ಓದಿನಲ್ಲಿ ಆಸಕ್ತಿ, ಬದ್ಧತೆ ತೋರಿಸಿ

Team Udayavani, Jan 19, 2019, 5:56 AM IST

dvg-2.jpg

ದಾವಣಗೆರೆ: ವಿದ್ಯಾರ್ಥಿಗಳು ತರಗತಿಗಳಲ್ಲಿ ಪಾಠವನ್ನು ಹೆಚ್ಚು ಆಸಕ್ತಿಯಿಂದ ಕೇಳುವ ಮತ್ತು ಪುನರ್‌ಮನನ ಮಾಡುವ ಕೆಲಸ ಮಾಡಿದರೆ ಏಕಾಗ್ರತೆ, ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂದು ಚಿತ್ರದುರ್ಗ ಬೃಹನ್ಮಠದ ಶ್ರೀ ಡಾ| ಶಿವಮೂರ್ತಿ ಮುರುಘಾಶರಣರು ಹೇಳಿದರು.

ಜಯದೇವ ವೃತ್ತದ ಶಿವಯೋಗಾಶ್ರಮದಲ್ಲಿ ಶುಕ್ರವಾರ ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿ 62ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿದರು.

ವಿದ್ಯಾರ್ಥಿಗಳು ತರಗತಿಗಳಲ್ಲಿ ತಮ್ಮ ಗಮನ ಬೇರೆಡೆ ಹೋಗದಂತೆ ನೋಡಿಕೊಳ್ಳಬೇಕು. ಮೈಯೆಲ್ಲಾ ಕಿವಿಯಾಗಿ ಕೇಳಿಸಿಕೊಳ್ಳಬೇಕು. ಓದುವ ಜೊತೆಗೆ ಬರವಣಿಗೆಯನ್ನು ರೂಢಿಸಿಕೊಳ್ಳಬೇಕು. ಆಗ ಶಿಕ್ಷಕರು ಬೋಧಿಸುವ ಪಾಠ ಚೆನ್ನಾಗಿ ಅರ್ಥ ಆಗುತ್ತದೆ. ಓದಿನಲ್ಲಿ ಹೆಚ್ಚಿನ ಬದ್ಧತೆ, ಆಸಕ್ತಿ ತೋರಿದರೆ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ಜೀವನದಲ್ಲಿ ಮರೆವು ಏಕೆ ಕಾಡುತ್ತದೆ? ಅದರ ನಿವಾರಣೆಗೆ ಯಾವುದಾದರೂ ಔಷಧಿ ಇದೆಯಾ? ಎಂದು ಪ್ರಶ್ನಿಸಿದ 9ನೇ ತರಗತಿ ವಿದ್ಯಾರ್ಥಿ ಗಣೇಶ್‌ಗೆ ಉತ್ತರಿಸಿದ ಶ್ರೀಗಳು, ಮರೆವು ನಿವಾರಣೆಗೆ ಯಾವುದೇ ಔಷಧಿ ಇಲ್ಲ. ಅದಕ್ಕಾಗಿ ನಿತ್ಯ ಧ್ಯಾನ, ಪ್ರಾರ್ಥನೆ, ಪಠ್ಯದ ವಿಷಯಗಳಲ್ಲಿ ಆಸಕ್ತಿ ವಹಿಸಬೇಕು ಎಂದರು.

ನಂತರ ಶ್ರೀಗಳು ಮಾತನಾಡಿ, ಪರೀಕ್ಷೆ ದೂರ ಇದ್ದಾಗ ಚಿನ್ನಾಟ, ಹತ್ತಿರ ಬಂದಾಗ ಸಂಕಟಪಟ್ಟರೆ ಯಾವುದೇ ಪ್ರಯೋಜನ ಆಗುವುದಿಲ್ಲ. ಅಂದಿನ ಪಾಠವನ್ನು ಅಂದೇ ಓದಿ. ಪಠ್ಯಪೂರಕ ಸಮಸ್ಯೆ, ಗೊಂದಲ ಇದ್ದರೆ ಶಿಕ್ಷಕರ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಿ ಎಂದು ಸಲಹೆ ನೀಡಿದರು.

