ಮಾರ್ಗಸೂಚಿ ಪ್ರಕಾರವೇ ಹಬ್ಬದಾಚರಣೆ


Team Udayavani, Oct 20, 2020, 6:56 PM IST

dg-tdy-2

ದಾವಣಗೆರೆ: ಸರಕಾರ ಹೊರಡಿಸಿರುವ ಕೋವಿಡ್‌ -19 ಸುರಕ್ಷತಾ ಮಾರ್ಗಸೂಚಿಯಂತೆ ಈ ಬಾರಿ ವಿಜಯದಶಮಿ, ದೀಪಾವಳಿ ಹಾಗೂ ಈದ್‌ ಮಿಲಾದ್‌ಹಬ್ಬಗಳನ್ನು ಆಚರಿಸಬೇಕು. ಮೆರವಣಿಗೆ, ಸಾಮೂಹಿಕಪ್ರಾರ್ಥನೆ ಇಲ್ಲದೇ ಎಲ್ಲಿಯೂ ಜನದಟ್ಟಣೆ ಮಾಡಿಕೊಳ್ಳದೆ ಸರಳವಾಗಿ, ಸೌಹಾರ್ದಯುತವಾಗಿ ಮೂರೂ ಹಬ್ಬಗಳನ್ನು ಆಚರಿಸಬೇಕು ಎಂದು ಸರ್ವ ಧರ್ಮ ಪ್ರಮುಖರು, ಗಣ್ಯರು ನಿರ್ಧರಿಸಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಸೋಮವಾರ ನಡೆದ ಶಾಂತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜೀವ ಇದ್ದರೆ ಜೀವನ. ಆರೋಗ್ಯ ಚೆನ್ನಾಗಿದ್ದರೆ ಮುಂದೆ ಎಲ್ಲ ಹಬ್ಬ, ಉತ್ಸವಗಳನ್ನು ಅದ್ಧೂರಿಯಾಗಿಯೇ ಆಚರಿಸಬಹುದು. ಹೀಗಾಗಿ ಇಂದಿನ ಕೊರೊನಾ ಸಂಕಷ್ಟ ಕಾಲದಲ್ಲಿ ಎಲ್ಲರೂ ಮನೆಯಲ್ಲಿಯೇ ಹಬ್ಬಗಳನ್ನು ಆಚರಿಸಬೇಕು ಎಂದು ಸಭೆಯಲ್ಲಿದ್ದ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದೇವತೆ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನ ಟ್ರಸ್ಟ್‌ ಧಮದರ್ಶಿ ಗೌಡ್ರ ಚನ್ನಬಸಪ್ಪ ಮಾತನಾಡಿ,ನಮ್ಮ ಆರೋಗ್ಯ ನಮ್ಮ ಕೈಯಲ್ಲೇ ಇದೆ. ಹೀಗಾಗಿ ದೇವಸ್ಥಾನದಲ್ಲಿಯೂ ಎಲ್ಲ ಆಚರಣೆಗಳನ್ನು ಸರಳಗೊಳಿಸಲಾಗಿದೆ ಎಂದು ತಿಳಿಸಿದರು. ಮೌಲ್ವಿ ಮಹಮ್ಮದ್‌ ಮುಸ್ತಾಫ್‌ ಮಾತನಾಡಿ, ಮನುಕುಲದ ರಕ್ಷಣೆಯೇ ಎಲ್ಲ ಹಬ್ಬಗಳ ಉದ್ದೇಶವಾಗಿದೆ. ಮನುಕುಲದ ರಕ್ಷಣೆಗಾಗಿಯೇ ಸರಕಾರಗಳು ಕೆಲವು ಮಾರ್ಗಸೂಚಿಗಳನ್ನು ನೀಡಿದ್ದು ಅವುಗಳನ್ನುಎಲ್ಲರೂ ಪಾಲಿಸುವ ಮೂಲಕ ಮನುಕುಲದ ರಕ್ಷಣೆಗೆ ಕೈಜೋಡಿಸೋಣ ಎಂದರು.

