27 ಜನರ ವರದಿ ನೆಗೆಟಿವ್
Team Udayavani, Jun 8, 2020, 1:45 PM IST
ಜಗಳೂರು: ಪಟ್ಟಣದಲ್ಲಿ ಕ್ವಾರಂಟೈನ್‌ನಲ್ಲಿದ್ದ 29 ಜನರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಅದರಲ್ಲಿ 27 ಜನರ ವರದಿ ನೆಗೆಟಿವ್ ಬಂದಿವೆ. ಇನ್ನೆರೆಡು ಸ್ಯಾಂಪಲ್ ಗಳ ವರದಿ ಬರಬೇಕಿದೆ.
ಹಬ್ಬಕ್ಕೆಂದು ಕೊಟ್ಟೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಜಗಳೂರು ಪಟ್ಟಣಕ್ಕೆ ಬಂದಿದ್ದ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬಸ್ಥರನ್ನು, ಸಂಬಂಧಿಕರನ್ನು ಕ್ವಾರಂಟೈನ್ ಮಾಡಿ ಗಂಟಲು ದ್ರವ ಪರೀಕ್ಷೆ ಮಾಡಿಸಲಾಗಿತ್ತು ಎಂದು ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ತಿಳಿಸಿದ್ದಾರೆ.