ನಂತರ ಶ್ರೀಗಳು, ನಿತ್ಯ ನಿಮ್ಮ ಬದುಕಿನಲ್ಲಿ ಕಾಡುವ ಒಂದು ಪ್ರಶ್ನೆ ಏನು? ಎಂದು ಕೇಳಿದ್ದಕ್ಕೆ ವಿದ್ಯಾರ್ಥಿನಿ ಐಶ್ವರ್ಯ ನಿದ್ದೆ ಎಂದು ಉತ್ತರಿಸಿದರು. ನಿಮಗೆ ಯಾವ್ಯಾವ ವಿಷಯ ಓದುವಾಗ ನಿದ್ದೆ ಹೆಚ್ಚು ಬರುತ್ತದೆ ಎಂದು ಪ್ರಶ್ನಿಸಿದ್ದಕ್ಕೆ ಒಬ್ಬ ವಿದ್ಯಾರ್ಥಿ ಹಿಂದಿ ಎಂದರೆ ಮತ್ತೂಬ್ಬ ವಿಜ್ಞಾನ, ಇನ್ನೋರ್ವ ಸಮಾಜಶಾಸ್ತ್ರ ಎಂದುತ್ತರಿಸಿದರು.

ಆಗ ಶ್ರೀಗಳು ಮಾತನಾಡಿ, ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಪ್ರಮಾಣಕ್ಕನುಗುಣವಾಗಿ ಮಾಡಿ. ಬೆಳಗ್ಗೆಯಿಂದ ಪಾಠ ಕೇಳಿ ಆಯಾಸಗೊಂಡಿರುವಾಗ ಮಧ್ಯಾಹ್ನ ಊಟದ ನಂತರ ನಿದ್ದೆ ಬಂದರೆ ಗೋಡಂಬಿ, ದ್ರಾಕ್ಷಿ, (ಡ್ರೈಪ್ರೂಟ್ಸ್‌) ಸೇವಿಸಿ ಎಂದರಲ್ಲದೇ, ಹಿಂದಿ ವಿಷಯ ಅರ್ಥ ಆಗದಿದ್ದರೆ ಮನೇಲಿ ಹಿಂದಿ ನ್ಯೂಸ್‌ ಚಾನೆಲ್‌ ವೀಕ್ಷಿಸಿ, ಭಾಷೆ ಬಲ್ಲ ಸ್ನೇಹಿತರೊಂದಿಗೆ ಚರ್ಚಿಸಿ. ಏಕೆಂದರೆ, ಹಿಂದಿ ನಮ್ಮ ರಾಷ್ಟ್ರ ಭಾಷೆಯಾಗಿದೆ. ಈ ಭಾಷೆ ಕಲಿತರೆ ಸಾಕಷ್ಟು ಸಂಘ, ಸಂಸ್ಥೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ದೊರೆಯುತ್ತವೆ ಎಂದರು.

ಬೋಧಕ ವರ್ಗವದರು ಕೂಡ ಮಕ್ಕಳು ನಿದ್ರೆಗೆ ಜಾರದಂತೆ ಪರಿಣಾಮಕಾರಿಯಾಗಿ ಬೋಧನೆ ಮಾಡಬೇಕು ಎಂದು ಶ್ರೀಗಳು ಸಲಹೆ ನೀಡಿದರು.

ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ಏನು ಮಾಡಬೇಕು? ಎಂದು ಶ್ರೀಗಳು ಕೇಳಿದ ಪ್ರಶ್ನೆಗೆ ಮಹಿಳಾ ಸಮಾಜ ಶಾಲೆಯ ವಿದ್ಯಾರ್ಥಿ ರಮೇಶ್‌ ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಬೇಕು ಎಂದರು. ವಿದ್ಯಾರ್ಥಿನಿ ಅನುಷಾ ಉತ್ತರಿಸುತ್ತ, ಶಾಲೆಯಲ್ಲಿ ಶಿಕ್ಷಕರು ಪಠ್ಯದ ಜೊತೆಗೆ ನಮ್ಮ ಭವಿಷ್ಯಕ್ಕಾಗಿ ವಿಶೇಷ ತರಗತಿಗಳನ್ನು ಮಾಡುತ್ತಾ ಹೆಚ್ಚಿನ ಜವಾಬ್ದಾರಿ ನಿರ್ವಹಿಸುತ್ತಾರೆ. ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ನಿತ್ಯ ಎಷ್ಟು ಹೊತ್ತು ಓದು ಮತ್ತು ಆಟವಾಡುತ್ತೀರಿ? ಎಂದು ಶ್ರೀಗಳು ಕೇಳಿದಾಗ, ವಿದ್ಯಾರ್ಥಿಯೊಬ್ಬ ಸಂಜೆ ಹೊತ್ತು ಕತ್ತಲಾಗುವ ತನಕ ಕ್ರಿಕೆಟ್ ಆಟವಾಡುತ್ತೇವೆ ಎಂದು ಉತ್ತರಿಸಿದ. ಶ್ರೀಗಳು ನಂತರ ಮನೇಲಿ ಎಷ್ಟು ಹೊತ್ತು ಟಿವಿ ನೋಡುತ್ತೀರಿ ಎಂದಿದ್ದಕ್ಕೆ ಸುಮ್ಮನಾದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ನಿದ್ದೆ ಬರುವ ತನಕ ಟಿವಿ, ಮೊಬೈಲ್‌ ಗೇಮ್‌ ಆಡುವುದನ್ನು ಬಿಟ್ಟು ಆಸಕ್ತಿಯಿಂದ ಓದಿ ಎಂದರು.

