ದೇಶದ ಏಕತೆಗಾಗಿ ಎಲ್ಲರಲ್ಲೂ ಭ್ರಾತೃತ್ವ ಮೂಡಿಸಿ

Team Udayavani, Jan 31, 2019, 7:26 AM IST

dvg-2.jpg

ದಾವಣಗೆರೆ: ಪ್ರತಿಯೊಬ್ಬರು ಘನತೆ ಮತ್ತು ಗೌರವಯುತವಾಗಿ ಜೀವಿಸಬೇಕಾದರೆ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಬಲಗೊಳಿಸಬೇಕು ಎಂದು ಮಾಸಬ ಕಾಲೇಜು ಪ್ರಾಚಾರ್ಯ ಡಾ| ಕೆ. ಹನುಮಂತಪ್ಪ ಹೇಳಿದರು.

ಬುಧವಾರ ಮಾಸಬ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಿ ಜನಜಾಗೃತಿ ಆಂದೋಲನದ ರಾಜ್ಯ ಮಟ್ಟದ ಕಲಾಜಾಥಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಏಕತೆ ಮತ್ತು ಸಮಗ್ರತೆಗಾಗಿ ಸಂವಿಧಾನದ ಆಶಯಗಳ ಉಳಿಸುವ ಮೂಲಕ ಎಲ್ಲರಲ್ಲಿ ಸಹೋದರ ಭಾವನೆ ಮೂಡಿಸುವ ದೃಢ ಸಂಕಲ್ಪ ಮಾಡಬೇಕು ಎಂದರು.

ಭಾರತ ಬ್ರಿಟಿಷರಿಂದ ಬಿಡುಗಡೆಗೊಂಡು ಸಂವಿಧಾನ ಅಳವಡಿಸಿಕೊಂಡ ನಂತರ ನಮ್ಮದೊಂದು ಹೊಸ ದೇಶವಾಯಿತು. ಹಲವು ಸಂಸ್ಕೃತಿಗಳ ಭಾರತದಲ್ಲಿ ಊಟ, ವಸತಿಯಿಂದ ಹಿಡಿದು ತತ್ವ ನಂಬಿಕೆಗಳವರೆಗೆ ಬಹುತ್ವ ಬಲಗೊಳಿಸಿದೆ. ಬಹುಜನರ ಹಿತಕ್ಕಾಗಿ ನಾವು ಬಹುತ್ವದ ಭಾರತವನ್ನು ಉಳಿಸಬೇಕಿದೆ. ಅಲ್ಲದೆ ದೇಶ ಕಟ್ಟುವ ಜವಾಬ್ದಾರಿ ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.

ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಿ ಜನಜಾಗೃತಿ ಆಂದೋಲನದ ರಾಜ್ಯ ಸಂಚಾಲಕ ಪ್ರೊ| ವೈ.ಜೆ. ರಾಜೇಂದ್ರ ಮಾತನಾಡಿ, ರೈತ, ಕಾರ್ಮಿಕ, ದಲಿತ, ಅಲ್ಪಸಂಖ್ಯಾತ ಹಾಗೂ ಮಹಿಳಾ, ವಂಚಿತ ಸಮುದಾಯಗಳ ಮಧ್ಯೆ ಸಂವಿಧಾನದ ಆಶಯಗಳ ಕುರಿತು ಅರಿವು ಮೂಡಿಸಬೇಕು. ಸಂವಿಧಾನ ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಸಮಪಾಲು-ಸಮಬಾಳು ತತ್ವ ಆಚರಣೆಗೆ ತರುವ ಮೂಲಕ ಸಾಮಾಜಿಕ, ಆರ್ಥಿಕ, ರಾಜಕೀಯ ಸಮಾನತೆಯ ಪಡೆಯಬೇಕಿದೆ ಎಂದು ತಿಳಿಸಿದರು.

ಮಾನವ ಹಕ್ಕುಗಳ ವೇದಿಕೆ ಜಿಲ್ಲಾ ಕಾರ್ಯದರ್ಶಿ ಎಲ್‌.ಎಚ್. ಅರುಣ್‌ಕುಮಾರ್‌ ಮಾತನಾಡಿ, ಭಾರತದ ಹಿತ ಪ್ರತಿಯೊಬ್ಬರ ಜನಸಾಮಾನ್ಯರ ಕೈಯಲ್ಲಿ ಇದೆ. ದೊಡ್ಡ ವ್ಯಾಪಾರಿ, ಸಂಸ್ಥೆಗಳಿಂದ ಮತ್ತು ಅವರ ಜೊತೆಗಾರರಾಗಿರುವ ನಾಯಕರಿಂದ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ. ಸಂವಿಧಾನದತ್ತ ಹಕ್ಕು ಪಡೆಯಲು ಜನಸಾಮಾನ್ಯರು ಜಾಗೃತರಾಗಬೇಕು ಎಂದರು.

ಪೀಪಲ್ಸ್‌ ಲಾಯರ್‌ ಗಿಲ್ಡ್‌ ಅಧ್ಯಕ್ಷ ಅನೀಸ್‌ ಪಾಷಾ, ಸ್ಲಂ ಜನಾಂದೋಲನದ ಜಿಲ್ಲಾ ಸಂಚಾಲಕಿ ರೇಣುಕಾ ಯಲ್ಲಮ್ಮ, ಸೈಯ್ಯದ್‌ ಶಬ್ಬೀರ್‌ಸಾಬ್‌, ಸಫಾಯಿ ಕರ್ಮಚಾರಿ ಸಂಘದ ಡಿ.ಎಸ್‌. ಬಾಬಣ್ಣ ಇತರರು ಇದ್ದರು. ಸಂವಿಧಾನ ಪ್ರೀತಿ ಕಲಾ ಬಳಗದ ಕಲಾವಿದರು ಭಾರತ ಚರಿತ ಎಂಬ ರೂಪಕ ಪ್ರದರ್ಶಿಸಿದರು.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.