ರೇಣುಕಾಚಾರ್ಯ ಢೋಂಗಿ ರಾಜಕಾರಣಿ

Team Udayavani, Dec 20, 2020, 4:41 PM IST

dg-tdy-1

ದಾವಣಗೆರೆ: ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ಇಲ್ಲಸಲ್ಲದ ಸುಳ್ಳು ಆಪಾದನೆ ಮಾಡಿದ ಶಾಸಕ ರೇಣುಕಾಚಾರ್ಯ ಕೂಡಲೇ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಕಂಡ ಕಂಡಲ್ಲಿ ಅವರಿಗೆ ಮಸಿ ಹಚ್ಚುವ, ಕಪ್ಪು ಬಟ್ಟೆ ಪ್ರದರ್ಶಿಸುವ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಎಚ್ಚರಿಕೆ ನೀಡಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯ ಢೋಂಗಿ ರಾಜಕಾರಣಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಮೊಣಕಾಲಷ್ಟು ಸಹ ನೀರಿಲ್ಲದನೀರಲ್ಲಿ ತೆಪ್ಪ ಚಾಲನೆ ಮಾಡಿದ್ದು, ನರ್ಸ್‌ಳೊಂದಿಗಿನ ಅಸಭ್ಯ ವರ್ತನೆ ಹೀಗೆ ಅನೇಕ ಡೋಂಗಿ ಕೆಲಸಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಇಂಥ ವ್ಯಕ್ತಿ ಈಗ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ಆರೋಪ ಮಾಡುತ್ತಿದ್ದು ಮುಖ್ಯಮಂತ್ರಿಯವರು ಕೂಡಲೇ ಇವರ ಬಾಯಿಗೆ ಬೀಗ ಹಾಕಬೇಕು.ಇಲ್ಲದಿದ್ದರೆ ಮುಖ್ಯಮಂತ್ರಿ ವಿರುದ್ಧವೂ ಪ್ರತಿಭಟನೆ  ಹಮ್ಮಿಕೊಳ್ಳಬೇಕಾಗುತ್ತದೆ ಎಂದರು.

ರೇಣುಕಾಚಾರ್ಯ ಶಾಸಕರಾಗುವ ಮೊದಲು ಬೋರ್‌ವೆಲ್‌ ಏಜೆನ್ಸಿಯೊಂದರಲ್ಲಿ ಕೆಲಸಕ್ಕೆ ಇದ್ದರು. ಶಾಸಕರಾದ ಬಳಿಕ ಅವರ ಆಸ್ತಿ, ಅಕ್ರಮ ಸಂಪಾದನೆಎಷ್ಟಾಗಿದೆ ಎಂಬುದನ್ನು ಮುಖ್ಯಮಂತ್ರಿಯವರು ಕೂಲಂಕುಷ ತನಿಖೆ ನಡೆಸಬೇಕು. ಅಕ್ರಮವಾಗಿದ್ದರೆ ಕ್ರಮ ಕೈಗೊಂಡು ಮುಟ್ಟುಗೋಲು ಹಾಕಿಕೊಳ್ಳಬೇಕು. ಅದೇ ರೀತಿ ಕೋಡಿಹಳ್ಳಿ ಚಂದ್ರಶೇಖರ ಅವರ ಆಸ್ತಿಯನ್ನೂ ತನಿಖೆ ನಡೆಸಿ, ಅಕ್ರಮವಾಗಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದರು.

ಆರೋಪ ಸಾಬೀತುಪಡಿಸಲಿ: ಕೋಡಿಹಳ್ಳಿ ಚಂದ್ರಶೇಖರ ಅವರು ಯಾರನ್ನೋ ನಂಬಿಸಿವಂಚಿಸಿದ್ದಾರೆ, ರೈತರಿಂದ ಲಕ್ಷಾಂತರ ರೂ. ವಸೂಲಿ ಮಾಡಿದ್ದಾರೆ, ಅಕ್ರಮ ಆಸ್ತಿ ಮಾಡಿದ್ದಾರೆ ಎಂದೆಲ್ಲ ರೇಣುಕಾಚಾರ್ಯ ಆರೋಪ ಮಾಡಿದ್ದಾರೆ. ಅವರ ಈ ಆರೋಪ ನಿಜವೇ ಆಗಿದ್ದರೆ ದಾಖಲೆಗಳೊಂದಿಗೆಸಾಬೀತುಪಡಿಸಿ ಅವರ ಮೇಲೆ ಕ್ರಮ ಜರುಗಿಸುವಕೆಲಸ ಮಾಡಬೇಕು. ರೇಣುಕಾಚಾರ್ಯರು ಶಾಸಕರಾಗುವ ಮೊದಲು ಎಷ್ಟು ಆಸ್ತಿ ಹೊಂದಿದ್ದರು, ಈಗ ಅವರ ಆಸ್ತಿ ಎಷ್ಟಾಗಿದೆ ಎಂಬುದರ ಬಗ್ಗೆ ನಾವೂ ಮಾಹಿತಿ ಕೊಡುತ್ತೇವೆ ಎಂದರು.

ರೈತ ಸಂಘದ ಪ್ರಮುಖರಾದ ಕರೇಕಟ್ಟೆ ಕಲಿಂವುಲ್ಲಾ, ಮಂಜುನಾಥ್‌ ಮಲ್ಲಶೆಟ್ಟಿಹಳ್ಳಿ,  ಬಸವರಾಜ ದಾಗಿನಕಟ್ಟೆ, ಪ್ರಶಾಂತ್‌ ಮತ್ತೂರು ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಸಿಎಂ ಕೂಡ ಕ್ಷಮೆ ಕೇಳಲಿ  :  ರೇಣುಕಾಚಾರ್ಯ ಅವರು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿರುವುದರಿಂದ ಈ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸಹ ರೈತರ ಕ್ಷಮೆ ಕೇಳಬೇಕು.ರೇಣುಕಾಚಾರ್ಯ ಆಸ್ತಿ ತನಿಖೆ ಮಾಡಿ ಅವರ ಮೇಲೆ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿಯವರಆಸ್ತಿ ತನಿಖೆಗೂ ಒತ್ತಾಯಿಸಿ ಹೋರಾಟ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರ ನಾಯ್ಕ ಎಚ್ಚರಿಸಿದರು.

ಟಾಪ್ ನ್ಯೂಸ್

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.