ಭಗತ್‌-ವಿವೇಕರ ಪಾಠ ಕೈಬಿಟ್ಟಿದ್ದು ಸರಿಯಲ್ಲ

Team Udayavani, May 20, 2022, 1:13 PM IST

bhagath

ದಾವಣಗೆರೆ: ಶಾಲಾ ಪಠ್ಯಕ್ರಮದಿಂದ ಭಗತ್‌ ಸಿಂಗ್‌ ಕುರಿತಾದ ಪಾಠ, ಮಾನವತಾವಾದಿ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಕೈಬಿಟ್ಟಿರುವುದನ್ನು ಖಂಡಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಜೇಷನ್‌ (ಎಐಡಿಎಸ್‌ಒ) ಪದಾಧಿಕಾರಿಗಳು ನಗರದ ರೈಲ್ವೆ ನಿಲ್ದಾಣ ಸಮೀಪದ ಭಗತ್‌ ಸಿಂಗ್‌ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ ಮಾತನಾಡಿ, 10ನೇ ತರಗತಿ ಪಠ್ಯಪುಸ್ತಕದಿಂದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್‌ ಕ್ರಾಂತಿಕಾರಿ ಭಗತ್‌ ಸಿಂಗ್‌ ಹಾಗೂ ವಿವೇಕಾನಂದರ ಮಾನವತಾವಾದಿ ಚಿಂತನೆಗಳನ್ನು ಕೈಬಿಟ್ಟಿರುವ ಸರ್ಕಾರದ ಕೃತ್ಯವು ಅತ್ಯಂತ ನಿರ್ಲಜ್ಜತನದಿಂದ ಕೂಡಿದೆ. ಬಿಜೆಪಿ, ಸಂಘ-ಪರಿವಾರದ ಸರ್ಕಾರಕ್ಕೆ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರರು ಮತ್ತು ಕ್ರಾಂತಿಕಾರಿಗಳ ಬಗ್ಗೆ ಕಿಂಚಿತ್ತೂ ಗೌರವವೇ ಇಲ್ಲ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರಾ ಅಬೂಬಕರ್‌ ಅವರ ಯುದ್ಧ, ಎ.ಎನ್. ಮೂರ್ತಿರಾಯರ ವ್ಯಾಘ್ರಗೀತೆ ಮುಂತಾದ ಮೌಲ್ಯಯುತ ಪಾಠಗಳನ್ನು ಕೂಡ ಕೈಬಿಡಲಾಗಿದೆ. ಸಮಾಜದಲ್ಲಿ ಸಾಂಸ್ಕೃತಿಕ ಅಧಃಪತನ ವ್ಯಾಪಕವಾಗಿರುವ ಹೊತ್ತಿನಲ್ಲಿ ಹೆಚ್ಚು ಅವಶ್ಯವಾಗಿರುವ ಚಿಂತನೆಗಳನ್ನು ಕೈಬಿಟ್ಟಿರುವುದು ನಾಗರಿಕತೆಯ ಪ್ರಗತಿಗೆ ವಿರುದ್ಧವಾದುದು ಎಂದು ದೂರಿದರು.

ಎಲ್ಲೆಡೆ ಅಸಮಾನತೆ, ಶೋಷಣೆ ತಾಂಡವವಾಡುತ್ತಿರುವಾಗ ವಿದ್ಯಾರ್ಥಿಗಳಿಗೆ ಭಗತ್‌ ಸಿಂಗ್‌ ಅವರ ವಿಚಾರ ದೊರಕಿದರೆ ಎಲ್ಲೆಡೆ ಹೋರಾಟದ ಕಹಳೆ ಮೊಳಗುವುದೆಂಬ ಭಯದಿಂದ ಸರ್ಕಾರ ವಿದ್ಯಾರ್ಥಿಗಳಿಂದ ಭಗತ್‌ ಸಿಂಗ್‌ ಅವರನ್ನು ದೂರ ಮಾಡುವ ಪ್ರಯತ್ನ ಮಾಡುತ್ತಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೆ ಕೋಮು ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದ ಹೆಗ್ಡೆವಾರ್‌ ಭಾಷಣವನ್ನು ಪಠ್ಯಕ್ಕೆ ಸೇರಿಸಲಾಗಿದೆ. ಈ ರೀತಿಯ ಸಂಕುಚಿತ ವಿಚಾರಗಳು ಸಮಾಜದ ಸ್ವಾಸ್ಥವನ್ನು ಹಾಳುಗೆಡವುತ್ತವೆ. ಕೂಡಲೇ ಕೈಬಿಟ್ಟಿರುವ ಭಗತ್‌ ಸಿಂಗ್‌ ಹಾಗೂ ವಿವೇಕಾನಂದರ ವಿಚಾರಗಳನ್ನು ಪಠ್ಯಕ್ಕೆ ಮರು ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಬಿ. ಕಾವ್ಯ, ಜಿ. ಪುಷ್ಪಾ, ಟಿ.ಎಸ್. ಸುಮನ್‌, ಅಭಿಷೇಕ್‌, ಧನುಷಾ, ಅನುಪ್ರಜ್ಞಾ ಇತರರು ಇದ್ದರು.

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.