ದಿನೇಶ್‌ ಗುಂಡೂರಾವ್‌ ಕ್ಷಮೆಯಾಚಿಸಲಿ


Team Udayavani, Feb 15, 2017, 1:02 PM IST

dvg2.jpg

ದಾವಣಗೆರೆ: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆದು, ಸಾರ್ವಜನಿಕವಾಗಿ ಬೇಷರತ್ತು ಕ್ಷಮೆಯಾಚಿಸದಿದ್ದಲ್ಲಿ  ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪನವರ ಕುರಿತು ದಿನೇಶ್‌ ಗುಂಡೂರಾವ್‌ ಬಳಸಿರುವಂತಹ ಪದಗಳು ಅತ್ಯಂತ ಖಂಡನೀಯ. ದಿನೇಶ್‌ ಗುಂಡೂರಾವ್‌ಗೆ ಯಡಿಯೂರಪ್ಪ ಬಗ್ಗೆ ಮಾತನಾಡುವ ನೈತಿಕ ಹಕ್ಕೇ ಇಲ್ಲ.

ಏಕೆಂದರೆ ಸ್ವತಃ ಅವರ ವಿರುದ್ಧವೇ ಭ್ರಷ್ಟಾಚಾರದ ಆರೋಪಗಳು ಇವೆ. ಆ ಕಾರಣಕ್ಕಾಗಿಯೇ ಅವರನ್ನು ಸಚಿವ ಸ್ಥಾನದಿಂದ ತೆಗೆದು, ನೆಪ ಮಾತ್ರಕ್ಕೆ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಹರಿಹಾಯ್ದರು. ಈ ಹಿಂದೆ ಆಹಾರ ಇಲಾಖೆ ಸಚಿವರಾಗಿದ್ದ ದಿನೇಶ್‌ ಗುಂಡೂರಾವ್‌ ಪಡಿತರ ವ್ಯವಸ್ಥೆಯನ್ನೇ ಸರಿ ಮಾಡಲಾಗಲಿಲ್ಲ.

ಅರ್ಹ ಪಡಿತರದಾರರನ್ನು ಗುರುತಿಸಿ, ಕಾರ್ಡ್‌ ಕೊಡಿಸಲಿಕ್ಕಾಗಲಿಲ್ಲ. ಅಂತಹವರು ಯಡಿಯೂರಪ್ಪ ವಿರುದ್ಧ ಮಾತನಾಡುತ್ತಾರೆ. ಕಾಂಗ್ರೆಸ್‌ನಲ್ಲಿಯೇ ಜನಾರ್ದನ ಪೂಜಾರಿ, ದಿನೇಶ್‌ ಗುಂಡೂರಾವ್‌ ಅವರಂತಹ ಮಾನಸಿಕ ಅಸ್ವಸ್ಥರಿದ್ದಾರೆ. ದಿನೇಶ್‌ ಗುಂಡೂರಾವ್‌ ಯಡಿಯೂರಪ್ಪ ಅವರಂತಹ ಹಿರಿಯರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ತಾಕೀತು ಮಾಡಿದರು. 

ಡಾ| ಮನಮೋಹನ್‌ಸಿಂಗ್‌ ನೇತೃತ್ವದ ಯುಪಿಎ ಸರ್ಕಾರವಿದ್ದಾಗ 2 ಜಿ ಸ್ಪೆಕ್ಟ್ರಂ, ಕಲ್ಲಿದ್ದಲು ಹಗರಣ, ಭ್ರಷ್ಟಾಚಾರದ ಮೂಲಕ ಭಾರತ ಇಡೀ ವಿಶ್ವದ ಗಮನ ಸೆಳೆದಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣ, ಭ್ರಷ್ಟಾಚಾರದಿಂದ ಈಗ ದೇಶದ ಗಮನ ಸೆಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಾವಿರ ಕೋಟಿ ನೀಡಿದ್ದಾರೆ ಎಂಬುದಾಗಿ ಆರೋಪಿಸಿರುವ ಬಿಎಸ್‌ವೈ ಬಗ್ಗೆ ಕಾಂಗ್ರೆಸ್‌ನ ಕೆಲವು ಮುಖಂಡರು ಉಡಾಫೆಯಾಗಿ, ಹಗುರವಾಗಿ ಮಾತನಾಡಿದ್ದಾರೆ. 

