ಜಗಳೂರು ಪಟ್ಟಣ ಪಂಚಾಯಿತಿಗೆ ನೂತನ ಕಟ್ಟಡ

ಮೂರು ಕೋಟಿ ರೂ. ವೆಚ್ಚದಲ್ಲಿ ಜಿ ಪ್ಲಸ್‌ 1 ಮಾದರಿ ಕಟ್ಟಡ

Team Udayavani, Mar 13, 2020, 11:15 AM IST

13-March-3

ಜಗಳೂರು: ಪಟ್ಟಣ ಪಂಚಾಯಿತಿ ನೂತನ ಕಟ್ಟಡ 3 ಕೋಟಿ ರೂ. ವೆಚ್ಚದಲ್ಲಿ ತಲೆ ಎತ್ತುತ್ತಿದೆ. ಪಟ್ಟಣದ ಕೃಷ್ಣ ಬಡಾವಣೆಯಲ್ಲಿ ಪಟ್ಟಣ ಎಸ್‌.ಎಫ್‌.ಸಿ ವಿಶೇಷ ಅನುದಾನದಲ್ಲಿ ಪಟ್ಟಣ ಪಂಚಾಯಿತಿ ಕಟ್ಟಡ ಕಾಮಗಾರಿ ಪ್ರಾರಂಭವಾಗಿದೆ.

ಜಗಳೂರು 1990ರವರೆಗೆ ಪುರಸಭೆ, ನಂತರ 96ರ ವರೆಗೆ ಪರಿವರ್ತಿತ ಮಂಡಲ ಪಂಚಾಯಿತಿಯಾಯಿತು. 1996ರಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ್ದು, ಮೊದಲಿನಿಂದಲೂ ಬ್ರಿಟಿಷರ ಕಾಲದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು.

ನೂತನ ವಿಶಾಲ ಕಟ್ಟಡ ನಿರ್ಮಿಸುವ ಸಲುವಾಗಿ ಎಚ್‌.ಪಿ. ರಾಜೇಶ್‌ ಶಾಸಕರಾಗಿದ್ದ ಅವಧಿಯಲ್ಲಿ ಕಟ್ಟಡಕ್ಕೆ ಅನುದಾನ ಮುಂಜೂರು ಮಾಡಿಸಿದ್ದರು. ಈಗಿನ ಶಾಸಕ ಎಸ್‌.ವಿ. ರಾಮಚಂದ್ರ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದರು.

ಕಟ್ಟಡವು ಜಿ ಪ್ಲಸ್‌ 1 ಮಾದರಿಯಲ್ಲಿ ನಿರ್ಮಾಣವಾಗುತ್ತಿದ್ದು, ನೆಲ ಅಂತಸ್ತಿನಲ್ಲಿ ಮುಖ್ಯಾಧಿಕಾರಿ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಪುರಸಭೆ ಸಿಬ್ಬಂದಿಗೆ ಕೊಠಡಿಗಳ ವ್ಯವಸ್ಥೆ ಇದ್ದು, ಮೊದಲ ಅಂತಸ್ತಿನಲ್ಲಿ ಸಭಾಂಗಣ ನಿರ್ಮಾಣವಾಗಲಿದೆ.

ಹಾಲಿ ಇರುವ ಕಟ್ಟಡವು ಪಟ್ಟಣದ ಜನತೆಗೆ ಸಮೀಪವಾಗುತ್ತದೆ. ಕೃಷ್ಣ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡವು ದೂರವಾಗುತ್ತದೆ ಎಂದು ಹಿರಿಯ ನಾಗರಿಕರು ಶಾಸಕ ಎಸ್‌.ವಿ. ರಾಮಚಂದ್ರ ಹತ್ತಿರ ಮನವಿ ಮಾಡಿದ್ದರು ಸರಕಾರದ ಅನುದಾನ ವಾಪಸ್‌ ಹೋಗುವುದು ಬೇಡ. ಬೃಹತ್‌ ಕಟ್ಟಡ ನಿರ್ಮಾಣವಾಗುತ್ತಿದ್ದು ಪಟ್ಟಣದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹಿರಿಯ ನಾಗರಿಕ ಸಂಘದ ಪದಾಧಿಕಾರಿಗಳ ಮನವೊಲಿಸಿದ್ದರು.

