ಸಾಮಾಜಿಕ ಜಾಲತಾಣ ನಿಗಾಕ್ಕೆ ನಿರ್ವಹಣಾ ಘಟಕ ಸ್ಥಾಪನೆ

Team Udayavani, Jun 27, 2018, 5:14 PM IST

27-june-21.jpg

ಹಾವೇರಿ: ಪೊಲೀಸ್‌ ಇಲಾಖೆಯ ಪೂರ್ವ ವಲಯದ ಎಲ್ಲ 10 ಜಿಲ್ಲೆಗಳಲ್ಲೂ ಸಾಮಾಜಿಕ ಜಾಲತಾಣ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರ ದೂರುಗಳಲ್ಲದೇ ಸ್ವಯಂ ನಿಗಾವಹಿಸಿ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲಿರಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಶರತ್ಚಂದ್ರ  ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಕೋಮುಗಲಭೆ ಹುಟ್ಟುಹಾಕುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ವಲಯದ ಶಿವಮೊಗ್ಗ ಜಿಲ್ಲೆ ಕೋಮು ಸೂಕ್ಷ್ಮ ಜಿಲ್ಲೆಯಾಗಿದ್ದು, ಅತ್ಯಂತ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಉಳಿದಂತೆ ಯಾವುದೇ ಕಾನೂನಾತ್ಮಕ ಸಮಸ್ಯೆಗಳು ಗಂಭೀರತೆಯನ್ನು ಹೊಂದಿಲ್ಲ ಎಂದರು.

ಪೂರ್ವ ವಲಯದ ಎಲ್ಲ ಜಿಲ್ಲೆಗಳಲ್ಲೂ ಕೋಮು ಸೌಹಾರ್ದತೆಗೆ ಆದ್ಯತೆ ನೀಡಲಾಗಿದೆ. ಕೋಮು ವಾತಾವರಣವನ್ನು ಕದಡುವ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಪೊಲೀಸ್‌ ಇಲಾಖೆ ಬ್ರಿಟಿಷ್‌ ಕಾಲದ ಆಡಳಿತ ಪದ್ಧತಿಯಿಂದ ಹೊರಬಂದು ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಬೀಟ್‌ ವ್ಯವಸ್ಥೆಯಂತಹ ಹಲವು ಜನಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಈಗಾಗಲೇ ಪೊಲೀಸ್‌ ಇಲಾಖೆ ರೂಪಿಸಿರುವ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಂಡರೆ ಅತ್ಯುತ್ತಮವಾದ ಪೊಲೀಸ್‌ ಸೇವೆಯನ್ನು ಜನರಿಗೆ ನೀಡಬಹುದಾಗಿದೆ ಎಂದರು.

ಶಾಂತಿಯುತ ಜಿಲ್ಲೆ: ಪೂರ್ವ ವಲಯದ ಜಿಲ್ಲೆಗಳಲ್ಲಿ ಹಾವೇರಿ ಶಾಂತಿಯುತ ಜಿಲ್ಲೆಯಾಗಿದೆ. ವಾರ್ಷಿಕ ಅಪರಾಧ ವರದಿಗಳನ್ನು ಪರಿಗಣಿಸಿದಾಗ ವರ್ಷದಿಂದ ವರ್ಷಕ್ಕೆ ಅಪರಾಧ ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲಿ ಇಳಿಮುಖವಾಗಿದೆ. ಅಪರಾಧ ಪ್ರಮಾಣ ಕಡಿಮೆ ಇದೆ. ಹಾವೇರಿ ಸೇರಿದಂತೆ ಪೂರ್ವ ವಲಯದ ಎಲ್ಲ ಜಿಲ್ಲೆಗಳ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕ ತಡೆಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಮರಳು ಟಾಸ್ಕ್ಪೋರ್ಸ್‌ ಸಮಿತಿ ಅನಧಿಕೃತ ಮರಳುಗಾರಿಕೆ ಕುರಿತಂತೆ ಕ್ರಮ ವಹಿಸಲಿದೆ. ಈ ಸಮಿತಿಯ ತೀರ್ಮಾನದಂತೆ ಪೊಲೀಸ್‌ ಇಲಾಖೆ ಕೆಲಸ ಮಾಡುತ್ತದೆ. ಮರಳು ಅಕ್ರಮ ನಡೆದರೆ ನೇರವಾಗಿ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದರು.

ವರ್ಗಾವಣೆ: ಸರ್ಕಾರದ ವರ್ಗಾವಣೆಯ ಮಾರ್ಗಸೂಚಿಯ ಅನುಸಾರ ಎಸ್‌ಐ ಮೇಲ್ಪಟ್ಟ ಅಧಿಕಾರಿಗಳನ್ನು ವಲಯವಾರು ಹಾಗೂ ಎಎಸ್‌ಐ ಕೆಳಮಟ್ಟದಿಂದ ಕೆಳಗಿನ ಅಧಿಕಾರಿಗಳನ್ನು ಜಿಲ್ಲೆಯೊಳಗೆ ವರ್ಗಾವಣೆ ಮಾಡಲಾಗುವುದು. ಸರ್ಕಾರದಿಂದ ಇನ್ನೂ ವರ್ಗಾವಣೆಯ ಮಾರ್ಗಸೂಚಿ ಬಂದಿಲ್ಲ. ಸದ್ಯದ ಮಟ್ಟಿಗೆ ಸರ್ಕಾರದ ಸೂಚನೆಯಂತೆ ಚುನಾವಣಾ ಕಾರಣಗಳಿಗಾಗಿ ವರ್ಗಾವಣೆಗೊಂಡ ಪೊಲೀಸ್‌ ಅಧಿಕಾರಿಗಳನ್ನು ಮರಳಿ ಚುನಾವಣಾ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಮಾರ್ಗಸೂಚಿಯಂತೆ 100 ಪೊಲೀಸರಿಗೆ ಶೇ.40ರಷ್ಟು ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯಮವಿದೆ. 2020ರೊಳಗೆ ಶೇ.60ರ ಪ್ರಮಾಣದಲ್ಲಿ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಪೊಲೀಸ್‌ ಕ್ಷೇಮಾಭಿವೃದ್ಧಿಯ ನಿಯಮಾವಳಿ ಅನುಸಾರ ವಸತಿ ಗೃಹಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದರು. ಜಿಲ್ಲಾಧಿಕಾರಿ ಡಾ| ಎಂ.ವಿ. ವೆಂಕಟೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀ ಗಣೇಶನ್‌ ಇದ್ದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.