ಕೋವಿಡ್‌ ವಿರುದ್ಧ ಸಮರ ಅಗತ್ಯ

Team Udayavani, Sep 27, 2020, 5:58 PM IST

ಕೋವಿಡ್‌ ವಿರುದ್ಧ ಸಮರ ಅಗತ್ಯ

ಹೊನ್ನಾಳಿ: ಅವಳಿ ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಕೋವಿಡ್‌ ವಿರುದ್ಧ ನಾವೆಲ್ಲರೂ ಸಮರ ಸಾರಲೇಬೇಕು ಎಂದು ತಹಶೀಲ್ದಾರ್‌ ತನುಜಾ ಸೌದತ್ತಿ ಹೇಳಿದರು.

ತಾಲೂಕು ಕಚೇರಿಯಲ್ಲಿ ನಡೆದ ಕೋವಿಡ್‌ ನಿರ್ವಹಣಾ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಕೋವಿಡ್ ಬಗ್ಗೆ ನಿರ್ಲಕ್ಷ್ಯ ಧೋರಣೆ ಇರುವುದರಿಂದ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಬಗ್ಗೆ ಮತ್ತಷ್ಟು ಜಾಗೃತಿ ಮೂಡಬೇಕಿದೆ. ಪ್ರತಿ ದಿನ ವಿಶೇಷವಾಗಿ ಗ್ರಾಮಾಂತರ ಪ್ರದೇಶದಲ್ಲಿ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗಂಟಲಿನ ಮಾದರಿ ಹಾಗೂ ರ್ಯಾಪಿಡ್‌ ಟೆಸ್ಟ್‌ಗಳನ್ನು ಹೆಚ್ಚೆಚ್ಚು ಮಾಡಬೇಕೆಂದು ಸೂಚಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ| ಕೆಂಚಪ್ಪ ಮಾತನಾಡಿ, ಅವಳಿ ತಾಲೂಕಿನಲ್ಲಿ 1972 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 317 ಪ್ರಕರಣಗಳು ಸಕ್ರಿಯವಾಗಿವೆ. ಅವರಲ್ಲಿ 54 ಜನ ಸೋಂಕಿತರು ಮೃತಪಟ್ಟಿದ್ದಾರೆ. ದಯಮಾಡಿ ತಾಲೂಕು ಮಟ್ಟದ ಅಧಿಕಾರಿಗಳು, ವಿಎ, ಪಿಡಿಒ ಸೇರಿದಂತೆ ಎಲ್ಲರೂ ಸೇರಿ ಜನರಲ್ಲಿ ಜಾಗೃತಿ ಮೂಡಿಸಿ ಕೋವಿಡ್ ಸೋಂಕು ಹೆಚ್ಚಾಗದಂತೆ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.

ಸಿಪಿಐ ದೇವರಾಜ್‌ ಮಾತನಾಡಿ, ಮಾಸ್ಕ್ ಧರಿಸದ ಅವಳಿ ತಾಲೂಕಿನ 2042 ಜನರಿಗೆ 2.55 ಲಕ್ಷ ರೂ. ದಂಡ ವಿಧಿ ಸಿದ್ದೇವೆ. ಆದರೂ ಸಾರ್ವಜನಿಕರಲ್ಲಿ ಕೊರೊನಾ ವಿರುದ್ಧ ಜಾಗೃತಿ ಮೂಡದೇ ಇರುವುದು ವಿಷಾದನೀಯ. ಪೊಲೀಸರು ಪ್ರತಿದಿನ ಧ್ವನಿವರ್ಧಕದ ಮೂಲಕ ಹಾಗೂ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಪ್ರಮುಖ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು.

ಪಿಎಸ್‌ಐ ತಿಪ್ಪೇಸ್ವಾಮಿ, ನ್ಯಾಮತಿ ಪಿಎಸ್‌ಐ ಹನುಮಂತಪ್ಪ ಶೀರಿಹಳ್ಳಿ, ಉಪ ತಹಶೀಲ್ದಾರ್‌ ನಾಗರಾಜ್‌, ಸಿಡಿಪಿಒ ಮಹಾಂತೇಶ್‌ ಪೂಜಾರ್‌, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರುದ್ರಪ್ಪ, ಸಮಾಜಕಲ್ಯಾಣ ಇಲಾಖೆ ಅ ಧಿಕಾರಿ ದೊಡ್ಡ ಬಸವರಾಜ್‌, ಇಸಿಒ ಮುದ್ದನಗೌಡ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದಿನಿಂದ 15 ದಿನದವರೆಗೆ ಆಯ್ದ ಗ್ರಾಮಗಳಲ್ಲಿ ರ್ಯಾಪಿಡ್‌ ಮತ್ತು ಗಂಟಲಿನ ಮಾದರಿ ಪತ್ತೆ ಮಾಡಲು ಸಮಯ ಮತ್ತು ದಿನಾಂಕ ನಿಗದಿ ಮಾಡಲಾಗಿದೆ. ಇದಕ್ಕೆ ಎಲ್ಲಾ ಇಲಾಖೆ ಹಾಗೂ ಬಹು ಮುಖ್ಯವಾಗಿ ಪೊಲೀಸ್‌ ಇಲಾಖೆ ನಮಗೆ ಸಹಕಾರ ನೀಡಬೇಕು. – ಡಾ| ಕೆಂಚಪ್ಪ, ತಾಲೂಕು ವೈದ್ಯಾಧಿಕಾರಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.