ಪಡಿತರ ವಿತರಣೆಯಲ್ಲಿ ಅಕ್ರಮ-ಆರೋಪ

Team Udayavani, Jun 15, 2020, 5:02 PM IST

1-June-21

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹರಿಹರ: ನಗರದ ಹೊಸ ಭರಂಪುರದ ವಿಎಸ್‌ ಎಸ್‌ಎನ್‌ ನ್ಯಾಯಬೆಲೆ ಅಂಗಡಿಯಲ್ಲಿ ಲಾಕ್‌ಡೌನ್‌ ನಿಮಿತ್ತ ಸರ್ಕಾರ ನೀಡಿದ್ದ ಹೆಚ್ಚುವರಿ ಪಡಿತರ ಧಾನ್ಯ ಗುಳಂ ಮಾಡಿರುವುದು ಸೇರಿದಂತೆ ಹಲವು ಅಕ್ರಮ ಎಸಗಲಾಗುತ್ತಿದೆ ಎಂದು ಡಿಎಸ್‌ಎಸ್‌ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್‌ ಆರೋಪಿಸಿದರು.

ನಗರದ ರಚನಾ ಕ್ರೀಡಾ ಟ್ರಸ್ಟ್‌ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪಡಿತರದಾರರಿಂದ ಹಣ ವಸೂಲಿ, ಖುರ್ಚು-ವೆಚ್ಚಕ್ಕೆಂದು 1 ಕೆ.ಜಿ. ಕಡಿಮೆ ತೂಕ ಮಾಡುವುದು, ಪಡಿತರ ಚೀಟಿದಾರರಿಗೆ ನಿಯಮಿತವಾಗಿ ಪಡಿತರ ವಿತರಣೆ ಮಾಡದಿರುವುದು ಮುಂತಾದ ಅಕ್ರಮ ನಡೆಸಲಾಗುತ್ತಿದ್ದು, ಇದನ್ನು ಪ್ರಶ್ನಿಸುವ ಗ್ರಾಹಕರಿಗೆ ಅಂಗಡಿ ನಿರ್ವಹಿಸುವ ವಿಎಸ್‌ಎಸ್‌ಎನ್‌ ಸಿಬ್ಬಂದಿ ಪರಶುರಾಮ ಬೆದರಿಕೆ ಹಾಕುತ್ತಿದ್ದಾರೆ ಎಂದರು.

ಕೇಂದ್ರದ ಪಾಲು ಗುಳುಂ: ಅಂತ್ಯೋದಯ ಪಡಿತರದಾರರಿಗೆ ರಾಜ್ಯ ಸರಕಾರದ ನಿಯಮಿತ 35 ಕೆ.ಜಿ. ಜೊತೆಗೆ ಲಾಕ್‌ಡೌನ್‌ ನಿಮಿತ್ತ ಕುಟುಂಬದ ಒಬ್ಬ ಸದಸ್ಯನಿಗೆ ಕೇಂದ್ರ ಸರಕಾರದಿಂದ ತಲಾ 5 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡಲಾಗಿದೆ. ಆದರೆ ಈ ಅಂಗಡಿಯಲ್ಲಿ 35 ಕೆ.ಜಿ.ಮಾತ್ರ ವಿತರಿಸುತ್ತಿದ್ದು, ಹೆಚ್ಚುವರಿ ತಲಾ 5 ಕೆ.ಜಿ. ಬಹುತೇಕರಿಗೆ ವಿತರಿಸಿಲ್ಲ.

