ರಸ್ತೆ ದುರವಸ್ಥೆ ಖಂಡಿಸಿ ರಸ್ತೆ ತಡೆ: ಅಧಿಕಾರಿಗಳಿಗೆ ತರಾಟೆ


Team Udayavani, Oct 2, 2020, 7:16 PM IST

ರಸ್ತೆ ದುರವಸ್ಥೆ ಖಂಡಿಸಿ ರಸ್ತೆ ತಡೆ: ಅಧಿಕಾರಿಗಳಿಗೆ ತರಾಟೆ

ಮಲೇಬೆನ್ನೂರ: ಎಕ್ಕೆಗೊಂದಿ-ನಂದಿಗುಡಿ ರಸ್ತೆಯ ಪರಿಸ್ಥಿತಿ ಹೇಗಿದೆ ಗೊತ್ತಿದೆಯಾ, ವೃದ್ಧರು, ಗರ್ಭಿಣಿಯರು ಈ ರಸ್ತೆಯಲ್ಲಿ ಸಂಚರಿಸಲಿಕ್ಕೆ ಸಾಧ್ಯವಿದೆಯೇ ಎಂದು ರೈತ ಸಂಘ ಮತ್ತು ಹಸಿರುಸೇನೆ ಮುಖಂಡ ಹಾಳೂರು ನಾಗರಾಜ್‌, ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಎಕ್ಕೆಗೊಂದಿ-ನಂದಿಗುಡಿ ರಸ್ತೆ ಪಕ್ಕದಲ್ಲಿರುವ ಕಾಲುವೆಯನ್ನು ದುರಸ್ತಿ ಮಾಡಿಸಬೇಕು, ರಸ್ತೆಯ ಪಕ್ಕದಲ್ಲಿ ಹಾಕಿರುವ ಘನ ತ್ಯಾಜ್ಯವನ್ನು ವಿಲೇವಾರಿ ಮಾಡಿಸಬೇಕು, ರಸ್ತೆಯನ್ನು ಉತ್ತಮ ಗುಣಮಟ್ಟದಲ್ಲಿ ಡಾಂಬರೀಕರಣ ಮಾಡಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರುಸೇನೆಯ ಗ್ರಾಮ ಘಟಕ ಹಾಗೂ ಭಾನುವಳ್ಳಿ ಗ್ರಾಸ್ಥರು ಗುರುವಾರ ಶಿವಮೊಗ್ಗ-ಹರಿಹರ ರಸ್ತೆ ತಡೆ ಮಾಡಿ ಪ್ರತಿಭಟಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಬೆಳ್ಳೂಡಿ-ರಾಮತೀರ್ಥ ರಸ್ತೆಯಲ್ಲಿರುವ ಸೇತುವೆ ಕಳಪೆ ಕಾಮಗಾರಿಯಿಂದಾಗಿ ಹಾಳಾಗಿದೆ. ಮಲೇಬೆನ್ನೂರು-ಧೂಳೆಹೊಳೆ ರಸ್ತೆ, ರಾಜನಹಳ್ಳಿ-ಎಳೆಹೊಳೆ ರಸ್ತೆ ಕೂಡ ದುಸ್ಥಿತಿಯಲ್ಲಿದೆ. ಈಗ ಎಕ್ಕೆಗೊಂದಿ-ನಂದಿಗುಡಿ ರಸ್ತೆಯೂ ಹಾಳಾಗಿದೆ. ಹರಿಹರ ತಾಲೂಕಿನ ಎಲ್ಲಾ ಗ್ರಾಮಗಳ ಸಂಪರ್ಕ ರಸ್ತೆಗಳು ಹಾಳಾಗಿ ಗುಂಡಿಗಳೇ ತುಂಬಿ ಹೋಗಿವೆ. ಎಂದಾದರೂ ಈ ರಸ್ತೆಯಲ್ಲಿ ಸಂಚರಿಸಿದ್ದೀರಾ ಎಂದು ಪ್ರಶ್ನಿಸಿದರು.

ಯಾವ ಮಾನದಂಡದ ಮೇಲೆ ರಸ್ತೆ ಕಾಮಗಾರಿ ಕೈಗೊಂಡಿದ್ದೀರಿ, ಕಳಪೆ ಕಾಮಗಾರಿಗೆ ಹೇಗೆ ರೀತಿ ಹಣ ಮಂಜೂರು ಮಾಡಿದ್ದೀರಿ, ಪ್ಯಾಚ್‌ ವರ್ಕ್‌ಗೆ ಹಣ ಹೇಗೆ ಬಂತು ಎಂದು ವಾಗ್ಧಾಳಿ ನಡೆಸಿದ ಪ್ರತಿಭಟನಾಕಾರರು, ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆದು ನಿಮ್ಮ ಮೇಲೆ ಪ್ರಕರಣ ದಾಖಲಿಸುತ್ತೇವೆ ಎಂದು ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪನವರ ಸಮ್ಮುಖದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭು ಗೌಡ, ಉಪಾಧ್ಯಕ್ಷ ಎಂ. ಪಾಲಾಕ್ಷಪ್ಪ, ಗರಡಿ ಮನೆ ಬಸಣ್ಣ, ಭಾನುವಳ್ಳಿ ಕೊಟ್ರೇಶ್‌, ಷಣ್ಮುಖಯ್ಯ, ನಂದ್ಯಪ್ಪ, ಕೆ.ವಿ. ರುದ್ರಮುನಿ, ಎನ್‌. ಶಿವಕುಮಾರ್‌, ಪ್ರಕಾಶ್‌, ನಾಗರಾಜ್‌, ಮಣಿಕುಮಾರ್‌, ಬಸವನಗೌಡ, ಕುಮಾರ್‌, ಹನಗವಾಡಿ ರುದ್ರೇಶ್‌ ಮತ್ತಿತರರು ಇದ್ದರು.

ಪ್ಯಾಚ್‌ ವರ್ಕ್‌ ಕಾಮಗಾರಿಗೆ 5 ಕೋಟಿ ರೂ. ಮಂಜೂರಾಗಿದೆ. ಸಚಿವರ ಜೊತೆ ಚರ್ಚಿಸಿದ ನಂತರ ರಸ್ತೆ ಕಾಮಗಾರಿಗೆ 13 ಕೋಟಿ ರೂ.ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ. 5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಗುಂಡಿ ಮುಚ್ಚಿಸಲು ಟೆಂಡರ್‌ ಆಗಿದೆ. ರಸ್ತೆ ಗುಂಡಿ ಮುಚ್ಚುವ ಕಾರ್ಯ ನಾಳೆಯಿಂದಲೇ ಆರಂಭವಾಗಲಿದೆ. -ನಾಗರಾಜ್‌, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere news

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

davanagere news

ರೈತರು-ವರ್ತಕರಿಗೆ ವಂಚನೆ: 2.68 ಕೋಟಿ ವಶ

State-level variety award

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

ಬಿ.ಸಿ.ನಾಗೇಶ್

ಮುಂದಿನ ವರ್ಷದಿಂದ ಪ್ರಾಥಮಿಕ ಹಂತದಲ್ಲೂ ನೂತನ ಶಿಕ್ಷಣ ನೀತಿ ಅಳವಡಿಕೆ: ಬಿ.ಸಿ.ನಾಗೇಶ್

B-day

ಮಕ್ಕಳ ಪಾಲನಾ ಕೇಂದ್ರದಲ್ಲಿ ಗಣ್ಯರ ಜನ್ಮದಿನಾಚರಣೆಗೆ ಬ್ರೇಕ್‌

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.