ಪ್ರಮುಖರಾದ ಸತೀಶ್‌ ಪೂಜಾರಿ, ಶಿವಪ್ರಕಾಶ್‌, ಚಮನ್‌ಸಾಬ್‌ ಯಾಸೀನ್‌ ಪೀರ್‌, ಸಿರಾಜ್‌ ಅಹ್ಮದ್‌, ಅಮಾನುಲ್ಲಾ ಖಾನ್‌ ಇನ್ನಿತರರು ಮಾತನಾಡಿ, ಸರಕಾರದ ಮಾರ್ಗಸೂಚಿಯಂತೆ ಹಬ್ಬಗಳನ್ನುಆಚರಿಸಲು ಬೆಂಬಲ, ಸಹಕಾರ ನೀಡುವುದಾಗಿ ಹೇಳಿದರು.

ಮೂರು ಮಂತ್ರ ಪಾಲಿಸಿ: ಕೋವಿಡ್ ಮಾರ್ಗಸೂಚಿ ಪ್ರಕಾರ ಮೆರವಣಿಗೆ, ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಇದೇ ಸಂದರ್ಭದಲ್ಲಿ ವಿಧಾನಪರಿಷತ್‌ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ನ. 5ರವರೆಗೆ ಜಾರಿಯಲ್ಲಿರುತ್ತದೆ.ನಾಗರಿಕರೆಲ್ಲರೂ ಮಾಸ್ಕ್, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್‌ ಎಂಬ ಮೂರು ಮಂತ್ರಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ ಮಾತನಾಡಿ, ಪರಿಷತ್‌ ಚುನಾವಣಾ ನೀತಿಸಂಹಿತೆಜಾರಿಯಲ್ಲಿರುವುದರಿಂದ ಬಂಟಿಂಗ್ಸ್‌, ಫ್ಲೆಕ್ಸ್‌, ಬ್ಯಾನರ್‌ಕಟ್ಟಲು ನಿರ್ಬಂಧವಿದೆ. ಹಬ್ಬದ ದಿನಗಳಲ್ಲಿ ನೀರು ಹೆಚ್ಚು ಬೇಕಾಗುತ್ತದೆ. ಎಲ್ಲರಿಗೂ ಕುಡಿಯುವ ನೀರಿನ ವ್ಯವಸ್ಥೆಮಾಡಲಾಗುವುದು. ಯಾವುದಾದರೂ ಪ್ರದೇಶದಲ್ಲಿ ನೀರಿನ ತೊಂದರೆಯಾದರೆ ಕೂಡಲೇ ಪಾಲಿಕೆ ಗಮನಕ್ಕೆ ತರಬೇಕು. ಟ್ಯಾಂಕರ್‌ ಮೂಲಕವೂ ನೀರಿನ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಹಬ್ಬದಾಚರಣೆ, ಧರ್ಮ ಎಂಬುದು ಪ್ರತಿಯೊಬ್ಬರ ವೈಯಕ್ತಿಕ ವಿಚಾರ. ಇದನ್ನು ನಮ್ಮ ಮನೆಯಲ್ಲಿಯೇ ಆಚರಿಸಿಕೊಳ್ಳಬೇಕು. ಹಬ್ಬಗಳಿಗಾಗಿ ಕೇಂದ್ರ, ರಾಜ್ಯ ಸರಕಾರದ ಜತೆಗೆ ಸ್ಥಳೀಯ ಜಿಲ್ಲಾಡಳಿತ ವಿಧಿಸುವ ಸೂಚನೆಗಳನ್ನೂ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮೂಲಕ ಆರೋಗ್ಯ ಸುರಕ್ಷತೆಗೆ ಸಹಕರಿಸಬೇಕು ಎಂದರು.