ಬೃಹತ್‌ ಕಟ್ಟಡ ನಿರ್ಮಿಸಲಾಗುತ್ತಿದ್ದು, ಜಗಳೂರು ಪುರಸಭೆಯಾಗಿ ಮೇಲ್ದರ್ಜೆಗೇರಿದ ನಂತರವೂ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿದೆ.
ರಾಜು ಬಣಕಾರ್‌,
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಟಾಪ್ ನ್ಯೂಸ್

ಪಂಚ ಚುನಾವಣೆಗೆ ಕಣ ಬಿರುಸು

ಪಂಚ ಚುನಾವಣೆಗೆ ಕಣ ಬಿರುಸು

2021: ಅತೀ ಉಷ್ಣದ ವರ್ಷ

2021: ಅತೀ ಉಷ್ಣದ ವರ್ಷ

ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

ಪ್ರಜಾತಂತ್ರದ ಪಂಚಾಂಗದಲ್ಲಡಗಿದೆ ದೇಶದ ಭವಿಷ್ಯ

ಪ್ರಜಾತಂತ್ರದ ಪಂಚಾಂಗದಲ್ಲಡಗಿದೆ ದೇಶದ ಭವಿಷ್ಯ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere news

ಜಯದೇವ ಆಸ್ಪತ್ರೆ ಸ್ಥಾಪನೆ ಪ್ರಕ್ರಿಯೆ ಶುರು

davanagere news

ವಸತಿ ಸೌಲಭ್ಯ: ಮರು ಭೂಸ್ವಾಧೀನ ಪ್ರಸ್ತಾವನೆ ಸಲ್ಲಿಸಿ

davanagere news

ವೇಮನ ಜಯಂತಿ ಸರಳ ಆಚರಣೆ

honnali news

ಗ್ರಾಮೀಣ ಪ್ರದೇಶದ ಪ್ರತಿ ಮನೆಗೆ ನಲ್ಲಿಸಂಪರ್ಕ: ರೇಣು

davanagere news

979 ಸೋಂಕಿತರಿಗೆ ಹೋಂ ಐಸೋಲೇಷನ್‌

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ವಾರಾಂತ್ಯ ಕರ್ಫ್ಯೂ: ನಿಯಮ ಉಲ್ಲಂಘನೆ ಚಳವಳಿ: ಕೆನರಾ ಉದ್ಯಮಿಗಳ ಒಕ್ಕೂಟ ಎಚ್ಚರಿಕೆ

ವಾರಾಂತ್ಯ ಕರ್ಫ್ಯೂ: ನಿಯಮ ಉಲ್ಲಂಘನೆ ಚಳವಳಿ: ಕೆನರಾ ಉದ್ಯಮಿಗಳ ಒಕ್ಕೂಟ ಎಚ್ಚರಿಕೆ

ಪಂಚ ಚುನಾವಣೆಗೆ ಕಣ ಬಿರುಸು

ಪಂಚ ಚುನಾವಣೆಗೆ ಕಣ ಬಿರುಸು

2021: ಅತೀ ಉಷ್ಣದ ವರ್ಷ

2021: ಅತೀ ಉಷ್ಣದ ವರ್ಷ

ಸಯ್ಯದ್‌ ಮೋದಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌: ನಾಕೌಟ್‌ ಹಂತಕ್ಕೆ ಸಿಂಧು, ಪ್ರಣಯ್‌

ಸಯ್ಯದ್‌ ಮೋದಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌: ನಾಕೌಟ್‌ ಹಂತಕ್ಕೆ ಸಿಂಧು, ಪ್ರಣಯ್‌

ಪೋಷಣ್‌ ಅಭಿಯಾನ್‌ ಸಿಬಂದಿಗೆ ಆರ್ಥಿಕ ಅಪೌಷ್ಟಿಕತೆ!

ಪೋಷಣ್‌ ಅಭಿಯಾನ್‌ ಸಿಬಂದಿಗೆ ಆರ್ಥಿಕ ಅಪೌಷ್ಟಿಕತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.