23-24ರಂದು ಸ್ವಾತಂತ್ರ್ಯ ವೀರರಿಗೆ ಗೌರವ-ಉದ್ಯೋಗ ಮೇಳ

Team Udayavani, Apr 21, 2022, 4:55 PM IST

freedom

ಹರಿಹರ: ನಗರ ಹೊರವಲಯದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಆಜಾದಿ ಅಮೃತ ಮಹೋತ್ಸವದ ನಿಮಿತ್ತ ಪಂಚಮಸಾಲಿ ವೀರ ಸೇನಾನಿಗಳಿಗೆ ಗೌರವ ಮತ್ತು ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶ್ರೀ ವಚನಾನಂದ ಸ್ವಾಮೀಜಿ ಹೇಳಿದರು.

ಗುರುಪೀಠದ ಆವರಣದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಶ್ರೀಗಳು, ಏ. 23ರಂದು ಬೆಳಗ್ಗೆ 11ಕ್ಕೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಂಚಮಸಾಲಿ ಸಮಾಜದವರ ಪಾತ್ರ ಮತ್ತು ವೀರ ಸೇನಾನಿಗಳಿಗೆ ಗೌರವ ನೀಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಭಾಗವಹಿಸುವರು.

ವೀರ ಸೇನಾನಿಗಳಾದ ಕಿತ್ತೂರು ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಮೈಲಾರ ಮಹಾದೇಪ್ಪ, ಕೆಳದಿ ಚೆನ್ನಪ್ಪ, ಕಂಬಳಿ ಸಿದ್ದಪ್ಪ, ಹರತಾಳ್‌ ರುದ್ರಗೌಡ್ರು, ಹದರಗುಂಚಿ ಶಂಕರ ಗೌಡ್ರು ಅವರ ಸಾಧನೆ ಬಗ್ಗೆ ಖ್ಯಾತ ಗೀತೆ ರಚನಕಾರ ಕೆ. ಕಲ್ಯಾಣ್‌ ರಚಿಸಿದ ಗೀತೆಯನ್ನು ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದರು.

ಮಧ್ಯಾಹ್ನ 3ಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಡೆಯುವ ಸಂವಾದದಲ್ಲಿ ಉನ್ನತ ಶಿಕ್ಷಣ ಸಚಿವ ಡಾ|ಸಿ.ಎನ್. ಅಶ್ವತ್ಥನಾರಾಯಣ ವಿಷಯ ಮಂಡಿಸುವರು. ವಿವಿಧ ವಿವಿಗಳ ಕುಲಪತಿಗಳು, ಕುಲಸಚಿವರು ಪಾಲ್ಗೊಳ್ಳುವರು. ಸಂಜೆ 5ಕ್ಕೆ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕಲಾತಂಡಗಳಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಲಿದೆ. ಏ. 24ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ನಿರಾಣಿ ಫೌಂಡೇಶನ್‌, ಜಿಲ್ಲಾ ಕೈಗಾರಿಕಾ ಕೇಂದ್ರ, ಎಥ್ನೋಟೆಕ್‌ ಅಕಾಡೆಮಿ ಸಹಯೋಗದಲ್ಲಿ ನಡೆಯುವ ಬೃಹತ್‌ ಉದ್ಯೋಗ ಮೇಳದಲ್ಲಿ ವಿಪ್ರೋ, ಇನ್ಫೋಸಿಸ್‌, ಟಾಟಾ ಮೋಟಾರ್, ಜೆಎಸ್‌ಡಬ್ಲ್ಯೂ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಕನಿಷ್ಠ ಎಸ್ಸೆಸ್ಸೆಲ್ಸಿಯಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡಿದ ಎಲ್ಲಾ ಸಮಾಜದ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ತಿಳಿಸಿದರು.

ವೀರಶೈವ ಮಠಗಳು ಅನ್ನ ದಾಸೋಹ, ಅಕ್ಷರ ದಾಸೋಹಕ್ಕೆ ಪ್ರಸಿದ್ಧಿ ಪಡೆದಿದ್ದರೆ, ಪಂಚಮಸಾಲಿ ಪೀಠ ಪ್ರಪ್ರಥಮವಾಗಿ ನಡೆಸುತ್ತಿರುವ ಉದ್ಯೋಗ ದಾಸೋಹದಲ್ಲಿ 1 ಲಕ್ಷ ಆಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ. ಜಾತಿ, ಮತಗಳ ಭೇದವಿಲ್ಲದೆ ಕನಿಷ್ಠ ಐದು ಸಾವಿರ ಯುವಕರಿಗೆ ಉದ್ಯೋಗ ನೀಡುವ ಗುರಿ ಇದೆ. ಬೆಳಗ್ಗೆ 11ಕ್ಕೆ ‘ಉದ್ಯಮಿಯಾಗು ಉದ್ಯೋಗ ನೀಡು’ ಸಭೆಯಲ್ಲಿ ನೂರಾರು ಯುವ ಉದ್ಯಮಿಗಳು ತಮ್ಮ ಅನುಭವ ಹಂಚಿಕೊಳ್ಳುವರು. ಮಧ್ಯಾಹ್ನ 3ಕ್ಕೆ ನಡೆಯುವ 4ನೇ ವರ್ಷದ ಪೀಠಾರೋಹಣದಲ್ಲಿ ಅದಿಚುಂಚನಗಿರಿಯ ನಿರ್ಮಲಾನಂದ ಶ್ರೀ, ಉಡುಪಿಯ ಪೇಜಾವರ ಶ್ರೀ, ಜೈನ ಸಮುದಾಯದ ಲೋಕೇಶ ಮುನಿಗಳು ಸೇರಿದಂತೆ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸುವರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಭಾಗವಹಿಸುವರು. ಗುರುಪೀಠದ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಭಕ್ತರು, ಪೀಠಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.

ಸುದ್ದಿಗೋಷ್ಠಿಯಲ್ಲಿ ಗುರುಪೀಠದ ಧರ್ಮದರ್ಶಿಗಳಾದ ಬಿ.ಸಿ. ಉಮಾಪತಿ, ಪಿ.ಡಿ. ಶಿರೂರು, ಬಸವರಾಜ್‌ ದಿಂಡೂರ್‌, ಪಂಚಮಸಾಲಿ ರಾಜ್ಯ ಸಂಘದ ಕಾರ್ಯಾಧ್ಯಕ್ಷ ಸೋಮನಗೌಡ ಪಾಟೀಲ್‌, ವಸಂತ ಹುಲ್ಲತ್ತಿ, ಚಂದ್ರಶೇಖರ್‌ ಪೂಜಾರ್‌, ಪ್ರಕಾಶ್‌ ಪಾಟೀಲ್‌, ಎನ್‌.ಜಿ. ನಾಗನಗೌಡ್ರು, ಡಾ| ಸಂಗಮೇಶ ಹೊಳ್ಳ, ಮಹೇಶ ಇತರರು ಇದ್ದರು.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.