ದೇಶದ ಪ್ರಗತಿಗೆ ಉದ್ಯಮಿಗಳ ಪಾತ್ರ ಮಹತ್ವದ್ದು

ಅವಶ್ಯಕತೆ ಇದ್ದರಷ್ಟೇ ಸಾಲ ಪಡೆದು ಅಭಿವೃದ್ಧಿ ಸಾಧಿಸಿ

Team Udayavani, May 3, 2022, 1:12 PM IST

business

ದಾವಣಗೆರೆ: ದೇಶದ ಆರ್ಥಿಕತೆಯಲ್ಲಿ ಉದ್ದಿಮೆದಾರರ ಪಾತ್ರ ಪ್ರಮುಖವಾದದ್ದು ಎಂದು ಲೀಡ್‌ ಬ್ಯಾಂಕ್‌ ಮಾರ್ಗದರ್ಶಿ ವ್ಯವಸ್ಥಾಪಕ ಸುಶೃತ್‌ ಡಿ. ಶಾಸ್ತ್ರಿ ಹೇಳಿದರು.

ನಗರದ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ಸೆಮಿನಾರ್‌ ಹಾಲ್‌ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್‌), ಧಾರವಾಡ ಮತ್ತು ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ಒಂದು ದಿನದ ಉದ್ಯಮಶೀಲತಾ ತಿಳಿವಳಿಕೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಬ್ಯಾಂಕಿಂಗ್‌ ವ್ಯವಸ್ಥೆಯ ನೀತಿ ನಿಯಮಗಳು, ಅವಶ್ಯಕತೆಗೆ ಅನುಸಾರವಾಗಿ ಸಾಲ ಪಡೆಯಬೇಕು ಎಂದರು. ಉತ್ತಮ ಯೋಜನಾ ವರದಿಗಳ ಕುರಿತು ಹಾಗೂ ಉದ್ಯಮದಾರರಾಗುವ ಹಂತದಲ್ಲಿ ಎದುರಿಸಬೇಕಾದ ಪ್ರಮುಖ ವಿಚಾರಗಳ ಬಗ್ಗೆ ತಿಳಿಸಿಕೊಟ್ಟರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗಿರೀಶ್‌ ಕೆ.ಎನ್. ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಉದ್ಯಮವನ್ನು ಸ್ಥಾಪಿಸುವುದಷ್ಟೇ ಅಲ್ಲದೆ ಉದ್ಯಮ ಕುರಿತು ಸಂಪೂರ್ಣ ಜ್ಞಾನ ಹೊಂದುವುದು ಅತ್ಯಂತ ಮುಖ್ಯ. ಉದ್ಯಮದ ಮಾರುಕಟ್ಟೆ ವ್ಯಾಪ್ತಿ, ಹಣಕಾಸಿನ ಸೌಲಭ್ಯ, ಸಂಪನ್ಮೂಲಗಳ ಸರಿಯಾದ ಬಳಕೆ ಬಗ್ಗೆ ಅರಿವು ಇರಬೇಕು. ಕಾಲಕ್ಕನುಗುಣವಾಗಿ ತಾಂತ್ರಿಕವಾಗಿ ಉನ್ನತೀಕರಣಗೊಂಡಲ್ಲಿ ಮಾತ್ರ ಯಶಸ್ವಿ ಉದ್ಯಮದಾರರಾಗಲು ಸಾಧ್ಯ ಎಂದರು.

ಶ್ರೀ ಶಾಂಭವಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಂಸ್ಥೆ ಕಾರ್ಯದರ್ಶಿ ಪ್ರವೀಣಕುಮಾರ ಎಸ್‌. ಮಾತನಾಡಿ, ಮೊದಲು ಸಣ್ಣ ಪ್ರಮಾಣದಲ್ಲಿ ಉದ್ಯಮ ಸ್ಥಾಪಿಸಬೇಕು. ಛಲ ಬಿಡದೆ ಸತತ ಪ್ರಯತ್ನ ಮಾಡಿದರೆ ಖಂಡಿತವಾಗಿಯೂ ಉದ್ಯಮದಲ್ಲಿ ಯಶಸ್ಸು ಗಳಿಸಬಹುದು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ಸಿಡಾಕ್‌ನ ಜಂಟಿ ನಿರ್ದೇಶಕ ಆರ್‌.ಪಿ. ಪಾಟೀಲ್‌, ಸಿಡಾಕ್‌ ಸಂಸ್ಥೆಯ ಕಾರ್ಯವೈಖರಿ, ಕಾರ್ಯಕ್ರಮಗಳು ಹಾಗೂ ತರಬೇತಿ ಕುರಿತು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ದಾವಣಗೆರೆ ಜನಶಿಕ್ಷಣ ಸಂಸ್ಥೆಯ ನಿವೃತ್ತ ನಿರ್ದೇಶಕ ಮುಕುಂದಪ್ಪ ಬಿ. ಅವರು ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮವನ್ನು ಯಾವ ರೀತಿಯಲ್ಲಿ ಪ್ರಾರಂಭಿಸಬೇಕು. ಉದ್ಯಮ ಆರಂಭಿಸಲು ಇರುವಂತಹ ಅವಕಾಶಗಳನ್ನು ಗುರುತಿಸುವುದು ಹೇಗೆ, ಸವಾಲುಗಳನ್ನು ಎದುರಿಸುವ ಬಗೆ, ಸರ್ಕಾರಿ ಯೋಜನೆಗಳ ಮತ್ತು ವಿವಿಧ ಇಲಾಖೆಗಳ ಬಗ್ಗೆ ತಿಳಿಸಿದರು.

ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದ ಪ್ರಭಾರಿ ವ್ಯವಸ್ಥಾಪಕ ಶಾಂತರಾಜು, ತರಬೇತುದಾರ ಬಸವರಾಜ ಜಿ.ಬಿ., ವಿನಯ ಜಿ.ಕೆ. ಇದ್ದರು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.