ದೇಶ-ಸಂವಿಧಾನ ಉಳಿವಿಗಾಗಿ ರೈತರ ಹೋರಾಟ

Team Udayavani, Mar 22, 2021, 7:47 PM IST

rakesh

ದಾವಣಗೆರೆ: ದೆಹಲಿಯ ನಾಲ್ಕು ಗಡಿಗಳಲ್ಲಿ ರೈತರು 120 ದಿನಗಳಿಂದ ನಡೆಸುತ್ತಿರುವ ಹೋರಾಟ ಜೀವ ಸಂಕುಲದ ಉಳಿವಿಗಾಗಿ ನಡೆಸುತ್ತಿರುವ ಹೋರಾಟ ಎಂದು ರಾಷ್ಟ್ರೀಯ ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿಶ್ಲೇಷಿಸಿದ್ದಾರೆ.

ಭಾನುವಾರ ನಗರದ ಅಂಬೇಡ್ಕರ್‌ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕರಾಳ, ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ ಬರೀ ರೈತರಿಗಾಗಿ ಅಲ್ಲ. ದೇಶ ಮತ್ತು ಸಂವಿಧಾನದ ಉಳಿವಿಗಾಗಿ. ದೇಶದ ಪ್ರತಿಯೊಂದು ಗ್ರಾಮದ ಉಳಿವಿಗಾಗಿ ನಡೆಸುತ್ತಿರುವ ಹೋರಾಟ. ಗ್ರಾಮ ಉಳಿದರೆ ದೇಶ ಉಳಿಯುತ್ತದೆ ಎಂದರು.

ದೆಹಲಿಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ನೀವೆಲ್ಲರೂ ದೆಹಲಿಗೆ ಬರಬೇಕಾಗಿಲ್ಲ. ಬೆಂಗಳೂರಿನಲ್ಲೇ ದೆಹಲಿ ಮಾದರಿಯ ಹೋರಾಟ ರೂಪಿಸುವಂತಾಗಬೇಕು. ದೆಹಲಿಯಲ್ಲಿ ರೈತರು ಹೇಗೆ ನಾಲ್ಕು ದಿಕ್ಕುಗಳಲ್ಲಿ ದಿಗ್ಬಂಧನ ಹಾಕಿದ್ದಾರೋ ಅದೇ ಮಾದರಿಯಲ್ಲಿ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲು ಹೋರಾಟಗಾರರು ದಿ ಗ್ಬಂಧನ ಹಾಕಬೇಕು ಎಂದು ಕರೆ ನೀಡಿದರು. ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ 2024 ರವರೆಗೆ ಜಾರಿಯಲ್ಲಿರುತ್ತದೆ. ಕೆಲವರು ರೈತರ ಹೋರಾಟದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದನ್ನು ಯಾರೂ ನಂಬಲೇಬಾರದು. ಹಣವನ್ನು ತಿಜೋರಿಯಲ್ಲಿ ಇಡುವಂತೆ ರೈತರು ಬೆಳೆದಂತಹ ಆಹಾರ ಧಾನ್ಯಗಳನ್ನು ಬಂಡವಾಳಶಾಹಿಗಳಿಂದ ತಿಜೋರಿಯಲ್ಲಿ ಇಡಲಾಗುತ್ತಿದೆ. ಮನಸ್ಸಿಗೆ ಬಂದ ಧಾರಣೆಗೆ ಆಹಾರ ಧಾನ್ಯಗಳ ಮಾರಾಟ ಮಾಡುವ ಹುನ್ನಾರವೂ ನಡೆದಿದೆ. ಈ ರೀತಿ ಆದಲ್ಲಿ ನಮ್ಮ ಅಕ್ಕಪಕ್ಕದ ಸಣ್ಣ ಪುಟ್ಟ ಕಿರಾಣಿ ಅಂಗಡಿಯವರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು.

ನಮ್ಮ ಹೋರಾಟ ಜಾತಿ, ಧರ್ಮ, ಪಂಥ ಮೀರಿದ ಜೀವ ಸಂಕುಲದ ಉಳಿವಿಗಾಗಿ ನಡೆಯುತ್ತಿರುವ ಹೋರಾಟ. ನಮ್ಮ ಭಾಷೆ ಬೇರೆಯಾದರೂ ದೇಶದ ಎಲ್ಲ ಅನ್ನದಾತರ ಭಾವನೆ ಒಂದೇ. ಹಾಗಾಗಿ ನಾವು ಜೈ ಶ್ರೀರಾಮ್‌, ಜೈ ಭೀಮ್‌, ಅಲ್ಲಾ ಹೋ ಅಕ್ಬರ್‌, ಹರ ಹರ ಮಹಾದೇವ್‌ ಎಂಬ ಘೋಷಣೆಯೊಂದಿಗೆ ಹೋರಾಟ ಮುಂದುವರೆಸೋಣ ಎಂದು ತಿಳಿಸಿದರು. ರೈತ ಮುಖಂಡರಾದ ತೇಜಸ್ವಿ ಪಟೇಲ್‌, ಚುಕ್ಕಿ ನಂಜುಂಡಸ್ವಾಮಿ, ಹೊನ್ನೂರು ಮುನಿಯಪ್ಪ, ಕಾರ್ಮಿಕ ಮುಖಂಡ ಎಚ್‌.ಕೆ. ರಾಮಚಂದ್ರಪ್ಪ, ಕಾರ್ಯಕ್ರಮದ ರೂವಾರಿ ಅನೀಸ್‌ ಪಾಷಾ, ಅರುಣ್‌ಕುಮಾರ್‌ ಕುರುಡಿ, ಬಲ್ಲೂರು ರವಿಕುಮಾರ್‌, ಎಲ್‌.ಎಚ್‌. ಅರುಣ್‌ಕುಮಾರ್‌, ಸತೀಶ್‌ ಅರವಿಂದ್‌, ಸುನಿತ್‌ಕುಮಾರ್‌, ಡಾ| ವಸುಧೇಂದ್ರ ಇತರರು ಇದ್ದರು.

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.