ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಿ


Team Udayavani, Mar 30, 2021, 1:52 PM IST

ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸಿ

ದಾವಣಗೆರೆ: ವೈದ್ಯಕೀಯ, ತಾಂತ್ರಿಕ ವಿದ್ಯಾಲಯಗಳಲ್ಲಿನ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸುವ ಅಭಿಯಾನ ಆಯೋಜಿಸುವಂತೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಲಹೆ ನೀಡಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿಅವರು ಮಾತನಾಡಿದರು. ಜಿಲ್ಲೆಯಲ್ಲಿ ತಾಂತ್ರಿಕ,ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿನ ಬೇರೆ ಬೇರೆರಾಜ್ಯಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿಸಿಹೋಗುವಷ್ಟರೊಳಗೆ ಒಬ್ಬೊಬ್ಬ ವಿದ್ಯಾರ್ಥಿಯನ್ನುಕನ್ನಡ ಕಲಿಸುವ ಸಲುವಾಗಿ ದತ್ತು ತೆಗೆದುಕೊಂಡುಕನ್ನಡ ಕಲಿಸುವ ಅಭಿಯಾನವನ್ನು ಜಿಲ್ಲಾ ಜಾಗೃತಿಸಮಿತಿ ಸದಸ್ಯರು ಕೈಗೊಳ್ಳಬೇಕು. ಆಗ ಅದೊಂದುವಿಶಿಷ್ಟ ಕಾರ್ಯಕ್ರಮವಾಗಲಿದೆ ಎಂದರು.

ಸಮಿತಿ ಸದಸ್ಯ ಎನ್‌.ಟಿ. ಎರ್ರಿಸ್ವಾಮಿಮಾತನಾಡಿ, ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಬಳಕೆಸಂಪೂರ್ಣವಾಗಿ ಆಗಬೇಕು. ಜನವರಿಯಲ್ಲಿ ಶುದ್ಧಕನ್ನಡ ಫಲಕ ಬಳಕೆ ಅಭಿಯಾನ ಕೈಗೊಂಡಿದ್ದು ರೈಲ್ವೆ, ನಗರಪಾಲಿಕೆ, ಅಂಚೆ ಕಚೇರಿ ಇತರೆಡೆ ಕನ್ನಡ ಭಾಷೆನಾಮಫಲಕ ಮತ್ತು ಕನ್ನಡ ಭಾಷೆ ಬಳಕೆ ಕುರಿತುಮನವರಿಕೆ ಮಾಡಲಾಗುತ್ತಿದೆ. ಫೆಬ್ರವರಿಯಲ್ಲಿನ್ಯಾಯಾಲಯದಲ್ಲಿ ಕನ್ನಡ ಬಳಕೆ ಅಭಿಯಾನಆರಂಭಿಸಲಾಗಿದೆ. ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಪರಿಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸುವಕೆಲಸದ ಜೊತೆಗೆ ಕನ್ನಡ ಸುಗಮ ಸಂಗೀತ, ಜಾನಪದ,ಹಳೆಯ ಚಲನಚಿತ್ರ ಗೀತೆಗಳನ್ನು ವಿವಿಧೆಡೆ ಪ್ರಸ್ತುತಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ|ಎಚ್‌.ಎಸ್‌. ಮಂಜುನಾಥ್‌ ಕುರ್ಕಿ ಮಾತನಾಡಿ,ಸುಗಮ ಸಂಗೀತ, ಜಾನಪದ, ಚಲನಚಿತ್ರ ಗೀತೆಗಳ ಕಾರ್ಯಕ್ರಮಕ್ಕಾಗಿಯೇ ನಗರ ಪಾಲಿಕೆ ಆವರಣದಲ್ಲಿ ಪುಟ್ಟಣ್ಣ ಕಣಗಲ್‌ ರಂಗಮಂಟಪ ನಿರ್ಮಿಸಲಾಗಿದೆ.ಆದರೆ, ಕಳೆದ 7 ರಿಂದ 8 ವರ್ಷಗಳಿಂದ ಕಾರ್ಯಕ್ರಮನಡೆಯುತ್ತಿಲ್ಲ. ಮತ್ತೆ ಚಾಲನೆ ನೀಡಬೇಕು ಎಂದು ಮನವಿ ಮಾಡಿದರು.

ಸದಸ್ಯರಾದ ಸತ್ಯಭಾಮಾ ಮತ್ತು ದೇವಿಕಾಸುನೀಲ್‌ ಮಾತನಾಡಿ, ಸ್ಥಳೀಯ ಕಲಾವಿದರಿಗೆಆದ್ಯತೆ ನೀಡಿ ಸಂಗೀತ ಕಾರ್ಯಕ್ರಮ ನಡೆಸಬೇಕು.ಖಾಸಗಿ ಮತ್ತು ಸರ್ಕಾರಿ ಕಚೇರಿ ಫಲಕಗಳಲ್ಲಿ ಮೊದಲಿಗೆ ಕನ್ನಡ ನಂತರ ಆಂಗ್ಲ ಭಾಷೆ ° ಬಳಸಬೇಕು ಎಂದು ಸಲಹೆ ನೀಡಿದರು.

ಕೊರೊನಾ ಹಿನ್ನೆಲೆಯಲ್ಲಿ ಸದ್ಯಕ್ಕೆ ಸಾರ್ವಜನಿಕವಾಗಿಹೆಚ್ಚು ಜನರನ್ನು ಸೇರಿಸಿ ಕನ್ನಡ ಸಂಗೀತ ಕಾರ್ಯಕ್ರಮಆಯೋಜನೆ ಬೇಡ. ವಾಯುವಿಹಾರಕ್ಕೆ ಬರುವಉದ್ಯಾನವನಗಳನ್ನು ಗುರುತಿಸಿ ತಿಂಗಳಲ್ಲಿ ವಿವಿಧೆಡೆ 2-3 ಕಾರ್ಯಕ್ರಮಗಳನ್ನು ಸಂಜೆ 6 ರಿಂದ 7 ಗಂಟೆಸುಮಾರು ಒಂದು ಗಂಟೆ ಕಾಲ ಸುಗಮ, ಜಾನಪದ ಮತ್ತು ಹಳೆಯ ಕನ್ನಡ ಚಲನಚಿತ್ರಗೀತೆಗಳನ್ನುಪ್ರಸ್ತುತಪಡಿಸಲು ಕಲಾವಿದರಿಗೆ ವೇದಿಕೆ ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಸಮಿತಿ ಸದಸ್ಯರಾದ ಸಿದ್ದರಾಜು, ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ, ವಾರ್ತಾಧಿಕಾರಿ ಡಿ. ಅಶೋಕ್‌ ಕುಮಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಇತರರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.