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಡ್ರೆಸ್‌ಗೆ ಇಲ್ಲದಂತಾಗುತ್ತದೆ ಎಂದು ಹೇಳಿದರು. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಯಚಂದ್ರ, ಚಿಕ್ಕರಾಯಪ್ಪ ಅವರಂತಹ ಅಧಿಕಾರಿಗಳ ಬಳಿಯೇ ಕೋಟ್ಯಂತರ ಅಕ್ರಮ ಆಸ್ತಿ ದೊರೆತಿದೆ. ಸಚಿವ ರಮೇಶ್‌ ಜಾರಕಿಹೊಳಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳಕರ್‌ ಮನೆಯಲ್ಲಿ 165 ಕೋಟಿ, ಶಾಸಕ ಎಂ.ಟಿ.ಬಿ. ನಾಗರಾಜ್‌ ಮನೆಯಲ್ಲಿ 120 ಕೋಟಿಗೂ ಅಧಿಕ ಅಕ್ರಮ ಆಸ್ತಿ ದೊರೆತಿದೆ.

ಆ ಬಗ್ಗೆ ದಿನೇಶ್‌ ಗುಂಡೂರಾವ್‌ ಮಾತನಾಡುವುದಿಲ್ಲ. ನಾಲ್ಕು ವರ್ಷದಿಂದ ಅಧಿಕಾರ  ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಬರದಲ್ಲಿರುವ ಜನರಿಗೆ ಸ್ಪಂದಿಸುತ್ತಿಲ್ಲ. ಇದೊಂದು ಭ್ರಷ್ಟಾಚಾರ ಕರ್ಮಕಾಂಡ ಸರ್ಕಾರ ಎಂದು ಜರಿದರು. ವಿಧಾನ ಪರಿಷತ್‌ ಸದಸ್ಯ ಕೆ. ಗೋವಿಂದರಾಜ್‌  ಮನೆಯಲ್ಲಿ ಡೈರಿ ಸಿಕ್ಕಿರುವುದು, ಕಾಂಗ್ರೆಸ್‌ ಹೈಕಮಾಂಡ್‌ಗೆ ಹಣ ಹೋಗಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. 

ಯಡಿಯೂರಪ್ಪ ನವರ ವಿರುದ್ಧದ ಸಿಡಿ ಠುಸ್‌ ಪಟಾಕಿ ಆಗಿದೆ. ಕಾಂಗ್ರೆಸ್‌ ಮುಖಂಡರು ಯಡಿಯೂರಪ್ಪನವರ ಆರೋಪವನ್ನು ಸವಾಲಾಗಿ ಸೀÌಕರಿಸಬೇಕು. ಡೈರಿಯ ಬಗ್ಗೆ ಸಮಗ್ರ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರು ಯಾರಿಯೇ ಆಗಲಿ, ಸತ್ಯಾಸತ್ಯತೆ ಹೊರ ಬರುವಂತಾಗಲಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು. ಪಕ್ಷದ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಸಿ. ರಮೇಶ್‌ನಾಯ್ಕ, ರಾಜನಹಳ್ಳಿ ಶಿವಕುಮಾರ್‌, ಎನ್‌. ರಾಜಶೇಖರ್‌, ಕೂಲಂಬಿ ಬಸವರಾಜ್‌, ಟಿಂಕರ್‌ ಮಂಜಣ್ಣ ಇತರರು ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

No court relief, Arvind Kejriwal to remain in jail till July 3

Delhi Liquor Case: ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಜು.3ವರೆಗೆ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Davangere: ಸರಣಿ ಅಪಘಾತ; ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸೇರಿ ಇಬ್ಬರಿಗೆ ಗಂಭೀರ ಗಾಯ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.