ಅನ್ಯಭಾಷೆ ನಾಮಫಲಕ ತೆರವುಗೊಳಿಸದಿದ್ರೆ ಹೋರಾಟ: ರಾಮೇಗೌಡ

Team Udayavani, Oct 24, 2021, 2:10 PM IST

23dvg1

ದಾವಣಗೆರೆ: ನಗರದಲ್ಲಿ ಅನ್ಯಭಾಷೆಯ ಫಲಕಗಳು ರಾರಾಜಿಸುತ್ತಿದ್ದು ಮಹಾನಗರ ಪಾಲಿಕೆ ಆಯುಕ್ತರು ಅವುಗಳನ್ನು ನವೆಂಬರ್‌ 1ರೊಳಗೆ ತೆರವುಗೊಳಿಸಬೇಕು. ಇಲ್ಲದಿದ್ದರೆ ನ. 1ರಂದು ಅಂಥ ಫಲಕಗಳಿಗೆ ಮಸಿ ಬಳಿಯಲಾಗುವುದು ಹಾಗೂ ನವೆಂಬರ್‌ 2ರಂದು ಪಾಲಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ರಾಮೇಗೌಡ ಎಂ.ಎಸ್‌. ಎಚ್ಚರಿಕೆ ನೀಡಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗಡಿ, ವಾಣಿಜ್ಯ ಮಳಿಗೆಗಳಲ್ಲಿ ಶೇ. 56 ರಷ್ಟು ಕನ್ನಡ ಬಳಕೆಯಾಗಬೇಕೆಂಬ ನಿಯಮವಿದೆ. ಆದರೆ ನಗರದಲ್ಲಿ ಶೇ. 90ರಷ್ಟು ಆಂಗ್ಲಭಾಷೆಯ ಫಲಕಗಳಿವೆ. ಈ ಕುರಿತು ಸಾಕಷ್ಟು ಬಾರಿ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ನೀಡಿದರೂ ಕ್ರಮ ‌ಹಿಸಿಲ್ಲ ಎಂದು ದೂರಿದರು. ಕರ್ನಾಟಕದ ಏಕೀಕರಣ ಆದಾಗಿನಿಂದಲೂ ರಾಜ್ಯದಲ್ಲಿ ನವೆಂಬರ್‌ 1ರಂದು ರಾಷ್ಟ್ರದ ತ್ರಿವರ್ಣ ಧ್ವಜದೊಂದಿಗೆ ಕನ್ನಡ ಧ್ವಜ ಹಾರಿಸುತ್ತ ಬರಲಾಗಿತ್ತು. ಕಳೆದೆರಡು ವರ್ಷಗಳಿಂದ ರಾಜ್ಯ ಸರ್ಕಾರ ಕನ್ನಡ ಧ್ವಜ ಹಾರಿಸುವುದನ್ನು ತಡೆದಿದೆ. ಈ ವರ್ಷದಿಂದ ಮತ್ತೆ ಕನ್ನಡ ಧ್ವಜ ಹಾರಿಸುವಂತಾಗಬೇಕು.

ನಾಡಗೀತೆಯನ್ನು ಅವಮಾನಿಸಿರುವ ಚಕ್ರತೀರ್ಥ ಎಂಬ ವ್ಯಕ್ತಿಯ ಮೇಲೆ ಕ್ರಮ ಜರುಗಿಸಬೇಕು ಎಂದು ರಾಮೇಗೌಡ ಆಗ್ರಹಿಸಿದರು.

ಪ್ರತಿಭಾ ಪುರಸ್ಕಾರ

2020-21ನೇ ಸಾಲಿನ ಎಸ್‌ ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ ದಾವಣಗೆರೆ ವಲಯದ 157ವಿದ್ಯಾರ್ಥಿಗಳಿಗೆ ಕರವೇಯಿಂದ ಜ್ಞಾನಕಾಶಿ ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿಭಾ ಪುರಸ್ಕಾರ ಸಮಾರಂಭ ಅ. 24ರಂದು ಬೆಳಿಗ್ಗೆ 11 ಗಂಟೆಗೆ ಗುರುಭವನದಲ್ಲಿ ನಡೆಯಲಿದ್ದು, ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಶಿವಾನಂದ ಗುಂಡನವರ್‌ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಉಪನ್ಯಾಸ ನೀಡುವರು. ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್‌, ಕಸಾಪ ತಾಲೂಕು ಮಾಜಿ ಅಧ್ಯಕ್ಷ ಬಿ. ವಾಮದೇವಪ್ಪ, ಜೈನ್‌ ವಿದ್ಯಾಲಯದ ಕಾರ್ಯದರ್ಶಿ ನರೇಂದ್ರಕುಮಾರ್‌, ಉದ್ಯಮಿ ರಮೇಶ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್‌. ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಕೊಟ್ರೇಶ್‌, ಕರವೇ ಮಹಿಳಾ ಘಟಕದ ಅಧ್ಯಕ್ಷೆ ಬಸಮ್ಮ ಅತಿಥಿಗಳಾಗಿ ಭಾಗವಹಿಸುವರು. ಕರವೇ ಗೌರವಾಧ್ಯಕ್ಷ ವಾಸುದೇವ ರಾಯ್ಕರ್‌ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು. ಕರವೇ ಪದಾಧಿಕಾರಿಗಳು ಹಾಗೂ ಸದಸ್ಯರಾದ ಬಸಮ್ಮ, ಮಲ್ಲಿಕಾರ್ಜುನ್‌, ಬಸವರಾಜ್‌ , ದೇವರಮನಿ ಗೋಪಾಲ, ಎಂ.ಬಿ. ರಫೀಕ್, ಲೋಕೇಶ್‌, ಖಾದರ್‌ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.