ಹಬ್ಟಾಚರಣೆ ಹಿನ್ನೆಲೆಯಲ್ಲಿ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪೊಲೀಸ್‌ ಉಪಾಧೀಕ್ಷ ಪ್ರಶಾಂತ್‌ ಸಭೆಯಲ್ಲಿ ಓದಿದರು. ವಿವಿಧ ಸಮುದಾಯ, ಸಂಘಟನೆಗಳ ಪ್ರಮುಖರು, ಪದಾಧಿಕಾರಿಗಳು,  ಸಾರ್ವಜನಿಕರು, ಪೊಲೀಸ್‌ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 ಕೋವಿಡ್ ನೆಗೆಟಿವ್‌ ವರದಿ ಕಡ್ಡಾಯಗೊಳಿಸಿ: ಡಿಸಿ ಬೀಳಗಿ :  ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕಡಿಮೆಯಾಗಿಲ್ಲ, ಹೆಚ್ಚುತ್ತಲೇ ಇದೆ. ಈ ಬಗ್ಗೆ ಯಾರೂ ಮೈಮರೆಯಬಾರದು. ಇತ್ತೀಚೆಗೆ ಕೋವಿಡ್ ತಪಾಸಣೆಗೆ ಜನರು ಮುಂದೆ ಬರುತ್ತಿಲ್ಲ. ಕಡಿಮೆ ಸಂಖ್ಯೆಯಲ್ಲಿ ತಪಾಸಣೆ ಆಗುತ್ತಿರುವುದರಿಂದ ಸೋಂಕಿತರ ಸಂಖ್ಯೆಯೂ ಕಡಿಮೆ ವರದಿಯಾಗುತ್ತಿವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಸಂಘ-ಸಂಸ್ಥೆಗಳು ತಾವು ಸಂಘಟಿಸುವ ಕಾರ್ಯಕ್ರಮ ಇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರಿಗೆ ಕೊರೊನಾ ನೆಗೆಟಿವ್‌ ವರದಿ ತರುವುದನ್ನು ಕಡ್ಡಾಯಗೊಳಿಸಿದರೆ ಆಗ ಹೆಚ್ಚು ಜನರುತಪಾಸಣೆಗೆ ಒಳಗಾಗಬಹುದು. ಯಾವುದೇ ಸಂಘಟನೆ ಸಾಮೂಹಿಕವಾಗಿ ತಪಾಸಣೆಗೆ ಮುಂದೆ ಬಂದರೆ ಅವರಿದ್ದಲ್ಲಿಗೇ ಸಂಚಾರಿ ತಪಾಸಣಾ ವಾಹನ ಕಳುಹಿಸಿ ಕೊಡಲಾಗುವುದು ಎಂದರು.

ಪಟಾಕಿ ಅಂಗಡಿಗಳಿಗೆ ಅನುಮತಿ :  ನಗರದ ಹೈಸ್ಕೂಲ್‌ ಮೈದಾನದಲ್ಲಿ ಈಗಾಗಲೇ ಖಾಸಗಿ ಹಾಗೂ ಸರಕಾರಿ ತಾತ್ಕಾಲಿಕ ಬಸ್‌ ನಿಲ್ದಾಣಕ್ಕಾಗಿ ಜಾಗೆ ನೀಡಲಾಗಿದೆ. ಉಳಿದಿರುವ ಕಡಿಮೆ ಜಾಗದಲ್ಲಿ ಮೊದಲು ಬಂದವರಿಗೆ ಮೊದಲಆದ್ಯತೆಯಂತೆ ಪಟಾಕಿ ಅಂಗಡಿಗಳನ್ನು ಹಾಕಲು ಅನುಮತಿ ನೀಡಲಾಗುವುದು. ನ. 10 ರಿಂದ 17ವರೆಗೆ ಪಟಾಕಿ ಅಂಗಡಿ ಹಾಕಲು ಅವಕಾಶ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಅ. 31ವರಗೆ ಅವಕಾಶ ನೀಡಲಾಗುವುದು ಎಂದು ಎಸ್ಪಿ ಹನುಮಂತರಾಯ ತಿಳಿಸಿದರು.

ಸಾಮಾಜಿಕ ಅಂತರ ಮಾಯ! :ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಎಸ್ಪಿ ಕಚೇರಿ ಸಭಾಭವನದಲ್ಲಿ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲ ಹಿರಿಯ ಅಧಿಕಾರಿಗಳು ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆಯೇ ಹೆಚ್ಚು ತಿಳಿವಳಿಕೆ ನೀಡಿದರು.ವಿಪರ್ಯಾಸವೆಂದರೆ ಈ ಸಭೆಯಲ್ಲಿಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಆಸನ ವ್ಯವಸ್ಥೆ ಮಾಡಿರಲಿಲ್ಲ. ಜನರು ಸಾಮಾಜಿಕ ಅಂತರವಿಲ್ಲದೆ ಸಭೆಯಲ್ಲಿ ಕುಳಿತು ಸಾಮಾಜಿಕ ಅಂತರ ಪಾಲನೆಯ ಪಾಠ ಕೇಳಿದ್ದು ವಿಪರ್ಯಾಸ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.