ದೌರ್ಜನ್ಯ ತಡೆಗೆ ಆಸ್ಪತ್ರೆಗಳಲ್ಲಿರಲಿ ಸಿಸಿ ಟಿವಿ: ಎಸ್ಪಿ ಗುಳೇದ್‌

Team Udayavani, May 31, 2017, 1:26 PM IST

dvg4.jpg

ದಾವಣಗೆರೆ: ವೈದ್ಯರು ಮತ್ತು ವೈದ್ಯಕೀಯ ಸಂಸ್ಥೆಗಳ ಮೇಲೆ ನಡೆಯುವ ಹಲ್ಲೆ, ದೌರ್ಜನ್ಯ ತಡೆಗೆ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌ ತಿಳಿಸಿದ್ದಾರೆ. 

ಮಂಗಳವಾರ ಜಿಲ್ಲಾ ಪೊಲೀಸ್‌ ಸಭಾಂಗಣದಲ್ಲಿ ನಡೆದ ವೈದ್ಯರು ಮತ್ತು ವೈದ್ಯಕೀಯ ಸಂಸ್ಥೆಗಳ ಮೇಲೆ ನಡೆಯುವ ಹಲ್ಲೆ, ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಸಿಸಿ ಟಿವಿ, ಕ್ಯಾಮೆರಾ ಅಳವಡಿಸುವುದರಿಂದ ಜನರು ಹಲ್ಲೆ, ದೌರ್ಜನ್ಯ ನಡೆಸಲು ಯೋಚನೆ ಮಾಡುತ್ತಾರೆ. 

ಒಂದೊಮ್ಮೆ ಅಹಿತಕರ ಘಟನೆ ನಡೆದಲ್ಲಿ ಸೂಕ್ತ ಸಾಕ್ಷಿ ಸಿಕ್ಕಂತಾಗುತ್ತದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಹಕಾರಿಯಾಗಲಿದೆ ಎಂದರು. ವೈದ್ಯರು ಮತ್ತು ವೈದ್ಯಕೀಯ ಸಂಸ್ಥೆಗಳ ಮೇಲೆ ನಡೆಯುವ ಹಲ್ಲೆ, ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಆದಷ್ಟು ಬೇಗ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಬ್‌ ಇನ್ಸ್‌ಪೆಕ್ಟರ್‌ ಹಂತದಲ್ಲಿ ಎರಡು ವಾಟ್ಸಪ್‌ ಗ್ರೂಪ್‌ ಸಿದ್ದಪಡಿಸಲಾಗುವುದು. 

ಯಾವುದೇ ರೀತಿಯ ಅಹಿತಕರ ಘಟನೆಗಳ ಬಗ್ಗೆ ಪೊಲೀಸ್‌ ಹಾಗೂ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ವೈದ್ಯರು ಮತ್ತು ವೈದ್ಯಕೀಯ ಸಂಸ್ಥೆಗಳ ಮೇಲೆ ನಡೆಯುವ ಹಲ್ಲೆ, ದೌರ್ಜನ್ಯ ನಡೆದಿದ್ದನ್ನು ರಾಜೀ ಮೂಲಕ ಅಲ್ಲಲ್ಲೇ ಬಗೆಹರಿಸಿಕೊಳ್ಳುವುದು ಸಹ ಕಂಡು ಬರುತ್ತದೆ.

ಆಸ್ಪತ್ರೆ ಸಿಬ್ಬಂದಿ, ವೈದ್ಯರು ದೂರು ನೀಡಿದ್ದಲ್ಲಿ, ತಪ್ಪು ಮಾಡಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಂಡಲ್ಲಿ ಮುಂದೆ ಹಲ್ಲೆ, ದೌರ್ಜನ್ಯಕ್ಕೆ ಮುಂದಾಗುವುದಿಲ್ಲ ಎಂದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ತ್ರಿಪುಲಾಂಬ ಮಾತನಾಡಿ, ಈಚೆಗೆ ಜನರಲ್ಲಿ ತಾಳ್ಮೆಯೇ ಇಲ್ಲದಂತಾಗಿದೆ.

ಸ್ವಲ್ಪ ತಡವಾದರೂ ವೈದ್ಯರು, ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ  ಇಳಿಯುತ್ತಾರೆ. ಒಮ್ಮೊಮ್ಮೆ ಹಲ್ಲೆ, ದೌರ್ಜನ್ಯಕ್ಕೂ ಮುಂದಾಗುತ್ತಾರೆ ಎಂದರು. ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ| ಎಚ್‌.ಡಿ. ನೀಲಾಂಬಿಕೆ ಮಾತನಾಡಿ, ಜನರು ಅನೇಕ ಸಂದರ್ಭದಲ್ಲಿ ನಿಯಮ ಪಾಲನೆ ಮಾಡುವುದೇ ಇಲ್ಲ.

ಜಿಲ್ಲಾ ಆಸ್ಪತ್ರೆಯಲ್ಲಿ ಹೆಚ್ಚಿನ ಪೊಲೀಸ್‌ ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿದರು. ಎಸ್‌.ಎಸ್‌. ಆಸ್ಪತ್ರೆಯ ಡಾ| ಎನ್‌.ಕೆ. ಕಾಳಪ್ಪನವರ್‌, ಡಾ| ಶ್ರೀಶೈಲ ಎಂ. ಬ್ಯಾಡಗಿ, ಡಾ| ಚಂದ್ರಶೇಖರ್‌ ಇತರರು ಇದ್ದರು. ಗ್ರಾಮಾಂತರ ಡಿಎಸ್ಪಿ ಬಿ.ಎಸ್‌. ನೇಮಗೌಡ ನಿರೂಪಿಸಿದರು. 

ಟಾಪ್ ನ್ಯೂಸ್

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.