ಹರಿಹರೇಶ್ವರಸ್ವಾಮಿ ರಥೋತ್ಸವ


Team Udayavani, Feb 10, 2020, 11:24 AM IST

10-February-4

ಹರಿಹರ: ಮಧ್ಯ ಕರ್ನಾಟಕದಲ್ಲೇ ಪ್ರಸಿದ್ಧವಾದ ಶ್ರೀ ಹರಿಹರೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ನಗರದಲ್ಲಿ ಭಾನುವಾರ ಶ್ರದ್ಧೆ, ಭಕ್ತಿ, ಸಡಗರದಿಂದ ನೆರವೇರಿತು.

ಶಾಸಕ ಎಸ್‌.ರಾಮಪ್ಪ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಿಂದ. ಶಿವಮೊಗ್ಗ ವೃತ್ತದವರೆಗೆ ಭಕ್ತರು ಹರ ಹರ ಮಾಹದೇವ್‌, ಗೋವಿಂದಾ… ಗೋವಿಂದಾ… ಎಂದು ನಾಮಸ್ಮರಣೆ ಮಾಡುತ್ತಾ ರಥ ಎಳೆದರು.

ಕೆಲವರು ತೇರಿನ ಮುಕುಟಕ್ಕೆ ಬಾಳೆಹಣ್ಣು, ಹೂವು, ಉತ್ತತ್ತಿ ಎಸೆದರು. ತೇರಿನ ಗಾಲಿಗಳಿಗೆ ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು. ರಥೋತ್ಸವದಲ್ಲಿ ಸಾವಿರಾರು ಜನ ಭಕ್ತಿ, ಶ್ರದ್ಧೆಯಿಂದ ಪಾಲ್ಗೊಂಡರು.

ತಹಶೀಲ್ದಾರ್‌ ಕೆ.ಬಿ. ರಾಮಚಂದ್ರಪ್ಪ, ದೇವಸ್ಥಾನ ಸಮಿತಿ ಕಾರ್ಯದರ್ಶಿ ಎಚ್‌.ವೆಂಕಟೇಶ್‌, ಮಾಜಿ ಶಾಸಕ ಬಿ.ಪಿ.ಹರೀಶ್‌, ಮುಖಂಡರಾದ ಎಸ್‌.ಎಂ.ವೀರೇಶ್‌, ಜಿಪಂ ಸದಸ್ಯ ಬಿ.ಎಂ.ವಾಗೀಶ್‌ಸ್ವಾಮಿ, ನಗರಸಭೆ ಸದಸ್ಯರು, ದೇವಸ್ಥಾನ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

ರಥೋತ್ಸವಕ್ಕೂ ಮುನ್ನ ಪುರಾಣ ಪ್ರಸಿದ್ದ ಹರಿಹರೇಶ್ವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ನಡೆಸಿ ನಂತರ ರಥದೊಳಗೆ ಅಲಂಕರಿಸಲಾಯಿತು.

ದೇವಸ್ಥಾನದ ಸಂಚಾಲನಾ ಸಮಿತಿ, ಕೋಟೆಕೇರಿ ಗಜಾನನ ಯುವಕ ಸಂಘದ ಸಹಯೋಗದಲ್ಲಿ ಸಮೀಪದ ಬಿರ್ಲಾ ಕಲ್ಯಾಣ ಮಂಟಪದಲ್ಲಿ, ದೇವಸ್ಥಾನ ರಸ್ತೆಯಲ್ಲಿ ನಡುವಲಪೇಟೆ ಯುವಕ ಸಂಘದಿಂದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ವಾಸವಿ ಯುವಜನ ಸಂಘ, ಕಾಳಿದಾಸ ಸ್ವಸ್ತಿಕ, ಧನ್ವಂತರಿ ಪತಂಜಲಿ ಮತ್ತಿತರೆ ಸಂಘಗಳಿಂದ ಉಪಾಹಾರ, ಮಜ್ಜಿಗೆ, ಶರಬತ್‌ ಸಹ ವಿತರಿಸಲಾಯಿತು.

ದೇವಸ್ಥಾನದಲ್ಲಿ ಬೆಳಗಿನ ಜಾವದಿಂದಲೇ ಗಣಪತಿ ಪೂಜೆ, ರುದ್ರಾಭಿಷೇಕ, ಅಲಂಕಾರ, ನವಗ್ರಹ ಪೂಜೆ, ಜಪ ಹೋಮ ಹವನಾದಿಗಳನ್ನು ನಡೆದವು. ರಥೋತ್ಸವ ನಿಮಿತ್ತ ಸೋಮವಾರ ಸಂಜೆ 6-30ಕ್ಕೆ ಕಲಾವಿದೆ ರಾಧಾ ನೇತೃತ್ವದಲ್ಲಿ ಸಂಕರ್ಷಣ ನೃತ್ಯ ಮತ್ತು ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮವಿದೆ.

3 ದಿನ ಜಾತ್ರೆ: ರಥೋತ್ಸವ ನಿಮಿತ್ತ ದೇವಸ್ಥಾನ ರಸ್ತೆಯಲ್ಲಿ ಖಾರಾ ಮಂಡಕ್ಕಿ, ಬೆಂಡು, ಬತಾಸೆ, ಮಕ್ಕಳ ಆಟಿಕೆ, ಬಳೆ ಸೇರಿದಂತೆ ಮಹಿಳೆಯರ ಅಲಂಕಾರಿಕ ವಸ್ತುಗಳ ನೂರಾರು ಅಂಗಡಿಗಳು ತಲೆ ಎತ್ತಿದ್ದು, 3 ದಿನ ಜಾತ್ರಾ ಸಡಗರ ನಡೆಯಲಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.