ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆ ಸುಗಮ
Team Udayavani, Jun 28, 2020, 2:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊನ್ನಾಳಿ:ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳಲ್ಲಿ ಶನಿವಾರ ಯಶಸ್ವಿಯಾಗಿ ನಡೆಯಿತು. ತಾಲೂಕು ಆಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಪರೀಕ್ಷೆಗೆ ಅವಶ್ಯವಾದ ಎಲ್ಲಾ ಕ್ರಮಗಳನ್ನೊಳಗೊಂಡ ನಿಯಮ ಪಾಲಿಸಿ ಸುಸೂತ್ರವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿತ್ತು.
ಎರಡು ತಾಲೂಕು ಸೇರಿ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ನೋಂದಾಯಿತ 2908 ಪರೀಕ್ಷಾರ್ಥಿಗಳಲ್ಲಿ 2828 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 80 ವಿದ್ಯಾರ್ಥಿಗಳು ಗೈರಾಗಿದ್ದರು. ನೆರೆ ರಾಜ್ಯದ 95 ವಿದ್ಯಾರ್ಥಿಗಳು ಹಾಗೂ ಕಂಟೇನ್ಮೆಂಟ್ ಪ್ರದೇಶದಿಂದ ಬಂದಿದ್ದ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾರೆ. ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಒಟ್ಟು 26 ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಎಲ್ಲಾ ಕೊಠಡಿಗಳನ್ನು ಪರೀಕ್ಷೆಗೆ ಮುನ್ನ ಹಾಗೂ ನಂತರ ಸ್ಯಾನಿಟೈಸ್ ಮಾಡಲಾಯಿತು ಎಂದು ಬಿಇಒ ಜಿ.ಇ. ರಾಜೀವ್ ಮಾಹಿತಿ ನೀಡಿದರು.