ಅನ್ಯಾಯ ಖಂಡಿಸಿ ಡಿಸಿ ಅಣುಕು ಶವಯಾತ್ರೆ

Team Udayavani, Oct 5, 2018, 3:26 PM IST

dvg-1.jpg

ದಾವಣಗೆರೆ: ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಬಗರ್‌ ಹುಕುಂ ಸಾಗುವಳಿ ಭೂಮಿಯನ್ನು ಗಣಿಗಾರಿಕೆಗೆ ನೀಡಿರುವುದನ್ನು ವಿರೋಧಿಸಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಆಂಬೇಡ್ಕರ್‌ ವಾದಿ)
ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಹರಪನಹಳ್ಳಿ ಹಿಂದಿನ ತಹಶೀಲ್ದಾರ್‌ ಅಣುಕು ಶವಯಾತ್ರೆ, ಅಂತ್ಯಕ್ರಿಯೆ ನಡೆಸಿ, ಪ್ರತಿಭಟಿಸಿದ್ದಾರೆ.

ಪಿ.ಬಿ. ರಸ್ತೆಯ ಪಂಚಮಹಾ ದೇವಸ್ಥಾನದ ಬಳಿಯಿಂದ ಜಿಲ್ಲಾಧಿಕಾರಿ ಹಾಗೂ ಈ ಹಿಂದಿನ ಹರಪನಹಳ್ಳಿ ತಹಶೀಲ್ದಾರ್‌ ಅವರ ಅಣುಕು ಶವಯಾತ್ರೆ ಆರಂಭಿಸಿದ ದಸಂಸ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಬಳಿ ಮುಂಭಾಗದ ಅಣುಕು ಶವವಿಟ್ಟು ಪ್ರತಿಭಟಿಸಿದರು.

ಉಚ್ಚಂಗಿದುರ್ಗ ಗ್ರಾಮದ ರಿ.ಸ.ನಂ. 441/2ರ 19.42 ಎಕರೆ ಸರ್ಕಾರಿ ಭೂಮಿಯಲ್ಲಿ ಅದೇ ಗ್ರಾಮದ ರೈತ ದುಗ್ಗತ್ತಿ ಉಚ್ಚೆಂಗಪ್ಪ ಹಲವಾರು ವರ್ಷಗಳಿಂದ ಬಗರ್‌ ಹುಕುಂ ಸಾಗುವಳಿ ಮಾಡಿಕೊಂಡಿದ್ದು, ಭೂ ಮಾಲಿಕತ್ವಕ್ಕಾಗಿ ಅರ್ಜಿ ಕೂಡ ಸಲ್ಲಿಸಿದ್ದರು. ಈ ಮಧ್ಯೆ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ವೇಳೆ ಸಿಡಿಮದ್ದು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 2000ನೇ ಇಸವಿ ಜ.18ರಲ್ಲಿ ಜಿಲ್ಲಾ ಸೇಷನ್‌ ಜಡ್ಜ್ ನ್ಯಾಯಾಲಯವು ಉಚ್ಚೆಂಗಪ್ಪಗೆ ಕಾರಾಗೃಹ ಶಿಕ್ಷೆ ವಿಧಿಸಿತ್ತು. ಶಿಕ್ಷೆ ಅನುಭವಿಸಿ ಬಂದ ರೈತ ಉಚ್ಚೆಂಗಪ್ಪನಿಗೆ ಬಗರ್‌ ಹುಕುಂ ಸಾಗುವಳಿ ಮಾಡುವಂತಿಲ್ಲ ಎಂಬುದಾಗಿ ಬಗರ್‌ಹುಕುಂ ಸಕ್ರಮೀಕರಣ ಸಾಗುವಳಿ ಸಮಿತಿ ಆತ ಸಲ್ಲಿಸಿದ್ದ ಫಾರಂ ನಂ.53ರ ಅರ್ಜಿ ವಜಾಗೊಳಿಸಿದೆ.

ಆ ನಂತರ ಜಿಲ್ಲಾಧಿಕಾರಿ ಹಾಗೂ ಹಿಂದಿನ ಹರಪನಹಳ್ಳಿ ತಹಶೀಲ್ದಾರ್‌ ಗುರುಬಸವರಾಜ್‌ ಅವರಿಗೆ ಸಂಕಷ್ಟದಲ್ಲಿದ್ದ ಉಚ್ಚಂಗಪ್ಪಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಇದುವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರು ಆಕ್ರೋಶ ವ್ಯಕ್ತಪಡಿಸಿದರು. 

ಉಚ್ಚೆಂಗಪ್ಪನ ಸ್ವಾಧಿಧೀನದಲ್ಲಿದ್ದ 7.20 ಎಕರೆ ಭೂಮಿಯನ್ನು ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಎಲ್ಲಾ ಸಾಕ್ಷಿ ಆಧಾರ ನೀಡಿದರೂ ಸಹ ಅಧಿಕಾರಿಗಳು ಮೌನ ವಹಿಸಿದ್ದಾರೆ. ಹರಪನಹಳ್ಳಿ ಹಿಂದಿನ ತಹಶೀಲ್ದಾರ್‌ ಗುರುಬಸವರಾಜ್‌ ಹಾಗೂ ಜಿಲ್ಲಾಧಿಕಾರಿ ನ್ಯಾಯಾಲಯದ ತೀರ್ಪು ಉಲ್ಲಂಘಿಸಿ ಅಕ್ರಮ ಗಣಿಗಾರಿಕೆಗೆ ಅವಕಾಶ ಕಲ್ಪಿಸಿದ್ದ ಆದೇಶ ಹಿಂಪಡೆದು, ಉಚ್ಚೆಂಗಪ್ಪಗೆ ಪರ್ಯಾಯ ಭೂ ಮಂಜೂರು ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಆಂಬೇಡ್ಕರ್‌ ವಾದಿ)ಹಾಗೂ ಸಾಮಾಜಿಕ ಸಂಘರ್ಷ ಸಮಿತಿ ನೇತೃತ್ವದಲ್ಲಿ 340 ದಿನಗಳ ಕಾಲ ಪ್ರತಿಭಟಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಅ. 10ರಂದು ಜಿಲ್ಲಾಧಿಕಾರಿ ಮನೆ ಮುಂದೆ ಪ್ರತಿಭಟಿಸಲಾಗುವುದು ಎಂದು ಪ್ರತಿಭಟನಾಕಾರರು ಗಡುವು ನೀಡಿ, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪಗೆ ಅವರಿಗೆ ಮನವಿ ಸಲ್ಲಿಸಿದರು.

ಸಾಮಾಜಿಕ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಪ್ರೊ| ಸಿ.ಕೆ. ಮಹೇಶ್ವರಯ್ಯ, ದಸಂಸ ರಾಜ್ಯ ಸಂಚಾಲಕ ಎಚ್‌.ಮಲ್ಲೇಶ್‌, ಜಿಲ್ಲಾ ಸಂಚಾಲಕ ಡಿ. ಹನುಮಂತಪ್ಪ, ಬಿ.ಎನ್‌. ನಾಗೇಶ್‌, ಪಿ. ತಿಪ್ಪೇರುದ್ರಪ್ಪ, ಎಚ್‌.ಸಿ. ಮಲ್ಲಪ್ಪ, ಜಿ.ಎಸ್‌. ಲೋಕೇಶ್‌, ಅಂಜಿನಪ್ಪ ನೀಲಗುಂದ, ಎಂ. ಚಂದ್ರಪ್ಪ, ಎಚ್‌. ನಾಗರಾಜ್‌, ನಾರಾಯಣಪ್ಪ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.