ನಂತರ ಸೆಂಟ್ ಪಾಲ್ಸ್‌ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ಮಾತನಾಡಿ, ಪ್ರೀತಿ, ಆಸಕ್ತಿಯಿಂದ ಓದಿದರೆ ಯಾವುದೇ ವಿಷಯ ಕಷ್ಟ ಸಾಧ್ಯ ಅಲ್ಲ. ಎಲ್ಲಾ ವಿಷಯಗಳು ನೆನಪಿನಲ್ಲಿ ಉಳಿಯುತ್ತವೆ. ಮನೆಯಲ್ಲಿ ಗಂಡು ಮಕ್ಕಳಿಗೆ ಅಪ್ಪ-ಅಮ್ಮ ಮೊಬೈಲ್‌, ಬೈಕ್‌ ಎಲ್ಲಾ ಕೊಡಿಸ್ತಾರೆ. ನಮಗೆ ಏನೂ ಕೊಡಿಸಲ್ಲ. ಹಾಗಾಗಿ ಗಂಡು ಮಕ್ಕಳು ಹೆಚ್ಚು ಓದಲ್ಲ. ನಾವು ಮದುವೆ ಆದ ಬಳಿಕ ಗಂಡನ ಮನೆಗೆ ಹೋಗುವವರು. ಜೊತೆಗೆ ಎಲ್ಲೂ ಹೊರಗಡೆ ಹೋಗದೇ ಮನೇಲಿ ಕೂತು ಚೆನ್ನಾಗಿ ವಿದ್ಯಾಭ್ಯಾಸ ಮಾಡುತ್ತೇವೆ. ಹಾಗಾಗಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ಸ್ಯಾಧ್ಯವಾಗುತ್ತದೆ ಎಂದು ಎಂದರು. ಇದಕ್ಕೆ ಶ್ರೀಗಳು ನಗುತ್ತಲೇ ನೀವೂ ಸಮಾನ ಹಕ್ಕು ಕೇಳಿ ಮನೇಲಿ ಎಂದು ಹಾಸ್ಯ ಚಟಾಕಿ ಸಿಡಿಸಿದರು.

ನಂತರ ಶಿಕ್ಷಕರೊಬ್ಬರು ಮಾತನಾಡಿ, ನಿತ್ಯ ವಿದ್ಯಾರ್ಥಿಗಳು ಬೆಳಿಗ್ಗೆ 5ಗಂಟೆಗೆ ಎದ್ದು ಓದಬೇಕು. ರಾತ್ರಿ 11.30ರವರೆಗೆ ಓದು, ಬರಹ ರೂಢಿಸಿಕೊಳ್ಳಬೇಕು. ಪ್ರತಿದಿನ 6 ಗಂಟೆಗಳ ಕಾಲ ಟಿವಿ, ಮೊಬೈನಿಂದ ದೂರವಿದ್ದು, ಶ್ರದ್ಧೆಯಿಂದ ಓದಬೇಕು. ಆಗ ಮಾತ್ರ ಜೀವನದ ಗುರಿ ಸಾಧಿಸಲು ಸಾಧ್ಯ ಎಂದು ಸಲಹೆ ನೀಡಿದರು.

ದೊಡ್ಡಪೇಟೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ಸೇರಿದಂತೆ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.