಾಪಂ ಅಧ್ಯಕ್ಷ ಕರಿಯಪ್ಪ, ಬಸವರಾಜ್‌, ಜ್ಞಾನೇಶ್‌, ಮ್ಯಾಸರಹಳ್ಳಿ ಪ್ರಭು, ಗುಮ್ಮನೂರು ಲೋಕೇಶ್‌, ಸಿದ್ದನೂರು ಪ್ರಕಾಶ್‌, ಕಂದನಕೋವಿ ದೇವೇಂದ್ರಪ್ಪ, ಗ್ರಾ.ಪಂ. ಸದಸ್ಯರುಗಳು, ಕಾಂಗ್ರೆಸ್‌ ಮುಖಂಡರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

28-1

ಕಾರು-ಬೈಕ್ ಢಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ

Execution for man who robbed hotel for girlfriend’s bail

ಗೆಳತಿಗೆ ಜಾಮೀನಿಗಾಗಿ ಜೋಡಿ ಕೊಲೆ ಮಾಡಿದ್ದಾತನಿಗೆ ಚುಚ್ಚುಮದ್ದಿನ ಮೂಲಕ ಮರಣದಂಡನೆ!

ಹುಟ್ಟುಹಬ್ಬದ ಪ್ರಯುಕ್ತ ಸಿಎಂ ಬೊಮ್ಮಾಯಿ ಗೋಪೂಜೆ: ಶುಭ ಹಾರೈಸಿದ ಪ್ರಧಾನಿ ಮೋದಿ

ಹುಟ್ಟುಹಬ್ಬದ ಪ್ರಯುಕ್ತ ಸಿಎಂ ಬೊಮ್ಮಾಯಿ ಗೋಪೂಜೆ: ಶುಭ ಹಾರೈಸಿದ ಪ್ರಧಾನಿ ಮೋದಿ

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

ಪ್ರಜಾಪ್ರಭುತ್ವದಲ್ಲಿ ಪ್ರತಿ ಮತ ಅಮೂಲ್ಯ

davanagere news

ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

davanagere news

ಯೋಗ್ಯ ವ್ಯಕ್ತಿ ಆಯ್ಕೆಗೆ ಒತ್ತು ಕೊಡಿ

davanagere news

ಎಲ್ಲರೂ ಮತ ಹಕ್ಕು ಚಲಾಯಿಸಿ

ಬೈರತಿ ಬಸವರಾಜ್

ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ,ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ:ಬೈರತಿ ಬಸವರಾಜ್

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

28-1

ಕಾರು-ಬೈಕ್ ಢಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ

Execution for man who robbed hotel for girlfriend’s bail

ಗೆಳತಿಗೆ ಜಾಮೀನಿಗಾಗಿ ಜೋಡಿ ಕೊಲೆ ಮಾಡಿದ್ದಾತನಿಗೆ ಚುಚ್ಚುಮದ್ದಿನ ಮೂಲಕ ಮರಣದಂಡನೆ!

ಹುಟ್ಟುಹಬ್ಬದ ಪ್ರಯುಕ್ತ ಸಿಎಂ ಬೊಮ್ಮಾಯಿ ಗೋಪೂಜೆ: ಶುಭ ಹಾರೈಸಿದ ಪ್ರಧಾನಿ ಮೋದಿ

ಹುಟ್ಟುಹಬ್ಬದ ಪ್ರಯುಕ್ತ ಸಿಎಂ ಬೊಮ್ಮಾಯಿ ಗೋಪೂಜೆ: ಶುಭ ಹಾರೈಸಿದ ಪ್ರಧಾನಿ ಮೋದಿ

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.