ಒಟಿಪಿ ಮೋಸ: ಪಡಿತರದಾರರ ಹೆಬ್ಬೆಟ್ಟು ಪಡೆದು ಅಥವಾ ಅವರ ಮೊಬೆ„ಲ್‌ಗೆ ಒಟಿಪಿ ಕಳಿಸುವ ಮೂಲಕ ಪಡಿತರ ವಿತರಿಸಲಾಗುತ್ತಿದೆ. ಆದರೆ ಯಾರಾದರೂ ಗ್ರಾಹಕರು ಪಡಿತರ ಒಯ್ಯುವುದು ವಿಳಂಬವಾದರೆ ಅಥವಾ ಒಯ್ಯದಿದ್ದರೆ ಕೂಡಲೆ ಈ ಅಂಗಡಿಯಲ್ಲಿ ಬೇರೊಂದು ಮೊಬೆ„ಲ್‌ಗೆ ಒಟಿಪಿ ಕಳಿಸಿಕೊಂಡು ತಾವೇ ಪಡಿತರ ಪಡೆದುಕೊಳ್ಳುತ್ತಾರೆ. ಇದೇ ರೀತಿ ಆನ್‌ಲೈನ್‌ ನಲ್ಲಿ ಬೇರೆ ನ್ಯಾಯಬೆಲೆ ಅಂಗಡಿಯ ಪಡಿತರದಾರರ ಮಾಹಿತಿ ಪಡೆದು ಅವರ ಪಾಲಿನ ಪಡಿತರವನ್ನು ಈ ವ್ಯಕ್ತಿ ಗುಳುಂ ಮಾಡುತ್ತಿದ್ದಾರೆ. ಇಂತಹ ಅಕ್ರಮವನ್ನು ತಾಲೂಕಿನ ಕೆಲವು ನ್ಯಾಯಬೆಲೆ ಅಂಗಡಿಯವರೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹೆಬ್ಬೆಟ್ಟಿಗೆ, ತೂಕಕ್ಕೆ 20 ರೂ.: ಪಡಿತರ ಪಡೆಯಲು ಲ್ಯಾಪ್‌ಟಾಪ್‌ನಲ್ಲಿ ಬಯೋಮೆಟ್ರಿಕ್‌ ಮಾಡಿಕೊಡಲು 10 ರೂ., ಪಡಿತರ ತೂಕ ಮಾಡಿಕೊಡಲು 10 ರೂ. ಸೇರಿ ಪ್ರತಿ ಗ್ರಾಹಕರಿಂದ ತಲಾ 20 ರೂ. ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ. ಇದಲ್ಲದೆ ಪಡಿತರ ಚೀಟಿದಾರರೊಂದಿಗೆ ಅಸಭ್ಯ ವರ್ತನೆ, ದುಂಡಾವರ್ತನೆ ತೋರುವ ಈ ಅಂಗಡಿ ನಿರ್ವಾಹಕನ ವಿರುದ್ಧ ಸಾರ್ವಜನಿಕರು ದೂರು ಕೊಟ್ಟರೂ ಶಿಸ್ತು ಕ್ರಮ ಕೈಗೊಳ್ಳದ ಆಹಾರ ಇಲಾಖಾಧಿಕಾರಿಗಳ ನಡೆ ಅನುಮಾನ ಮೂಡಿಸಿದೆ. ಕೂಡಲೆ ಹಿರಿಯ ಅಧಿಕಾರಿಗಳು ಸ್ಥಳೀಯ ಅಧಿಕಾರಿಗಳನ್ನು ದೂರವಿಟ್ಟು ಈ ಕುರಿತು ತನಿಖೆ ನಡೆಸಬೇಕು. ತಪ್ಪಿದಲ್ಲಿ ಪ್ರತಿಭಟಿಸಲಾಗುವುದು ಎಂದು ಅವರು ಅಗ್ರಹಿಸಿದರು. ಗೋಷ್ಠಿಯಲ್ಲಿ ಡಿ.ಎಂ.ಮಂಜುನಾಥ್‌ ಭಾನುವಳ್ಳಿ, ಬನ್ನಿಕೋಡು ವಾಗೀಶ್‌, ಹೊಸಪಾಳ್ಯದ ಯುವರಾಜ್‌, ಮಂಜುನಾಥ್‌, ಹಾಲೇಶ್‌, ಮಾರುತಿ ಮತ್ತಿತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.