ಮನೆಗಳಿರುವ ಕಡೆ ಬಾರ್‌ ಬೇಡ

Team Udayavani, Aug 17, 2017, 12:26 PM IST

17-DV-3.jpg

ದಾವಣಗೆರೆ: ಮನೆಗಳ ಬಳಿಯೇ ಬಾರ್‌ ಆ್ಯಂಡ್‌ ರೆಸ್ಟೋರಂಟ್‌ ತೆರೆಯಲು ಮುಂದಾಗುವುತ್ತಿರುವುದನ್ನ ವಿರೋಧಿಸಿ, ಬುಧವಾರ ನಗರದ ಸಿದ್ಧವೀರಪ್ಪ ಬಡಾವಣೆ ನಿವಾಸಿಗಳು ಪ್ರತಿಭಟಿಸಿದ್ದಾರೆ. 

ಸಿದ್ದವೀರಪ್ಪ ಬಡಾವಣೆ 10ನೇ ಕ್ರಾಸ್‌ನ ಪ್ರವೇಶದಲ್ಲಿರುವ ಚಂದನ್‌ ಫ್ಯಾಮಿಲಿ ರೆಸ್ಟೋರಂಟ್‌ನಲ್ಲಿ ಬಾರ್‌ ತೆರೆಯಲು ಸಿದ್ದತೆ ನಡೆಯುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು, ಈ ಭಾಗದಲ್ಲಿ ಬಾರ್‌ ಆ್ಯಂಡ್‌ ರೆಸ್ಟೋರಂಟ್‌ ತೆರೆದರೆ ಮಹಿಳೆಯರು ಸಂಚರಿಸುವುದೇ ದುಸ್ತರವಾಗಲಿದೆ. ಯಾವುದೇ ಕಾರಣಕ್ಕೂ ಬಾರ್‌ ಪ್ರಾರಂಭಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಸಿದ್ದವೀರಪ್ಪ ಬಡಾವಣೆಯ ಎಲ್ಲಾ ಮುಖ್ಯ ರಸ್ತೆಗಳು ಶಾಮನೂರು ರಸ್ತೆ ಸೇರುತ್ತಿದ್ದು, ತಮ್ಮ ಮನೆಗಳಿಗೆ ಹೋಗಲು ನಿವಾಸಿಗಳು ಶಾಮನೂರು ರಸ್ತೆಯಲ್ಲೇ ಸಂಚರಿಸಬೇಕಿದೆ. ಶಾಮನೂರು ರಸ್ತೆಯಲ್ಲಿ ಈಗಾಗಲೇ ಹೆಜ್ಜೆ ಹೆಜ್ಜೆಗೂ ಬಾರ್‌ ಆ್ಯಂಡ್‌ ರೆಸ್ಟೋರಂಟ್‌ಗಳಿದ್ದು, ಅವುಗಳಿಂದಲೇ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಆಗಿದೆ. ಈಗ ಮತ್ತೂಂದು ಆರಂಭವಾದಲ್ಲಿ ಮತ್ತಷ್ಟು ಸಮಸ್ಯೆ ಉಂಟಾಗಲಿದೆ. ಹಾಗಾಗಿ ಬಾರ್‌ ಆ್ಯಂಡ್‌ ರೆಸ್ಟೋರಂಟ್‌ಗೆ ಅನುಮತಿ ನೀಡಬಾರದೆಂದು ಸಾರ್ವಜನಿಕರು ಆಗ್ರಹಿಸಿದರು. ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ಬಾರ್‌ಗಳ ವಹಿವಾಟಿಗೆ ಈ ಪ್ರದೇಶದಲ್ಲಿ ಅನುಮತಿ ನೀಡಿದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ನಿವಾಸಿಗಳು ಎಚ್ಚರಿಸಿದರು. 

ಸಿದ್ದವೀರಪ್ಪ ಬಡಾವಣೆ ನಾಗರಿಕ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಾರ್ಡ್‌ ಸದಸ್ಯ ಲಿಂಗರಾಜ್‌ ಇತರರು ಭಾಗವಹಿಸಿದ್ದರು.  ಇತ್ತೀಚೆಗೆ ನಗರದ ಮಧ್ಯ ಭಾಗ, ಅದೂ ಅಲ್ಲದೇ ಮಹಿಳೆಯರು, ಮಕ್ಕಳು ಅಧಿಕ ಸಂಖ್ಯೆಯಲ್ಲಿ ಸದಾ ಸಂಚರಿಸುವ ಪ್ರದೇಶದಲ್ಲಿ ಬಾರ್‌ ಆ್ಯಂಡ್‌ ರೆಸ್ಟೋರಂಟ್‌ಗೆ ಅನುಮತಿ ನೀಡುತ್ತಿರುವುದನ್ನು ಖಂಡಿಸಿ, ಸಾರ್ವಜನಿಕರು ಬೀದಿಗಿಳಿದು ಹೋರಾಟ ಮಾಡಬೇಕಾದ
ಪರಿಸ್ಥಿತಿ ಉಂಟಾಗುತ್ತಿದೆ. ಪಾರ್ಕ್‌, ಸಮೀಪವೇ ಶಾಲೆ, ದೇವಸ್ಥಾನ ಇರುವ ಪ್ರದೇಶದಲ್ಲೇ ಬಾರ್‌ ಆ್ಯಂಡ್‌ ರೆಸ್ಟೋರಂಟ್‌ ತೆರೆಯಲು ಮುಂದಾಗಿದ್ದನ್ನು ವಿರೋಧಿಸಿ, ಸಾರ್ವಜನಿಕರು, ಸಂಘ-ಸಂಸ್ಥೆಯವರು ಪ್ರತಿಭಟಿಸಿದ ಬಳಿಕ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು, ಅನುಮತಿ ರದ್ದುಪಡಿಸಿದ, ಮಧ್ಯೆ ಈಗ ಮತ್ತೂಂದು ಕಡೆ ಅನುಮತಿ ನೀಡಲು ಮುಂದಾಗಿರುವುದು ನಾಗರಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.